![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 1, 2022, 12:24 AM IST
ಬೆಂಗಳೂರು: ತಂಬಾಕು ನಿಯಂತ್ರಣಕ್ಕೆ ಜಾರಿಗೆ ತರಲಾದ ಕೋಟ್ಪಾಕಾಯ್ದೆಯನ್ನು ರಾಜ್ಯಾದ್ಯಂತ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ, ಸಾರ್ವಜನಿಕವಾಗಿ ಧೂಮಪಾನ ಮಾಡುವವರ ವಿರುದ್ಧ ಕಠಿನ ಕೈಗೊಳ್ಳುವಂತಾಗಬೇಕು ಎಂದು ಕ್ಯಾನ್ಸರ್ ತಜ್ಞ ಮತ್ತು ತಂಬಾಕು ಮುಕ್ತ ಕರ್ನಾಟಕ ವೇದಿಕೆಯ ಅಧ್ಯಕ್ಷ ಡಾ| ರಮೇಶ್ ಬಿಳಿಮಗ್ಗ ಸರಕಾರವನ್ನು ಒತ್ತಾಯಿಸಿದರು.
ತಂಬಾಕು ಮುಕ್ತ ಕರ್ನಾಟಕ ವೇದಿಕೆಯ ಸಹಯೋಗದಲ್ಲಿ ಮಂಗಳವಾರ ನಿಮ್ಹಾನ್ಸ್ ಕನ್ವೆನನ್ ಸೆಂಟರ್‌ನಲ್ಲಿ ಹಮ್ಮಿಕೊಂಡ ವಿಶ್ವ ತಂಬಾಕು ರಹಿತ ದಿನಾಚರಣೆ ಹಾಗೂ ಧೂಮಪಾನದ ವಿರುದ್ಧ ಜನಜಾಗೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅಪ್ರಾಪ್ತ ವಯಸ್ಕರಿಗೆ ಸಿಗರೇಟ್ ಅಥವಾ ಇತರ ಉತ್ಪನ್ನಗಳ ಮಾರಾಟ, ಶಿಕ್ಷಣ ಸಂಸ್ಥೆಯ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕಿನ ಮಾರಾಟ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧವನ್ನು ನಿಷೇಧವಿದ್ದರೂ ನಿಯಮ ಉಲ್ಲಂಘಿ ಸಲಾಗುತ್ತಿದೆ. ಈ ಉಲ್ಲಂಘನೆಗಳಿಗೆ ಪ್ರಸ್ತುತ ಕೋಟ್ಪಾ ಅಡಿ ವಿಧಿಸಲಾಗುತ್ತಿರುವ ದಂಡಗಳು ತೀರಾ ಕಡಿಮೆಯಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ವಿಧಿಸುತ್ತಿರುವ ದಂಡವನ್ನು ಏರಿಸುವಂತೆ ಒತ್ತಾಯಿಸಿದರು.
ನಮ್ಮೆಲ್ಲರ ಹೊಣೆ
ಸಂಸದ ಪಿಸಿ ಮೋಹನ್ ಮಾತನಾಡಿ, ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ. ನಮ್ಮ ಯುವ ಜನಾಂಗವನ್ನು ತಂಬಾಕಿನಿಂದ ದೂರವಿರಿಸಿ. ಪರೋಕ್ಷ ಧೂಮಪಾನವನ್ನು ಕಡಿಮೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಸಮಾಜದ ಹಿತದೃಷ್ಠಿಯಿಂದ ನಾವು ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆಗೆ ತಿದ್ದುಪಡಿ ತರಬೇಕಿದೆ. ಒಬ್ಬ ಸಂಸದನಾಗಿ ನಾನು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.