Belagavi: 10ತಿಂಗಳ ಗೃಹಲಕ್ಷ್ಮೀ ಹಣ ಕೂಡಿಟ್ಟು ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆ
Team Udayavani, May 22, 2024, 1:27 PM IST
ಬೆಳಗಾವಿ: ರಾಜ್ಯ ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯು ಬಡ ವರ್ಗದ ಹೆಣ್ಣುಮಕ್ಕಳಿಗೆ ಸಾಕಷ್ಟು ಅನುಕೂಲವಾಗಿದ್ದು ಇದೇ ಹಣ ಬಡ ಮಹಿಳೆಯ ಕಣ್ಣಿನ ಶಸ್ತ್ರಚಿಕಿತ್ಸೆಗೆ ನೆರವಾಗಿದೆ.
ರಾಮದುರ್ಗ ತಾಲೂಕಿನ ಸುರೇಬಾನ – ಮನಿಹಾಳ ಗ್ರಾಮದ ಮಹಿಳೆಯೊಬ್ಬರು ಕಳೆದ 10 ತಿಂಗಳ ಗೃಹ ಲಕ್ಷ್ಮೀ ಹಣವನ್ನು ಕೂಡಿಟ್ಟು, ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.
ಮನಿಹಾಳ ಗ್ರಾಮದ ಸಕ್ಕುಬಾಯಿ ಈರಣ್ಣ ಕರದಿನ, ಹಲವು ತಿಂಗಳಿಂದ ಕಣ್ಣಿನ ಸಮಸ್ಯೆ ಎದುರಿಸುತ್ತಿದ್ದರು. ಬಲಗಣ್ಣಿನಲ್ಲಿ ಪೊರೆ ಬಂದಿದ್ದ ಕಾರಣ ಶಸ್ತ್ರಚಿಕಿತ್ಸೆ ಅನಿವಾರ್ಯವಾಗಿತ್ತು.
ಆದರೆ ಹಣಕಾಸಿನ ಸಮಸ್ಯೆಯಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಸುಮ್ಮನಿದ್ದ ಸಕ್ಕುಬಾಯಿ, ಕಳೆದ 10 ತಿಂಗಳಿಂದ ರಾಜ್ಯ ಸರ್ಕಾರದಿಂದ ಬರುತ್ತಿರುವ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಕೂಡಿಟ್ಟು, ಕಳೆದ ವಾರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.
ರಾಮದುರ್ಗದ ಡಾ.ವಿಜಯ್ ಸುಲ್ತಾನ್ ಪುರ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಪತಿ ಈರಣ್ಣ ಕರದಿನ, ನೇಕಾರರಾಗಿ ಕೆಲಸ ಮಾಡುತ್ತಿದ್ದು, ಮೂರು ಮಕ್ಕಳ ಕುಟುಂಬ ಇವರದ್ದಾಗಿದೆ.
ಗೃಹ ಲಕ್ಷ್ಮೀ ಯೋಜನೆ ನಮ್ಮ ಕುಟುಂಬವನ್ನು ಕೈಹಿಡಿತು. ನನ್ನ ಪತ್ನಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು. ಒಟ್ಟು 26 ಸಾವಿರ ಬಿಲ್ ಆಗಿದ್ದು, ಗೃಹ ಲಕ್ಷ್ಮೀ ಯೋಜನೆಯಿಂದ 20 ಸಾವಿರ ರೂಪಾಯಿ ಕೂಡಿಟ್ಟಿದ್ದೇವು. ಹೀಗಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅನುಕೂಲವಾಯಿತು ಎಂದು ಈರಣ್ಣ ಕರದಿನ ಸಂತಸ ವ್ಯಕ್ತಪಡಿಸಿದರು.
ಈ ವೇಳೆ ಗೃಹ ಲಕ್ಷ್ಮೀ ಯೋಜನೆಯ ರೂವಾರಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.