Kundapura Kannada ಬದುಕಿನೊಂದಿಗೆ ಬೆಸೆದ ಭಾಷೆ: ಚಿತ್ರನಟ ರಮೇಶ್ ಭಟ್
ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
Team Udayavani, Aug 4, 2024, 11:20 PM IST
ಬೆಂಗಳೂರು: ಕುಂದಾಪುರ ಕನ್ನಡ ಬದುಕಿನೊಂದಿಗೆ ಬೆಸೆದ ಭಾಷೆ. ಅವರು ತಮ್ಮ ತಾಯಿಗೆ ನೀಡುವಷ್ಟೇ ಗೌರವವನ್ನು ಭಾಷೆಗೂ ನೀಡುತ್ತಾರೆ ಎಂದು ಚಿತ್ರನಟ ರಮೇಶ್ ಭಟ್ ತಿಳಿಸಿದರು.
ಬಸವೇಶ್ವರ ನಗರದ ನೇತಾಜಿ ಮೈದಾನದಲ್ಲಿ ಟೀಂ ಕುಂದಾಪುರಿಯನ್ಸ್ ರವಿವಾರ ಹಮ್ಮಿಕೊಂಡಿದ್ದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕುಂದಾಪುರ ಇದು ಬದುಕಿನ ಭಾಷೆಯೇ ಹೊರತು ಉದ್ಯಮದ ಭಾಷೆಯಲ್ಲ. ಹಾಗಾಗಿ ಇಂದಿಗೂ ಕುಂದಾಪುರ ಭಾಷೆ ಜೀವಂತವಾಗಿದೆ. ನಾವು ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಮಾತೃ ಭಾಷೆಯನ್ನು ಮರೆಯಬಾರದು ಎಂದರು.
ಸಮ್ಮಾನ: ಕುಂದಾಪುರ ರತ್ನ ಪ್ರಶಸ್ತಿ ಕಲೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ಸಾಧನೆ ಮಾಡಿದ ಅರೆಹೊಳೆ ಸದಾಶಿವ ರಾವ್, ಚಿತ್ರ ನಿರ್ದೇಶಕ ಯಾಕುಬ್ ಖಾದರ್ ಅವರನ್ನು ಸಮ್ಮಾನಿಸಲಾಯಿತು.
“ಕುಂದಾಪುರ ಸಮ್ಮಾನ’ ಗೌರವವನ್ನು ಯಕ್ಷಗಾನ ಕಲಾವಿದ ಶ್ರೀನಿವಾಸ ಸಾಸ್ತಾನ, ಗೌರಿ ಕೆ., ಮುಳುಗುತಜ್ಞ ಮಂಜುನಾಥ ಕೊಡ್ಲಾಡಿ, ಅಂತಾರಾಷ್ಟ್ರೀಯ ಕ್ರೀಡಾಪಟು ವಿಟuಲ, ಸಮಾಜ ಸೇವೆ ದಿನೇಶ್ ಬಾಂಧವ್ಯ, ಶಿಕ್ಷಣ ಸುಜಾತಾ, ಪ್ರಗತಿ ಪರ ಕೃಷಿಕ ಕೃಷ್ಣ ಕುಲಾಲ್ ಆವರ್ಸೆ ಅವರಿಗೆ ನೀಡಿಲಾಯಿತು.
ಶಾಸಕ ಗುರುರಾಜ್ ಗಂಟಿಹೊಳೆ, ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ನಟಿ ಅಮೃತಾ ರಾಮಮೂರ್ತಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.