ಮಹಾರಾಷ್ಟ್ರದಲ್ಲಿರುವ ಸಾಂಗ್ಲಿ, ಸೊಲ್ಲಾಪುರವನ್ನು ರಾಜ್ಯಕ್ಕೆ ಸೇರಿಸುತ್ತೇವೆ: ಬೊಮ್ಮಾಯಿ
Team Udayavani, Jan 18, 2021, 1:34 PM IST
ಬೆಂಗಳೂರು: ಮಹಾರಾಷ್ಟ್ರದ ಸಾಂಗ್ಲಿ, ಸೊಲ್ಲಾಪುರದಲ್ಲಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆ ಜಿಲ್ಲೆಗಳನ್ನೂ ರಾಜ್ಯಕ್ಕೆ ಸೇರಿಸುತ್ತೇವೆ. ಮಹಾಜನ್ ವರದಿಯಲ್ಲೂ ಈ ಬಗ್ಗೆ ಹಕ್ಕು ಮಂಡಿಸಿದ್ದೇವೆ. ಈಗಲೂ ಅದಕ್ಕೆ ನಾವು ಬದ್ಧರಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ವಿಕಾಸಸೌಧದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಇಲ್ಲಸಲ್ಲದ ಅನಾವಶ್ಯಕ ಹೇಳಿಕೆ ಕೊಟ್ಟಿದ್ದಾರೆ. ಮಹಾಜನ್ ವರದಿ ಅಂತಿಮವಾಗಿದೆ. ಪಾರ್ಲಿಮೆಂಟ್ ಕೂಡ ಒಪ್ಪಿಕೊಂಡಿದೆ ಎಂದರು.
ಶಾಂತವಾಗಿರುವ ಬೆಳಗಾವಿಯ ಪರಿಸ್ಥಿತಿ ಕದಡಲು ಠಾಕ್ರೆ ಪ್ರಯತ್ನ ನಡೆಸಿದ್ದಾರೆ. ಆದರೆ ಗಡಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟ. ಮಹಾಜನ್ ವರದಿಯೇ ಅಂತಿಮ. ರಾಜ್ಯದ ಒಂದಿಂಚೂ ಭೂಮಿಯನ್ನೂ ಬಿಡುವುದಿಲ್ಲ.ಶಾಂತಿ ಕದಡುವ ಪ್ರಯತ್ನಗಳು ನೀವು ಮಾಡಬೇಡಿ, ಇಂತಹ ಪ್ರಯತ್ನಕ್ಕೆ ನಾವು ಜಗ್ಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ:ಡಬಲ್ ಎಂಜಿನ್ ಗೆ ಬದ್ಧತೆ ಇದ್ದಿದ್ದರೆ ಠಾಕ್ರೆ ಹೇಳಿಕೆ ಖಂಡಿಸಬೇಕಿತ್ತು: ಕುಮಾರಸ್ವಾಮಿ
ಸಂವಿಧಾನ ವಿರುದ್ಧವಾಗಿ ಅವರು ಮಾತನಾಡಿದ್ದಾರೆ. ಒಬ್ಬ ಮುಖ್ಯಮಂತ್ರಿಯಾಗಿ ಜವಾಬ್ದಾರಿ ಮರೆತು ಇಂತಹ ಹೇಳಿಕೆ ಕೊಟ್ಟಿದ್ದಾರೆ. ರಾಜಕೀಯಕ್ಕಾಗಿ ಇಂತಹ ಹೇಳಿಕೆ ಕೊಡುವುದು ಬೇಡ ಎಂದು ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ:ಹುತಾತ್ಮ ದಿನಾಚರಣೆಗೆ ಆಗಮಿಸುತ್ತಿದ್ದ ಮಹಾರಾಷ್ಟ್ರ ಸಚಿವನ ವಾಪಸ್ ಕಳಿಸಿದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.