Rahul Gandhi ಆಕಸ್ಮಿಕವಾಗಿ ಸಿಕ್ಕಿದರೆ ಓಡಿಹೋಗಲು ಆಗುತ್ತದೆಯೇ: ಪರಂ
Team Udayavani, Sep 12, 2024, 12:36 AM IST
ಬೆಂಗಳೂರು: ಅಮೆರಿಕದಲ್ಲಿ ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ, ಹೀಗೆ ಆಕಸ್ಮಿಕವಾಗಿ ಸಿಕ್ಕಿದರು ಅಂತ ಓಡಿ ಹೋಗಲು ಆಗುತ್ತದೆಯೇ? ಎಂದು ಗೃಹಸಚಿವ ಡಾ| ಜಿ. ಪರಮೇಶ್ವರ್ ಪ್ರಶ್ನಿಸಿದರು.
ಅಮೆರಿಕದಲ್ಲಿ ರಾಹುಲ್ ಮತ್ತು ಡಿಕೆಶಿ ಭೇಟಿಯಾದ ಬಗ್ಗೆ ವಿಚಾರದ ಬಗ್ಗೆ ಬುಧವಾರ ಸುದ್ದಿಗಾರರು ಕೇಳಿದಾಗ, “ನಾನೂ ಸಾಮಾಜಿಕ ಜಾಲತಾಣದಲ್ಲಿ ನೋಡಿದೆ. ನನಗೂ ನೋಡಿ ಸಂತೋಷವಾಯಿತು. ಡಿಕೆಶಿ ಕುಟುಂಬ ಸಮೇತ ಹೋಗಿದ್ದಾರೆ. ಒಂದೇ ಹೊಟೇಲ್‌ನಲ್ಲಿ ಸಿಕ್ಕಿದ್ದಾರೆ. ಹೀಗೆ ಆಕಸ್ಮಿಕವಾಗಿ ಸಿಕ್ಕಿದಾಗ ಓಡಿ ಹೋಗಲು ಆಗುತ್ತಾ? ಮುಖಾಮುಖಿಯಾದ ಪರಸ್ಪರ ಮಾತನಾಡಿದ್ದಾರಷ್ಟೇ’ ಎಂದರು.
ರಾಜಕಾರಣದ ಬಗ್ಗೆ ಚರ್ಚಿಸಿಲ್ಲ: ಸಚಿವ ಲಾಡ್
ಡಿ.ಕೆ. ಶಿವಕುಮಾರ್ ನಮ್ಮ ನಾಯಕರು. ಅಮೆರಿಕದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರಲ್ಲಿ ಕುತೂಹಲ ಏನೂ ಇಲ್ಲ. ಅವರಿಬ್ಬರು ಅಲ್ಲಿ ರಾಜ್ಯ ರಾಜಕಾರಣ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿವೆ ಎನ್ನಲಾದ ಹಗರಣಗಳ ಕುರಿತು ತನಿಖೆಗಾಗಿ ಸಮನ್ವಯ ಸಮಿತಿ ರಚಿಸಿದ್ದು, ನನ್ನನ್ನೂ ಸದಸ್ಯನನ್ನಾಗಿಸಿದ್ದಾರೆ. 2 ತಿಂಗಳಲ್ಲಿ ಹಗರಣಗಳ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ತಾಕೀತು ಮಾಡಿದ್ದಾರೆ ಎಂದು ತಿಳಿಸಿದರು.
ಸಿಎಂ ಬದಲಾವಣೆ ಹೇಳಿಕೆ ಬಗ್ಗೆ ಡಿಕೆಶಿ
ಕ್ರಮ ಕೈಗೊಳ್ಳುತ್ತಾರೆ: ಪರಮೇಶ್ವರ್
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅನಗತ್ಯ ಎನ್ನುವುದು ನನ್ನ ವೈಯಕ್ತಿಕ ಭಾವನೆ. ಹೇಳಿಕೆ ಕೊಟ್ಟವರ ಬಗ್ಗೆ ಅಧ್ಯಕ್ಷರು ಗಮನಹರಿಸಲಿದ್ದಾರೆ. ಅಧ್ಯಕ್ಷರು ಅಮೆರಿಕದಿಂದ ಬರಲಿ. ಏನು ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದರು.
ಸಿಎಂ ಸ್ಥಾನದ ಬಗ್ಗೆ ಅನಗತ್ಯ ಚರ್ಚೆಯಾಗುತ್ತಿದೆ. ಆಡಳಿತ ಮಾಡಬೇಕು, ಕೊಟ್ಟ ಭರವಸೆ ಈಡೇರಿಸಬೇಕು. ಇದು ನಮ್ಮ ಆದ್ಯತೆ. ಈ ಮಧ್ಯೆ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ. ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ, ಗ್ಯಾರಂಟಿ ಅನುಷ್ಠಾನ ಬೇಡ ಅಂತ ಮಾಡುತ್ತಿದ್ದಾರೆ. ಇದನ್ನು ಬದಿಗೊತ್ತಿ ನಾವು ಕೆಲಸ ಮಾಡಬೇಕಿದೆ ಎಂದರು.
ಮುಂದಿನ ಸಿಎಂ ಪರಂ!
ಪರಮೇಶ್ವರ್ ಮುಂದಿನ ಸಿಎಂ ಅಂತ ಬೆಂಬಲಿಗರು ಘೋಷಣೆ ಕೂಗಿದ ಪ್ರಸಂಗ ಸದಾಶಿವನಗರದಲ್ಲಿರುವ ಗೃಹಸಚಿವರ ನಿವಾಸದ ಬಳಿ ನಡೆಯಿತು. ಆಗ ಪರಮೇಶ್ವರ “ಸುಮ್ಮನೆ ಇರ್ರೀ’ ಎಂದು ಗದರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.