ಏಕೆ ತ್ರಿವರ್ಣಧ್ವಜ? : ಸಿಎಂ ಬೊಮ್ಮಾಯಿಯವರಿಗೆ 13 ಪ್ರಶ್ನೆ ಮುಂದಿಟ್ಟ ಸಿದ್ದರಾಮಯ್ಯ
Team Udayavani, Aug 12, 2022, 2:43 PM IST
ಬೆಂಗಳೂರು: ಏಕೆ ತ್ರಿವರ್ಣಧ್ವಜ ಎನ್ನುವ ಸರಕಾರದ ಪತ್ರಿಕಾ ಜಾಹೀರಾತಿನ ಕುರಿತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಸರಣಿ ಪ್ರಶ್ನೆಗಳನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮುಂದಿಟ್ಟಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ, ಏಕೆ ತ್ರಿವರ್ಣಧ್ವಜ? ಎಂಬ ನಿಮ್ಮ ವಿವರಣೆ ಓದಿ ಸಂತೋಷವಾಯಿತು. ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದಕ್ಕಾಗಿ ರಾಜ್ಯದ ಜನರ ಪರವಾಗಿ ನಿಮಗೆ ಧನ್ಯವಾದಗಳು. ಇದರ ಜೊತೆಗೆ ಜನರ ಪರವಾಗಿ ನಾನು ಕೇಳುವ ಹದಿಮೂರು ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರಿಸುವಿರೆಂದು ನಂಬಿದ್ದೇನೆ ಎಂದು ಸರಣಿ ಪ್ರಶ್ನೆಗಳ ಮೂಲಕ ಸರಕಾರದ ವಿರುದ್ಧ ಸಮರ ಮುಂದುವರಿಸಿದ್ದಾರೆ.
ಸಿದ್ದರಾಮಯ್ಯ ಅವರು ಕೇಳಿರುವ ಪ್ರಶ್ನೆಗಳು ಹೀಗಿವೆ
ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆಯನ್ನು ಪಾಲಿಸುವ ಏಕೈಕ ಕಾರಣಕ್ಕಾಗಿ ಸಾಮಾನ್ಯ ಜನರಿಂದ ಬಲಾತ್ಕಾರವಾಗಿ ದುಡ್ಡು ಕಿತ್ತುಕೊಂಡು ರಾಷ್ಟ್ರಧ್ವಜವನ್ನು ಮಾರಾಟ ಮಾಡುತ್ತಿರುವ ನೀವು, ಈ ಮೂಲಕ ರಾಷ್ಟ್ರಧ್ವಜದ ಮೇಲಿನ ಗೌರವಕ್ಕೆ ಕುಂದುತರುತ್ತಿದ್ದೇವೆ ಎಂದು ನಿಮಗೆ ಅನಿಸುವುದಿಲ್ಲವೇ?
ಧ್ವಜ ಸಂಹಿತೆಗೆ ತಿದ್ದುಪಡಿ ತಂದು ಪಾಲಿಸ್ಟರ್ ಬಟ್ಟೆ ಬಳಕೆಗೂ ಅವಕಾಶ ನೀಡಿರುವುದರಿಂದ ಗರಗ ಖಾದಿ ಗ್ರಾಮದ್ಯೋಗ ಕೇಂದ್ರದ ನೂರಾರು ಕಾರ್ಮಿಕರು ಮುಷ್ಕರದಲ್ಲಿ ತೊಡಗಿರುವುದು ನಿಮ್ಮ ಗಮನಕ್ಕೆ ಬಂದಿದೆಯೇ?
ಪಾಲಿಸ್ಟರ್ ಬಟ್ಟೆಯಿಂದ ರಾಷ್ಟ್ರಧ್ವಜ ತಯಾರಿಕೆಗೆ ಅವಕಾಶ ನೀಡುವಾಗ ಇಡೀ ದೇಶಕ್ಕೆ ರಾಷ್ಟ್ರಧ್ವಜ ತಯಾರಿಸಿಕೊಡುತ್ತಿದ್ದ ಹುಬ್ಬಳ್ಳಿಯ ಬೆಂಗೇರಿ ಮತ್ತು ಧಾರವಾಡದ ಗರಗ ಖಾದಿ ಕೇಂದ್ರಗಳಿಗೆ ಆಗುವ ಅನ್ಯಾಯವನ್ನು ನೀವು ಪ್ರಧಾನ ಮಂತ್ರಿಗಳ ಗಮನಕ್ಕೆ ತರಲಿಲ್ಲವೇ?
ಪಾಲಿಸ್ಟರ್ ಬಟ್ಟೆ ಬಳಸಲು ಅವಕಾಶ ನೀಡಿರುವುದು ರಾಷ್ಟ್ರಧ್ವಜವನ್ನು ಜನಪ್ರಿಯಗೊಳಿಸಲಿಕ್ಕಾಗಿಯೇ? ಇಲ್ಲವೇ ನಿಮ್ಮ ಪಕ್ಷದ ಪೋಷಕರಾದ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲಿಕ್ಕಾಗಿಯೇ?
ಮೇಕ್ ಇನ್ ಇಂಡಿಯಾದ ಪ್ರಚಾರ ಮಾಡುವ ಬಿಜೆಪಿ ಸರ್ಕಾರ ಧ್ವಜಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ಬಟ್ಟೆ ಬಳಸಲು ಅವಕಾಶ ನೀಡಿರುವುದರಿಂದ ಚೀನಾದಂತಹ ದೇಶಗಳಿಂದ ಕಡಿಮೆ ಬೆಲೆಯ ರಾಷ್ಟ್ರಧ್ವಜಗಳು ಬಂದು ರಾಶಿಬೀಳುತ್ತಿರುವುದನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ?
ಕಳೆದ 75 ವರ್ಷಗಳಿಂದ ಚಾಲ್ತಿಯಲ್ಲಿದ್ದ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಹತ್ತಿ ಮತ್ತು ರೇಷ್ಮೆ ಬಟ್ಟೆಯ ಬದಲಿಗೆ ಪಾಲಿಸ್ಟರ್ ಬಟ್ಟೆಯಲ್ಲಿಯೂ ರಾಷ್ಟ್ರಧ್ವಜ ತಯಾರಿಸಲು ಅನುಮತಿ ನೀಡಿರುವುದು ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನ ಎಂದು ನಿಮಗೆ ಅನಿಸುವುದಿಲ್ಲವೇ?
ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗಾಗಿ ದೇಶದ ಜನ ತಮ್ಮ ಟ್ವೀಟರ್ ಡಿಪಿಯಲ್ಲಿ ರಾಷ್ಟ್ರಧ್ವಜವನ್ನ ಹಾಕಬೇಕೆಂದು ತಿಳಿಸಿದರೂ ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಮಾತ್ರ ಪ್ರಧಾನ ಮಂತ್ರಿಯವರ ಕರೆಯನ್ನು ಪಾಲಿಸದೆ ಇರಲು ಕಾರಣವೇನು?
ರಾಷ್ಟ್ರಧ್ವಜದ ಬಗೆಗಿನ ನಿಲುವನ್ನು ಆರ್ ಎಸ್ ಎಸ್ ಬದಲಾಯಿಸಿಕೊಂಡು ‘ಹರ್ ಘರ್ ಮೇ ತಿರಂಗಾ’ ಕಾರ್ಯಕ್ರಮವನ್ನು ಬೆಂಬಲಿಸುತ್ತದೆ ಎಂದು ನಿಮಗನಿಸುತ್ತಿದೆಯೇ? ಬದಲಾಯಿಸಿಕೊಂಡಿದ್ದರೆ ಅದಕ್ಕೆ ಕಾರಣಗಳೇನು ಎಂದು ತಿಳಿಸುವಿರಾ?
“ರಾಷ್ಟ್ರಧ್ವಜವನ್ನು ಭಾರತೀಯರು ಒಪ್ಪಲಾರರು, ಮೂರು ಎನ್ನುವುದೇ ಅಪಶಕುನ. ತ್ರಿವರ್ಣಧ್ವಜ ಖಂಡಿತ ದೇಶದ ಮೇಲೆ ಮಾನಸಿಕವಾಗಿ ದುಷ್ಪರಿಣಾಮವನ್ನು ಬೀರಲಿರುವುದು ಮಾತ್ರವಲ್ಲ ಹಾನಿಕಾರಿಯಾಗಬಹುದು” ಎಂದು 1947ರಲ್ಲಿಯೇ ಆರ್.ಎಸ್.ಎಸ್ ಮುಖವಾಣಿ ಆರ್ಗನೈಸರ್ ಪ್ರಕಟಿಸಿದ್ದ ಲೇಖನವನ್ನು ನೀವು ಒಪ್ಪುವಿರಾ?
“ತ್ರಿವರ್ಣ ಧ್ವಜ ಎನ್ನುವುದು ಫ್ರೆಂಚ್ ಕ್ರಾಂತಿಯ ಘೋಷಣೆಗಳಾದ ಸ್ವಾತಂತ್ರ್ಯ, ಸಮಾನತೆ, ಮತ್ತು ಭಾತೃತ್ವದ ಬಗೆಗಿನ ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ಗೀಳಿನಿಂದ ಹುಟ್ಟು ಪಡೆದಿರುವುದು” ಎಂದು ಗೋಲ್ವಾಲ್ಕರ್ ಹೇಳಿರುವುದನ್ನು ಈಗಲೂ ನೀವು ಒಪ್ಪುವಿರಾ?
“ತ್ರಿವರ್ಣ ಧ್ವಜ ರಾಷ್ಟ್ರೀಯ ಮುನ್ನೋಟ, ಸತ್ಯ, ಇತಿಹಾಸ ಇಲ್ಲವೇ ಪರಂಪರೆಯಿಂದ ಪ್ರೇರಣೆ ಪಡೆದು ತಯಾರಿಸಿದ್ದಲ್ಲ, ಇದು ಫ್ರೆಂಚ್ ಕ್ರಾಂತಿಯ ಘೋಷಣೆಗಳ ಎರವಲು” ಎಂದು ಆರ್.ಎಸ್.ಎಸ್ ಸರಸಂಘಚಾಲಕ ಗೋಲ್ವಾಲ್ಕರ್ ತಮ್ಮ ‘ಬಂಚ್ ಆಫ್ ಥಾಟ್ಸ್’ ನಲ್ಲಿ ಹೇಳಿರುವುದನ್ನು ನೀವು ಧಿಕ್ಕರಿಸುತ್ತೀರಾ?
ದೇಶಕ್ಕೆ ತ್ರಿವರ್ಣ ಧ್ವಜ ಅಲ್ಲ ಭಗವಾಧ‍್ವಜವೇ ಇರಬೇಕು ಎಂದು ಪ್ರತಿಪಾದಿಸುತ್ತಿದ್ದ ಆರ್.ಎಸ್.ಎಸ್ ಸರಸಂಘಚಾಲಕರಾದ ಕೆ.ಬಿ.ಹೆಡಗೆವಾರ್, ಎಂ.ಎಸ್ ಗೋಲ್ವಾಲ್ಕರ್ ಅವರ ನಿಲುವಿನ ಬಗ್ಗೆ ನಿಮ್ಮ ಮತ್ತು ನಿಮ್ಮ ಪಕ್ಷದ ಈಗಿನ ಅಭಿಪ್ರಾಯವೇನು?
ಸ್ವತಂತ್ರ ಭಾರತದಲ್ಲಿ 52 ವರ್ಷಗಳ ವರೆಗೆ ದೇಶ ಹೆಮ್ಮೆ ಪಡುವ ರಾಷ್ಟ್ರಧ್ವಜವನ್ನು ಆರ್.ಎಸ್.ಎಸ್ ಕಚೇರಿ ಮೇಲೆ ಹಾರಿಸದೆ ಇರಲು ಕಾರಣವೇನು? 2001ರಲ್ಲಿ ದೇಶಭಕ್ತ ಯುವಕರು ರಾಷ್ಟ್ರಧ‍್ವಜ ಹಾರಿಸಲು ಬಂದಾಗ ಅವರನ್ನು ಹಿಡಿದು ಪೊಲೀಸರಿಗೆ ಕೊಟ್ಟಿರುವುದು ಏಕೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.