ಪ್ರಸಕ್ತ ವರ್ಷವೂ ರಾಜ್ಯಕ್ಕೆ ಬರಸಿಡಿಲು?
Team Udayavani, Jul 11, 2017, 2:35 AM IST
ಬೆಂಗಳೂರು: ಇದುವರೆಗಿನ ಪರಿಸ್ಥಿತಿ ಗಮನಿಸಿದರೆ ಪ್ರಸಕ್ತ ವರ್ಷವೂ ಮಳೆ ಕೊರತೆ ಕಾಡುವ ಆತಂಕ ಕಾಣಿಸುತ್ತಿದ್ದು,
ಇನ್ನು 10 ದಿನ ಕಾದು ನೋಡಿ “ಬರ ಪೀಡಿತ’ ಎಂದು ಘೋಷಣೆ ಮಾಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂಗಾರು ಶುರುವಾದಾಗಿನಿಂದ ಇದುವರೆಗೂ ಆಗಿರುವ ಮಳೆಯ ಪ್ರಮಾಣ ನೋಡಿದರೆ ತೀರಾ ಕಡಿಮೆ. ಹೀಗಾಗಿ ಇದೇ ಪರಿಸ್ಥಿತಿ ಮುಂದುವರಿದರೆ ಯೋಚಿಸಬೇಕಾಗುತ್ತದೆ. ರಾಜ್ಯವನ್ನು ಮತ್ತೆ ಬರಗಾಲ ಪೀಡಿತ ಎಂದು ಘೋಷಿಸಬೇಕಾಗುತ್ತದೆ ಎಂದು ಹೇಳಿದರು.
ಮೋಡ ಬಿತ್ತನೆಗೆ ಸರ್ಕಾರದಿಂದ 30 ಕೋಟಿ ರೂ. ಬಿಡುಗಡೆಯಾಗಿದ್ದು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ.
ದಕ್ಷಿಣ ಒಳನಾಡು ಮತ್ತು ಉತ್ತರ ಭಾಗದಲ್ಲಿ ಮಳೆಯ ಕೊರತೆ ಇದೆ. ಹೀಗಾಗಿ, ಮೋಡ ಬಿತ್ತನೆ ಅನಿವಾರ್ಯ ಎಂದು ಸಮರ್ಥಿಸಿಕೊಂಡರು. ಮಂಗಳವಾರದಿಂದ ಕಾವೇರಿ ನದಿ ವಿವಾದ ಪ್ರಕರಣಗಳ ವಿಚಾರಣೆ ನಡೆಯಲಿದ್ದು, ನಮ್ಮ ಪರ ವಕೀಲರು ವಾದ ಮಂಡಿಸಲು ಸಮರ್ಥರಿದ್ದಾರೆ.
ಎಲ್ಲ ರೀತಿಯಿಂದಲೂ ವಾದ ಮಂಡಿಸಲು ತಯಾರಿ ಮಾಡಿಕೊಂಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನೈಸ್ ಸಂಸ್ಥೆಯು ಮಾಡಿಕೊಂಡಿರುವ ಒಪ್ಪಂದದ ಪ್ರಕಾರ ರಸ್ತೆಗಳಲ್ಲಿ ಟೋಲ್ ದರಗಳ ಹೆಚ್ಚಳ ಮಾಡುವಂತಿಲ್ಲ. ದರ ಹೆಚ್ಚಿಸುವ ಮುನ್ನ ನೈಸ್ ಸಂಸ್ಥೆ ಸರ್ಕಾರದ ಅನುಮತಿಯನ್ನೂ ಕೇಳಿಲ್ಲ. ಹೀಗಾಗಿ, ಸರ್ಕಾರ ದಿಂದ ನೋಟಿಸ್ ಜಾರಿ ಮಾಡಲಾಗಿದೆ. ಟೋಲ್ ದರಗಳ ಹೆಚ್ಚಳ ಕುರಿತು ಸ್ಪಷ್ಟನೆ ಕೇಳಲಾಗಿದೆ. ತಪ್ಪು ಸಾಬೀತಾದರೆ ಕ್ರಮ ಕೈಗೊಳ್ಳುತ್ತೇವೆ.
– ಟಿ.ಬಿ.ಜಯಚಂದ್ರ, ಕಾನೂನು ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.