ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಇಂದು ಸಭೆ
Team Udayavani, Feb 13, 2017, 3:45 AM IST
ಬೆಂಗಳೂರು: ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರು ಭಾನುವಾರ ಕೊಪ್ಪಳ, ಚಿಕ್ಕಮಗಳೂರು, ಧಾರವಾಡ, ಹಾವೇರಿ ಜಿಲ್ಲೆಯ ವಿವಿಧೆಡೆ ಮೂರು ತಂಡಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಬನ್ನಿಕೊಪ್ಪ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥ ಡಾ|ಕೆ.ಪೊನ್ನಸ್ವಾಮಿ, ಕೇಂದ್ರಕ್ಕೆ ಬರ ಅಧ್ಯಯನ ವರದಿ ಶೀಘ್ರ ಸಲ್ಲಿಸಲಾಗುವುದು. ಕಳೆದ 16
ವರ್ಷದಲ್ಲಿ 10 ವರ್ಷ ಬರ ಪರಿಸ್ಥಿತಿಯನ್ನು ಕೊಪ್ಪಳ ಜಿಲ್ಲೆ ಎದುರಿಸುತ್ತಿದೆ ಎಂದು ಅಧಿಧಿಕಾರಿಗಳು ಮಾಹಿತಿ ನೀಡಿದ್ದಾರೆ. ಫೆ.13ರಂದು ಬೆಂಗಳೂರಿನಲ್ಲಿ ಉನ್ನತ ಮಟ್ಟದ ಅಧಿಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.
ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಎಸ್.ಬಿ.ತಿವಾರಿ, ಕೇಂದ್ರ ಇಂಧನ ಇಲಾಖೆ ಉಪನಿರ್ದೇಶಕ ಕಮಲ್ ಚವ್ಹಾಣ ಹಾಗೂ ಸಲೀಂ ಹೈದರ್ ಅವರನ್ನೊಳಗೊಂಡ ಕೇಂದ್ರ ಬರ ಅಧ್ಯಯನ ತಂಡ ಹುಬ್ಬಳ್ಳಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ ಕೆಲ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಮಾಹಿತಿ ಪಡೆಯಿತು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ ಹೈದರ್, ಧಾರವಾಡ ಜಿಲ್ಲೆಯಲ್ಲಿ ಭೀಕರ ಬರ ಸ್ಥಿತಿಯಿದ್ದು, ಈ ಕುರಿತು ವಾರದಲ್ಲಿ ವರದಿ ನೀಡಲಾಗುವುದು. ನೀರಿನ ಸಮಸ್ಯೆ ಹೆಚ್ಚಾಗಿದೆ. ಬರದ ಸ್ಥಿತಿ ಅವಲೋಕಿಸಿ ವರದಿ ನೀಡಲಾಗುವುದು ಎಂದರು.
ಕೈ-ಬಾಯಿ ಸನ್ನೆ ಮೂಲಕವೇ ಬರ ದರ್ಶನ
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಬನ್ನಿಕೊಪ್ಪ ರೈತ ಚನ್ನಪ್ಪ ಗೊಂಡಬಾಳ ಅವರ ಜಮೀನಿಗೆ ಭೇಟಿ ನೀಡಿದ ಕೇಂದ್ರ ತಂಡಕ್ಕೆ ರೈತರೊಂದಿಗೆ ಮಾತನಾಡಲು ಭಾಷೆ ಸಮಸ್ಯೆ ಅಡ್ಡಿಯಾಯಿತು. ಈ ಹಿನ್ನೆಲೆಯಲ್ಲಿ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾಧಿಕಾರಿ ಸೇರಿ ಇತರೆ ಅಧಿಕಾರಿಗಳಿಂದಲೇ ಕೇಂದ್ರ ತಂಡ ಬೆಳೆಹಾನಿ ಮಾಹಿತಿ ಪಡೆಯಿತು. ರೈತರು ತಮ್ಮ ಕೈಯಲ್ಲಿ ಒಣಗಿದ ಬೆಳೆ ಹಿಡಿದು, ಇಂತಹ ಪರಿಸ್ಥಿತಿಯಲ್ಲಿ ನಾವಿದ್ದೇವೆ ಎಂದು ತಂಡಕ್ಕೆ ಕೈ-ಬಾಯಿ ಸನ್ನೆ ಮೂಲಕವೇ ಬರದ ಭೀಕರತೆ ದರ್ಶನ ಮಾಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.