World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

ಉಡುಪಿ ಜಿಲ್ಲೆ 234 ಕಿ.ಮೀ. ಮಾನವ ಸರಪಳಿ; ಅತೀ ಉದ್ದದ್ದು ಎಂಬ ಹೆಗ್ಗಳಿಕೆ

Team Udayavani, Sep 22, 2024, 6:55 AM IST

1-qwewqwqe

ಬೆಂಗಳೂರು: ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲ ಪಡಿಸುವ ಉದ್ದೇಶದಿಂದ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರವು ಪ್ರಜಾಪ್ರಭುತ್ವ ದಿನಾ ಚರಣೆ ಅಂಗವಾಗಿ ಇತ್ತೀಚೆಗೆ ರಾಜ್ಯವ್ಯಾಪಿ ಹಮ್ಮಿ ಕೊಂಡಿದ್ದ ಮಾನವ ಸರಪಳಿ ಕಾರ್ಯಕ್ರಮ ವಿಶ್ವದಾಖಲೆ ಪುಟ ಸೇರು ವುದರ ಜತೆಗೆ ದೇಶಕ್ಕೆ ಹೊಸ ಸಂದೇಶವನ್ನು ರವಾನಿಸುವಲ್ಲಿ ಯಶಸ್ವಿಯಾಗಿದೆ.

ಸಂವಿಧಾನದ ಆಶಯಗಳನ್ನು ಗಟ್ಟಿ ಗೊಳಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ಕೆ ಇಡೀ ದೇಶ ಹೆಮ್ಮೆಪಟ್ಟಿದ್ದು, ಆ ಮೂಲಕ ಸರಕಾರದ ಉದ್ದೇಶ ಸಾರ್ಥಕವಾಗಿದೆ. ಒಂದಾಗಿ ಬಾಳುವ ಮಂತ್ರವನ್ನು ಪಠಿಸುವುದರ ಜತೆಗೆ ವೈವಿಧ್ಯ ದಲ್ಲಿ ಏಕತೆಯ ಸಂದೇಶ ವನ್ನು ಇಡೀ ಮನು ಕುಲಕ್ಕೆ ಸಾರಿದೆ.

ಸೆ. 15ರಂದು ಬೀದರ್‌ನಿಂದ ಚಾಮ ರಾಜ ನಗರದವರೆಗೆ ಮಾನವ ಸರಪಳಿ ಸೃಷ್ಟಿಯಾಗಿ ಕುವೆಂಪು ಅವರ “ಮನುಷ್ಯ ಜಾತಿ ತಾನೊಂದೇ ವಲಂ’ ಸಂದೇಶವನ್ನು ಇಡೀ ವಿಶ್ವಕ್ಕೆ ನೆನಪಿಸಿತು. ಸುಮಾರು 2,500 ಕಿ.ಮೀ. ಮಾನವ ಸರಪಳಿ ನಿರ್ಮಿಸಿ “ನಾವೆಲ್ಲರೂ ಒಂದೇ’ ಎಂಬ ಸಂದೇಶವನ್ನು ಎಲ್ಲೆಡೆ ಪಸರಿಸಲಾಯಿತು.

ಶಾಲಾ ಕಾಲೇಜು ಮಕ್ಕಳಿಂದ ಹಿಡಿದು ಹಿರಿಯರವರೆಗೆ 25 ಲಕ್ಷಕ್ಕೂ ಹೆಚ್ಚು ಮಂದಿ ಮಾನವ ಸರಪಳಿಯಲ್ಲಿ ಭಾಗವಹಿಸಿ ವಿಶ್ವದಾಖಲೆ ಪುಟ ಸೇರುವಂತೆ ಮಾಡಿದರು.

ಸರಕಾರಕ್ಕೆ ವಿಶ್ವ ದಾಖಲೆ ಆರಂಭಿಕ ಪುರಸ್ಕಾರ
ಮಾನವ ಸರಪಳಿ ಹಬ್ಬದಲ್ಲಿ ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಶಿಕ್ಷಣ ಇಲಾಖೆ ಸಹಿತ 8 ಇಲಾಖೆಗಳು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದವು. ಉಳಿದ 25ಕ್ಕೂ ಹೆಚ್ಚು ಇಲಾಖೆಗಳು ನಾನಾ ರೀತಿಯಲ್ಲಿ ತಮ್ಮದೇ ಸಹಭಾಗಿತ್ವ ನೀಡಿ ಸರಕಾರದ ಸದುದ್ದೇಶವನ್ನು ಸಫ‌ಲಗೊಳಿಸಿದವು. 25 ಲಕ್ಷಕ್ಕೂ ಹೆಚ್ಚು ಮಂದಿ ಹೆಸರು ನೋಂದಾಯಿಸಿ ಮಾನವ ಸರಪಳಿಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಇಂಥ ಯಶಸ್ವಿ ಪ್ರಯೋಗ ವಿಶ್ವದಲ್ಲೇ ಪ್ರಥಮ ಬಾರಿಗೆ ನಡೆದಿದ್ದು, ಇದಕ್ಕೆ ವಿಶ್ವ ದಾಖಲೆ ಆರಂಭಿಕ ಪುರಸ್ಕಾರ ಲಭಿಸಿದೆ. ಲಂಡನ್‌ನಲ್ಲಿರುವ ವಿಶ್ವ ದಾಖಲೆ ಸಂಸ್ಥೆಯ ಕರ್ನಾಟಕ ಪ್ರತಿನಿಧಿ ಶೈಲಜಾ ಅವರು ಬೆಂಗಳೂರಿನಲ್ಲಿ ನಡೆದ ಬೃಹತ್‌ ಹಾಗೂ ವರ್ಣರಂಜಿತ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರ ಹೆಸರಿನಲ್ಲಿ ಪುರಸ್ಕಾರ ನೀಡಿ ಗೌರವಿಸಿದರು.

ಮೆಚ್ಚುಗೆಗೆ ಪಾತ್ರವಾದ ಜಿಲ್ಲೆಗಳು
ರಾಜ್ಯದ 31 ಜಿಲ್ಲೆಗಳ ಪೈಕಿ ಗದಗ ಜಿಲ್ಲೆಯಲ್ಲಿ 2,18,891 ಮಂದಿ ಭಾಗವಹಿಸಿದ್ದು, ಅತೀ ಹೆಚ್ಚು, ಶೇ. 21 ಜನರ ಭಾಗವಹಿಸುವಿಕೆಯೊಂದಿಗೆ ಮುಂಚೂಣಿ ಜಿಲ್ಲೆ ಎಂಬ ಹೆಗ್ಗಳಿಕೆ ಪಾತ್ರವಾಯಿತು. ಉಡುಪಿ ಜಿಲ್ಲೆಯಲ್ಲಿ 234 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಿದ್ದು, ಇದು ಅತೀ ಉದ್ದದ ಮಾನವ ಸರಪಳಿ ಎಂಬ ಹೆಗ್ಗಳಿಕೆ ಗಳಿಸಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿಶೇಷ ವಿನ್ಯಾಸದ ಹಾಗೂ ವಿಭಿನ್ನ ಸಂದೇಶಗಳನ್ನು ಸಾರುವ ಉಡುಗೆ-ತೊಡುಗೆ, ವೇಷಭೂಷಣ ಹಾಗೂ ಕಲಾ ಪ್ರಕಾರಗಳ ಬಳಕೆ ಮಾಡಿ ಪ್ರಜಾಪ್ರಭುತ್ವದ ಮಹತ್ವ ಸಾರಲಾಯಿತು. ಸಂವಿಧಾನದ ಪೀಠಿಕೆ ಓದಿ ಜಾಗೃತಿ ಮೂಡಿಸಲಾಯಿತು. ಐತಿಹಾಸಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯ ವ್ಯಾಪಿ ಸುಮಾರು 10 ಲಕ್ಷ ಗಿಡಗಳನ್ನು° ನೆಡಲಾಯಿತು. ರಾಜಧಾನಿ ಬೆಂಗಳೂರಿನಲ್ಲಿ ಹೊಸಕೋಟೆಯಿಂದ ಹೆಜ್ಜಾಲದ ವರೆಗೆ 60 ಸಾವಿರ ಜನರಿಂದ 92 ಕಿ.ಮೀ. ಮಾನವ ಸರಪಳಿ ಸೃಷ್ಟಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಕಾರ್ಯಕ್ಕೆ ಕೈ ಜೋಡಿಸಲಾಯಿತು.

ಟಾಪ್ ನ್ಯೂಸ್

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

2-madikeri

Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.