ಮಹಿಳೆಯರಿಗೆ ಶೇ.33 ಮೀಸಲಾತಿಗೆ ಆಗ್ರಹ
Team Udayavani, Mar 14, 2020, 3:03 AM IST
ವಿಧಾನಸಭೆ: ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಆಗ್ರಹಿಸಿದ್ದಾರೆ. ಸಂವಿಧಾನದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ವಿಧೇಯಕ ಅಂಗೀಕಾರವಾಗಿದೆ.
24 ವರ್ಷ ಕಳೆದರೂ ಎರಡೂ ರಾಷ್ಟ್ರೀಯ ಪಕ್ಷಗಳು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳದೇ ಅನಗತ್ಯ ವಿಳಂಬ ಧೋರಣೆ ತಾಳುತ್ತಿವೆ. ಎರಡೂ ರಾಷ್ಟ್ರೀಯ ಪಕ್ಷಗಳು ತಮಗೆ ಮಹಿಳೆಯರ ಬಗ್ಗೆ ಕಾಳಜಿ ಇಲ್ಲ ಎಂದು ಹೇಳಿ ಬಿಡಿ ಎಂದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಹಾಸನ ಜಿಲ್ಲೆಯಲ್ಲಿ ಒಬ್ಬ ಮಹಿಳೆ ಸಭೆ ನಡೆಸಲು ಅವಕಾಶ ಕೊಡುತ್ತಿಲ್ಲ ಎಂದು ನೀವೇ ಆರೋಪ ಮಾಡುತ್ತೀರಿ.
ಇಲ್ಲಿ ಬಂದು ಮಹಿಳಾ ಮೀಸಲಾತಿ ಕೊಡಬೇಕೆಂದು ಹೇಳುತ್ತೀರಿ ಎಂದು ಕಾಲೆಳೆದರು.ಆಗ ಮಧ್ಯ ಪ್ರವೇಶಿಸಿದ ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡ, ರೇವಣ್ಣ ಅವರು ಎದ್ದು ನಿಂತರೆ ಹಾಸನ ಜಿಲ್ಲೆ ಬಿಟ್ಟರೆ ಬೇರೆ ವಿಷಯ ಚರ್ಚೆಯೇ ಆಗುವುದಿಲ್ಲ. ಹಾಸನದ ಬಗ್ಗೆ ಚರ್ಚಿಸಲು ಪ್ರತ್ಯೇಕ ಅಧಿವೇಶನ ನಡೆಸಿಕೊಳ್ಳಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.