ಸಿದ್ದರಾಮಯ್ಯನವರೇ ಪದೇ ಪದೇ ಚಾಮರಾಜಪೇಟೆಗೆ ಭೇಟಿ ನೀಡುವ ಉದ್ದೇಶವೇನು? ಬಿಜೆಪಿ
Team Udayavani, May 22, 2021, 12:20 PM IST
ಬೆಂಗಳೂರು: ಕೋವಿಡ್ ಸಂದರ್ಭವನ್ನು ಬಳಸಿ ಮತ್ತೊಂದು ಮಹಾವಲಸೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿದ್ಧವಾಗಿರುವ ಸೂಚನೆ ಕಂಡುಬರುತ್ತಿದೆ. ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸೋತು, ಬಾದಾಮಿ ಕ್ಷೇತ್ರದ ಶಾಸಕರಾಗಿದ್ದರೂ ಚಾಮರಾಜಪೇಟೆ ಕ್ಷೇತ್ರದ ಮೇಲೆ ವಿಶೇಷ ಒಲವು ತೋರುತ್ತಿರುವುದರ ಹಿಂದಿನ ಉದ್ದೇಶವಾದರೂ ಏನು ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.
ಈ ಬಗ್ಗೆ ಟ್ವೀಟ್ ನಲ್ಲಿ ಪ್ರಶ್ನಿಸಿದ ಬಿಜೆಪಿ, ಕೋವಿಡ್ ಬಂದ ನಂತರ ಬಾದಾಮಿ ಕ್ಷೇತ್ರಕ್ಕೆ ಎಷ್ಟು ಬಾರಿ ಭೇಟಿ ಕೊಟ್ಟಿದ್ದೀರಿ, ಎಷ್ಟು ಲಸಿಕೆ ಹಾಕಿಸಿದ್ದೀರಿ ಎಂಬಿತ್ಯಾದಿ ಜನಪರ ಪ್ರಶ್ನೆ ಕೇಳಿದರೆ ಸಿದ್ದರಾಮಯ್ಯ ಅವರಿಗೆ ಸರ್ವಾಂಗವೂ ಉರಿಯುತ್ತದೆ. ಆದರೆ ಚಾಮರಾಜಪೇಟೆ ಕ್ಷೇತ್ರಕ್ಕೆ ಪದೇ ಪದೇ ಭೇಟಿ ನೀಡುವ ಉದ್ದೇಶವನ್ನಾದರೂ ಸ್ಪಷ್ಟಪಡಿಸಿ ಸಿದ್ದರಾಮಯ್ಯ ಎಂದಿದೆ.
ಇದನ್ನೂ ಓದಿ:ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಲಾಠಿ ಏಟು: 17 ವರ್ಷದ ಬಾಲಕ ಸಾವು, ಪೊಲೀಸರ ಅಮಾನತು
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಟಿಪ್ಪು ಜಯಂತಿ ಆಚರಣೆ, ಶಾದಿಭಾಗ್ಯ ಯೋಜನೆಯನ್ನು ಏಕೆ ಜಾರಿಗೆ ತಂದಿದ್ದು ಎಂಬುದಕ್ಕೆ ಈಗ ಉತ್ತರ ಸಿಗುತ್ತಿದೆ. ಚಾಮರಾಜಪೇಟೆಯಂಥ ಕ್ಷೇತ್ರವನ್ನು ಸಮಯ ಬಂದಾಗ ಅಪ್ಪಿಕೊಳ್ಳುವ ಉದ್ದೇಶಕ್ಕಾಗಿ ಅಲ್ಲವೇ ಸಿದ್ದರಾಮಯ್ಯ ಎಂದು ಬಿಜೆಪಿ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.