ವಿದ್ಯುತ್ ಅವಘಡಗಳಿಂದ ವನ್ಯಪ್ರಾಣಿಗಳ ಸಾವು: ಸರಕಾರಕ್ಕೆ ನೋಟಿಸ್
Team Udayavani, Oct 31, 2022, 10:00 PM IST
ಬೆಂಗಳೂರು: ರಾಜ್ಯದ ವಿವಿಧೆಡೆ ಆನೆಗಳು ಮತ್ತು ವನ್ಯಜೀವಿಗಳು ವಿದ್ಯುತ್ ತಂತಿ ತಗಲಿ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದನ್ನು ತಡೆಯಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ನ್ಯಾಯವಾದಿ ಅಂಕುಶ್ ಎಣ್ಣೆಮಜಾಲ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ| ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಸ್ವಲ್ಪ ಹೊತ್ತು ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಹಿತ ಏಳು ಜನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.