ವಿಮರ್ಶಕ ಡಾ| ಜಿ.ಎಸ್.ಆಮೂರ ಅವರಿಗೆ “ನೃಪತುಂಗ ಸಾಹಿತ್ಯ ಪ್ರಶಸ್ತಿ’
Team Udayavani, Sep 9, 2020, 11:02 PM IST
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2020ನೇ ಸಾಲಿನ “ನೃಪತುಂಗ ಸಾಹಿತ್ಯ ಪ್ರಶಸ್ತಿ’ ಗೆ ಹಿರಿಯ ವಿಮರ್ಶಕ ಡಾ| ಜಿ. ಎಸ್. ಆಮೂರ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 7,00,001 ರೂ. ನಗದು ಮತ್ತು ಪುರಸ್ಕಾರವನ್ನು ಒಳಗೊಂಡಿದೆ. ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ಜರಗಿದ ಆಯ್ಕೆ ಸಮಿತಿಯು ಆಮೂರ ಹೆಸರನ್ನು ಈ ಪ್ರಶಸ್ತಿಗೆ ಪರಿಗಣಿಸಿದೆ.
ಆಯ್ಕೆ ಸಮಿತಿಯಲ್ಲಿ ಹಿರಿಯ ಕವಿ ಜರಗನಹಳ್ಳಿ ಶಿವಶಂಕರ್, ವಿಮರ್ಶಕ ಡಾ| ಎಸ್. ಆರ್. ವಿಜಯಶಂಕರ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಮೊಹಮ್ಮದ್ ಹಫೀಜುಲ್ಲಾ, ಉಪ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಮಥುರಾ ರಾಡ್ರಿಕ್ಸ್ ಮತ್ತಿತರರು ಇದ್ದರು.
ಮಯೂರವರ್ಮ ಪ್ರಶಸ್ತಿ
ಇದರ ಜತೆಗೆ ಸಾಹಿತ್ಯ ಕ್ಷೇತ್ರದ ವಿವಿಧ ಪ್ರಕಾರಗಳಲ್ಲಿ ಸಾಧನೆ ಮಾಡಿದ ಯುವ ಸಾಹಿತಿಗಳಿಗೆ ನೀಡುವ “ಮಯೂರವರ್ಮ ಸಾಹಿತ್ಯ ಪ್ರಶಸಿ’¤ಗೆ ಡಾ| ಧನಂಜಯ ಕುಂಬ್ಳೆ, ಅಕ್ಷತಾ ಕೃಷ್ಣಮೂರ್ತಿ, ಡಾ| ಸಂತೋಷ ಹಾನಗಲ್ಲ, ವನಿತಾ ಎನ್. ಶೇಟ್ ಹಾಗೂ ಆರ್. ಪ್ರಭಾಕರ್ ಅವರು ಆಯ್ಕೆ ಆಗಿದ್ದಾರೆ. ಪ್ರಶಸ್ತಿ 25 ಸಾ.ರೂ. ಮತ್ತು ಪುರಸ್ಕಾರ ಒಳಗೊಂಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಹೇಳಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ
Congress: ಜಮೀರ್ ವಿರುದ್ಧ ಕೈಕಮಾಂಡ್ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.