![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 11, 2017, 10:45 AM IST
ಮೈಸೂರು: ಭೂ ಸ್ವಾಧೀನಪಡಿಸಿಕೊಂಡ ಜಮೀನಿಗೆ ಸೂಕ್ತ ಪರಿಹಾರ ನೀಡಲು ವಿಫಲವಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಪೀಠೊಪಕರಣಗಳನ್ನು ಜಪ್ತಿ ಮಾಡಿರುವ ಘಟನೆ ಸೋಮವಾರ ನಡೆದಿದೆ.
ಬಡಾವಣೆ ನಿರ್ಮಾಣ ಉದ್ದೇಶಕ್ಕಾಗಿ ಮೈಸೂರು ತಾಲೂಕಿನ ಉತ್ತನಹಳ್ಳಿಯ ರೈತ ಕರಿಯಪ್ಪ ಎಂಬುವರಿಗೆ ಸೇರಿದ 2.24 ಎಕರೆ ಜಮೀನನ್ನು ಮುಡಾ ವತಿಯಿಂದ 1997ರಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ಭೂ ಸ್ವಾಧೀನಪಡಿಸಿಕೊಳ್ಳುವ ಸಂದರ್ಭದಲ್ಲಿ ಪ್ರತಿ ಎಕರೆಗೆ 17 ಲಕ್ಷ ರೂ.ಪರಿಹಾರ ನಿಗದಿ ಪಡಿಸಿ, ಶೇ.25 ಪರಿಹಾರವನ್ನು ನೀಡಲಾಗಿತ್ತು. ಆದರೆ ಬಾಕಿ ಹಣವನ್ನು ನೀಡದ ಹಿನ್ನೆಲೆಯಲ್ಲಿ ಬೇಸತ್ತ ರೈತ ಕರಿಯಪ್ಪ ಪರಿಹಾರದ ಹಣಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು.
ಈ ಹಿನ್ನೆಲೆಯಲ್ಲಿ ಮೈಸೂರಿನ 4ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ರೈತ ಕರಿಯಪ್ಪ ಅವರಿಗೆ 1.03 ಕೋಟಿ ರೂ. ಪರಿಹಾರ ನೀಡುವಂತೆ ಮಾ.25 ರಂದು ಆದೇಶಿಸಿತ್ತು. ಆದರೆ ನ್ಯಾಯಾಲಯದ ಆದೇಶ ದೊರೆತು 15 ದಿನವಾದರೂ ಮುಡಾದಿಂದ ಯಾವುದೇ ಕ್ರಮವಹಿಸಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಅಮೀನರು, ರೈತ ಕರಿಯಪ್ಪ ಅವರ ಪರ ವಕೀಲ ಲೋಕೇಶ್ ಅವರೊಂದಿಗೆ ಮುಡಾ ಭೂಸ್ವಾಧೀನ ಅಧಿಕಾರಿಯ ಕಚೇರಿಯಲ್ಲಿದ್ದ ಪೀಠೊ
ಪಕರಣಗಳನ್ನು ಜಪ್ತಿ ಮಾಡಿದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.