ಸರ್ಕಾರಿ ಆಸ್ತಿ ನುಂಗಲು ಸರ್ಕಾರದಿಂದಲೇ ಕುಮ್ಮಕ್ಕು; ಅತಿದೊಡ್ಡ ಹಗರಣ ಬಯಲು ಮಾಡುತ್ತೇನೆ: HDK

ಸದನದಲ್ಲಿ ದಾಖಲೆ ಇಟ್ಟು ಮಾತನಾಡುತ್ತೇನೆ ಎಂದ ಎಚ್.ಡಿ.ಕುಮಾರಸ್ವಾಮಿ

Team Udayavani, Sep 12, 2022, 4:04 PM IST

Will expose the biggest scam of state govt says hd kumaraswamy

ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಸರ್ಕಾರದ ಆಸ್ತಿಯನ್ನು ನುಂಗಲು ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ ಎಂದು ಸ್ಫೋಟಕ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಸರಕಾರದ ಅತಿದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುವುದಾಗಿ ಘೋಷಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಕೊಡಿ, ದಾಖಲೆಗಳನ್ನು ಕೊಡಿ ಎಂದು ಪದೇಪದೆ ನನ್ನನ್ನು ಕೆಣಕಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಸರಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು‌‌ ಕಾಂಗ್ರೆಸ್ ಪಕ್ಷ ಸಹಕರಿಸಬೇಕು. ಈ ಸರಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಗೊತ್ತಾಗಬೇಕು. ನಾನು ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಸರಕಾರದ ಹಗರಣಗಳ ಒಂದು ಸ್ಯಾಂಪಲ್ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಕುಮಾರಸ್ವಾಮಿ ಗುಡುಗಿದರು.

ಸದನದ ಸಮಯ ಹಾಳು ಮಾಡಲಾರೆ: ನಾನು ಸುಖಾಸುಮ್ಮನೆ ಸದನ ಸಮಯವನ್ನು ಹಾಳು ಮಾಡಲಾರೆ. ಇವತ್ತಿನ ಜೆಡಿಎಲ್ ಪಿ ಸಭೆಯಲ್ಲಿಯೂ ಈ ವಿಷಯದ ಸೇರಿ ಹಲವಾರು ವಿಚಾರವಾಗಿ ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ಇತ್ತಿಚೆಗೆ ಬೆಂಗಳೂರು ನಗರ ಸೇರಿ 22 ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದರಿಂದ ದೊಡ್ಡ ಮಟ್ಟದ ನಷ್ಟವಾಗಿದೆ. ಬೆಳೆ ಹಾನಿ, ಮನೆ ಕುಸಿತವೂ ಆಗಿದೆ. ಈ ಬಗ್ಗೆ ಸದನದಲ್ಲಿ ವಿವರವಾಗಿ ಚರ್ಚೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಎಚ್ ಡಿಕೆ ಹೇಳಿದರು.

ಪರ್ಸೆಂಟೇಜ್ ಬಗ್ಗೆ ರಾಜ್ಯದ ಉದ್ದಗಲಕ್ಕೂ ಬೀದಿಯಲ್ಲಿ ಚರ್ಚೆ ನಡೆಯುತ್ತಿದೆ. ಅಧಿಕೃತ ವಿರೋಧ ಪಕ್ಷ, ಆಳುವ ಪಕ್ಷಗಳ ನಡುವೆ ರಾಜ್ಯದಲ್ಲಿ ನಡೆಯುತ್ತಿರುವ ಲೂಟಿ ಬಗ್ಗೆ ಬರೀ ಮಾತಿನಲ್ಲಿ ಪೈಪೋಟಿ ನಡೆಯುತ್ತಿದೆ. ನಿಖರವಾಗಿ ದಾಖಲೆಗಳು ಇದ್ದರೆ ಚರ್ಚೆ ಮಾಡಿ ಎಂದು ನಾನು ನಮ್ಮ ಶಾಸಕರಿಗೆ ತಿಳಿಸಿದ್ದೇನೆ. ನಾನು ಕೂಡ ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ. ಸುಖಾಸುಮ್ಮನೆ ಸದನದಲ್ಲಿ ಸಂತೆ ಭಾಷಣ ಮಾಡಿದರೆ ಪ್ರಯೋಜನವಿಲ್ಲ. ಸದನದ ಅಮೂಲ್ಯ ಸಮಯ ಸದುಪಯೋಗ ಮಾಡಿಕೊಳ್ಳುವಂತೆ ಶಾಸಕರಿಗೆ ಸಲಹೆ ನೀಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ:ರಾಜಕಾಲುವೆ ಒತ್ತುವರಿ ಮಾಡಿದವರು ಕ್ರಮ ಅನುಭವಿಸುತ್ತಾರೆ: ಸಿಎಂ ಬೊಮ್ಮಾಯಿ ಎಚ್ಚರಿಕೆ

ಒಂದಿಷ್ಟು ದಾಖಲೆಗಳನ್ನು ನಾನು ಸ್ಯಾಂಪಲ್ ಆಗಿ ಬಹಿರಂಗ ಮಾಡುತ್ತೇನೆ. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಹಣಕ್ಕೋಸ್ಕರ ಮಾರಾಟಕ್ಕೆ ಇಡುತ್ತಿದ್ದಾರೆ. ಇದಕ್ಕೆ ತಡೆ ಹಾಕಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ರೀತಿ ಇದೆ ಎನ್ನುವುದು ನಾಡಿನ‌ ಜನತೆಗೆ ಹಾಗೂ ಪ್ರಧಾನಿ ಮೋದಿ ಅವರಿಗೂ ಗೊತ್ತಾಗಲಿ. ಅದಕ್ಕೆ ಎಲ್ಲದಕ್ಕೂ ದಾಖಲೆ ಇಟ್ಟು ಮಾತನಾಡುತ್ತೇನೆ. ಇದು ಭಾರೀ ಹಗರಣ. ಸರ್ಕಾರಕ್ಕೆ ಬರಬೇಕಾದ ಎಂಟತ್ತು ಸಾವಿರ ಕೋಟಿ ರೂಪಾಯಿ ಕಬಳಿಸುವ ಹುನ್ನಾರ ನಡೆದಿದೆ. ಈ ಸರಕಾರಿ ಆಸ್ತಿಗೆ 2008-09ರಲ್ಲೇ 5 ಸಾವಿರ ಕೋಟಿ ಅಂತ ಅಂದಾಜು ಕಟ್ಟಿದ್ದರು. ಆದರೆ, ಈ ಬಗ್ಗೆ ಸರಕಾರ ಮಾಡಿರುವ ಆದೇಶ ದಿಗ್ಭ್ರಮೆ ಉಂಟು ಮಾಡುವ ರೀತಿಯಲ್ಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ತೃತೀಯ ರಂಗವಲ್ಲ, ಪರ್ಯಾಯ ಶಕ್ತಿ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಜತೆಗಿನ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ತೃತೀಯ ರಂಗ ಅನ್ನೋದು ಪ್ರಶ್ನೆ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ಶಕ್ತಿಯ ಕನಸು ಅವರದ್ದು ಎಂದರು.

ಕೆಸಿಆರ್ ಅವರು ದೇಶದ ಸಮಸ್ಯೆ ಪರಿಹಾರಕ್ಕೆ ಅವರದ್ದೇ ಆದ ಒಂದು ಕಲ್ಪನೆ ಇಟ್ಟುಕೊಂಡಿದ್ದಾರೆ. ರೈತರ ವಿಚಾರದಲ್ಲಿ ಯಾವ ರೀತಿ ಸಹಾಯ ಆಗಬೇಕು, ರಾಷ್ಟ್ರ ಮಟ್ಟದಲ್ಲಿ ಯಾವ ರೀತಿ ಹೋಗಬೇಕು ಎಂಬ ವಿಚಾರ ಇಟ್ಟುಕೊಂಡಿದ್ದಾರೆ. ಇದಕ್ಕಾಗಿ ನಮ್ಮ ಬೆಂಬಲ ಕೋರಿದ್ದಾರೆ. ನಾವು ಅವರ ಜೊತೆ ಕೈ ಜೋಡಿಸುವ ನಿಟ್ಟಿನಲ್ಲಿ ಯೋಚಿಸಲಾಗಿದೆ ಅವರು ಹೇಳಿದರು.

ನಿಖಿಲ್ ಹೇಳಿಕೆಗೆ ಅಪಾರ್ಥ ಬೇಡ: ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು, ನಾನೇ ಅನೇಕ ಬಾರಿ ಹೇಳಿದ್ದೇನೆ. ಈ ಚುನಾವಣೆ ನಮಗೆ ನಿರ್ಣಾಯಕ. ಈ ಚುನಾವಣೆ ಮುಂದಿನ ದಿನಗಳಿಗೆ ಬುನಾದಿ ಇದ್ದಂಗೆ. ಮುಂದಿನ 25 ವರ್ಷಕ್ಕೆ ಏನು ಆಗಬೇಕು ಅನ್ನೋದು ಮುಖ್ಯ. ಅದಕ್ಕಾಗಿ ಈ ಚುನಾವಣೆ ತುಂಬಾ ಮುಖ್ಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

Satish Jaraki

Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?

1-BP-Harish

BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್

School bag

ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.