ನಾಳೆ ಪೌರತ್ವ ಕಾಯ್ದೆ ವಿರುದ್ಧ ಕಾರ್ಯಾಗಾರ
Team Udayavani, Jan 15, 2020, 3:05 AM IST
ಬೆಂಗಳೂರು: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯಿದೆ ಜಾಗೃತಿಗೆ ಬಿಜೆಪಿ ಮನೆ ಮನೆ ಭೇಟಿ ಅಭಿಯಾನ ಆರಂಭಿಸಿದ್ದು, ಅದಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಜನ ಜಾಗೃತಿ ಮೂಡಿಸಲು ಜ.16ರಂದು ಪಕ್ಷದ ಪ್ರಮುಖ ನಾಯಕರಿಗೆ ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು.
ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ಪೌರತ್ವ ಕಾಯಿದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ಯೋಜನೆ ಅನುಷ್ಠಾನಗೊಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಬಿಜೆಪಿ ಕಾಯ್ದೆ ಪರ ಜನ ಜಾಗೃತಿ ಮೂಡಿಸಲು ಪ್ರಯತ್ನ ನಡೆಸುತ್ತಿದೆ. ಕಾಂಗ್ರೆಸ್ ಕಾಯ್ದೆಯಲ್ಲಿನ ನಕಾರಾತ್ಮಕ ಅಂಶಗಳ ಬಗ್ಗೆ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಜನಜಾಗೃತಿಗೊಳಿಸಲು ತಾಲೂಕು, ಜಿಲ್ಲಾ ಮಟ್ಟದ ಪಕ್ಷದ ಕಾರ್ಯಕರ್ತರಿಗೆ ತಿಳಿವಳಿಕೆ ಮೂಡಿಸಲಿದೆ.
ಹೀಗಾಗಿ ಶಾಸಕರು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ವಕ್ತಾರರು ಹಾಗೂ ಆಯ್ದ ಮುಖಂಡರಿಗೆ ಜ.16ರಂದು ಕೆಪಿಸಿಸಿ ಕಚೇರಿಯಲ್ಲಿ ಒಂದು ದಿನದ ಕಾರ್ಯಾಗಾರ ಏರ್ಪಡಿಸ ಲಾಗಿದೆ ಎಂದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ಮೇಲ್ಮನೆ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕರು ಪಾಲ್ಗೊಳ್ಳಲಿದ್ದಾರೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Government: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್ಸಿಪಿ ವರಿಷ್ಠ ಶರದ್
Somy Ali: ಸುಶಾಂತ್ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
MP: ಕೊಲೆ ಆರೋಪಿ ಬಂಧನಕ್ಕೆ ಪೊಲೀಸರಿಗೆ ನೆರವಾದ ನೊಣಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.