Politics: ಕಿಸಾನ್ ಸಮ್ಮಾನ್ ನಿಲ್ಲಿಸಿದ್ದು ಯಾಕೆ?; ಬಿ.ಎಸ್.ಯಡಿಯೂರಪ್ಪ
Team Udayavani, Apr 4, 2024, 11:41 PM IST
ಮಂಡ್ಯ: ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಕೇಂದ್ರ ಸರಕಾರ 6 ಸಾವಿರ ರೂ. ಹಾಗೂ ರಾಜ್ಯ ಸರಕಾರ 4 ಸಾವಿರ ರೂ. ನೀಡುತ್ತಿತ್ತು. ಆದರೆ ರಾಜ್ಯ ಕಾಂಗ್ರೆಸ್ ಸರಕಾರ ಏಕಾಏಕಿ ರೈತರಿಗೆ ಹಣ ನೀಡದೆ ಸ್ಥಗಿತ ಮಾಡಿದೆ. ಜತೆಗೆ ಮಹಿಳೆಯರು ಸ್ವಾಭಿಮಾನದಿಂದ ಜೀವನ ನಡೆಸುವ ಉದ್ದೇಶದಿಂದ ಭಾಗ್ಯಲಕ್ಷ್ಮೀ ಯೋಜನೆಯನ್ನು ತಂದಿದ್ದೆ. ಅದನ್ನು ನಿಲ್ಲಿಸಿದ್ದು ಯಾಕೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶ್ನಿಸಿದರು.
ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಿಂತಿದ್ದರೂ ಕುಮಾರಸ್ವಾಮಿ ಗೆಲ್ಲುತ್ತಿದ್ದರು. ಆದರೆ ನಿಮ್ಮ ಅಪೇಕ್ಷೆಯಂತೆ ಮಂಡ್ಯದಲ್ಲಿ ಸ್ಪರ್ಧಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಗಾಳಿ ಬೀಸುತ್ತಿದ್ದು, ಕುಮಾರಸ್ವಾಮಿ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ಕೊಡುವಂತೆ ಮನವಿ ಮಾಡಿದರು.
ಡಾ| ಮಂಜುನಾಥ್ ಗೆದ್ದರೆ ಉನ್ನತ ಹುದ್ದೆ: ಯಡಿಯೂರಪ್ಪ
ರಾಮನಗರ: ಜನಸೇವೆ ಮೂಲಕ ಇಡೀ ನಾಡಿಗೆ ಮಾದರಿಯಾಗಿರುವ ಡಾ| ಸಿ.ಎನ್.ಮಂಜುನಾಥ್ ಅವರನ್ನು ಅವಿರೋಧವಾಗಿ ಆಯ್ಕೆಮಾಡಬೇಕಿತ್ತು. ವಿಪಕ್ಷಗಳು ಇದನ್ನು ಅರಿತುಕೊಳ್ಳಬೇಕು. ಆದರೆ ಚುನಾವಣೆ ಎದುರಾಗಿದೆ. ಕಾರ್ಯಕರ್ತರು ನಾವೇ ಮಂಜುನಾಥ್ ಎಂಬಂತೆ ಕೆಲಸ ಮಾಡಬೇಕು. ಅವರು ಗೆಲುವು ಸಾಧಿಸಿದರೆ ಉನ್ನತ ಹುದ್ದೆ ಅಲಂಕರಿಸಲಿದ್ದಾರೆ ಎಂದು ಯಡಿಯೂರಪ್ಪ ರಾಮನಗರದಲ್ಲಿ ಭವಿಷ್ಯ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.