ಪತ್ರಿಕಾ ವಿತರಕರೂ “ಇ-ಶ್ರಮ್’ ವ್ಯಾಪ್ತಿಗೆ: ಸಚಿವ ಹೆಬ್ಬಾರ್ ಭರವಸೆ
Team Udayavani, Sep 5, 2021, 6:28 AM IST
ಬೆಂಗಳೂರು: ಯಾವುದೇ ಪರಿಸ್ಥಿತಿಯಲ್ಲೂ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾ ವಿತರಕರ ಬದುಕು ಅಭದ್ರತೆಯಿಂದ ಕೂಡಿದ್ದು, ಅವರನ್ನು ಕೇಂದ್ರ ಸರಕಾರ ಪರಿಚಯಿಸಿರುವ “ಇ-ಶ್ರಮ’ ಪೋರ್ಟಲ್ ವ್ಯಾಪ್ತಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಟಾರ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶನಿವಾರ ಹಮ್ಮಿಕೊಂಡಿದ್ದ ವಿಶ್ವಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮನ್ನೂ ಅಸಂಘಟಿತ ವಲಯ ಎಂದು ಪರಿಗಣಿಸಬೇಕು, ಕಟ್ಟಡ ಕಾರ್ಮಿಕರಿಗೆ ಸಿಗುವ ಸವಲತ್ತು ಹಾಗೂ ವಿಮಾ ಸೌಲಭ್ಯವನ್ನು ನಮಗೂ ನೀಡಬೇಕು ಎಂದು ಪತ್ರಿಕಾ ವಿತರಕರ ಒಕ್ಕೂಟ ಬೇಡಿಕೆ ಸಲ್ಲಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಜತೆ ಸಮಾಲೋಚನೆ ನಡೆಸಲಾಗುವುದು ಎಂದರು.
ಕೀಳರಿಮೆ ಸಲ್ಲದು :
ಯಾವುದೇ ವೃತ್ತಿಯಲ್ಲಿ ಕೀಳರಿಮೆ ಸಲ್ಲದು. ನಾನು ಕೂಡ ಶಾಸಕ, ಸಚಿವನಾಗುವ ಮೊದಲು ಚಾಲಕನಾಗಿದ್ದವನು ಎಂದು ಈಗಲೂ ಹೆಮ್ಮೆಯಿಂದ ಹೇಳುತ್ತಿದ್ದೇನೆ ಎಂದು ಹೇಳಿದರು.
ಸಾಮಾಜಿಕ ಭದ್ರತೆ ನೀಡುವ ಕೆಲಸ:
ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಅವರು ಮಾತನಾಡಿ, ಮನೆ ಮನೆಗೂ ಪತ್ರಿಕೆ ವಿತರಿಸುವವರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರಕಾರ ಕಾರ್ಯ ನಿರ್ವಹಿಸಲಿದೆ ಎಂದರು. ಹಿರಿಯ ಪತ್ರಿಕಾ ವಿತರಕರು ಮತ್ತು ಪತ್ರಿಕೆ ಹಂಚುವವರನ್ನು ಸಮ್ಮಾನಿಸಲಾಯಿತು.
ವಸತಿ ಸಚಿವ ವಿ. ಸೋಮಣ್ಣ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್, ಬಿ. ವಿ. ಮಲ್ಲಿಕಾರ್ಜುನಯ್ಯ, ವಾರ್ತಾ ಇಲಾಖೆ ಆಯುಕ್ತ ಡಾ| ಪಿ.ಎಸ್. ಹರ್ಷ, ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.