ಚಿನ್ನಮ್ಮನ ಬೆಂಗಳೂರು ವಾಸ ಅಂತ್ಯ: ತಮಿಳುನಾಡಿನತ್ತ ಹೊರಟ ವಿ.ಕೆ. ಶಶಿಕಲಾ
Team Udayavani, Feb 8, 2021, 8:22 AM IST
ಬೆಂಗಳೂರು: ಜೈಲು ವಾಸ ಮುಗಿಸಿರುವ ತಮಿಳರ ಚಿನ್ನಮ್ಮ, ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ.ಕೆ. ಶಶಿಕಲಾ ಇಂದು ತಮಿಳುನಾಡಿಗೆ ಹೊರಟಿದ್ದಾರೆ. ಇದರೊಂದಿಗೆ ಚಿನ್ನಮ್ಮನ ಕೆಲವು ವರ್ಷಗಳ ಬೆಂಗಳೂರು ವಾಸ ಇಂದಿಗೆ ಅಂತ್ಯವಾಗಿದೆ.
ಕಳೆದೊಂದು ವಾರದಿಂದ ನಗರದ ಪ್ರೆಸ್ಟಿಜ್ ಗಾಲ್ಫ್ ಶೈರ್ ಕ್ಲಬ್ ನಲ್ಲಿ ಕಾಲ ಕಳೆದಿದ್ದ ಶಶಿಕಲಾ ಇಂದು ಬೆಳಗ್ಗೆ ತಮಿಳುನಾಡಿನತ್ತ ಹೊರಟಿದ್ದಾರೆ. ಅತ್ತಿಬೆಲೆ, ಹೊಸೂರು ಮಾರ್ಗವಾಗಿ ಶಶಿಕಲಾ ತಮಿಳುನಾಡಿಗೆ ಹೋಗಲಿದ್ದಾರೆ.
ಮಾರ್ಗಮಧ್ಯೆ ಸಾವಿರಾರು ಮಂದಿ ಬೆಂಬಲಿಗರು ಸೇರಿದ್ದು, ಶಶಿಕಲಾ ಅವರನ್ನು ವೈಭವದಿಂದ ಸ್ವಾಗತಿಸಲು ಸಿದ್ದತೆ ನಡೆಸಿದ್ದಾರೆ. ಶಶಿಕಲಾ ಬೆಂಬಲಿಗರು ಬೆಂಗಳೂರಿನಲ್ಲಿ ಹಾಕಿದ್ದ ತಮಿಳು ಬ್ಯಾನರ್ ಗಳನ್ನು ಕನ್ನಡ ಪರ ಸಂಘಟನೆ ಕಾರ್ಯಕರ್ತರು ರವಿವಾರ ಕಿತ್ತು ಹಾಕಿದ ಘಟನೆಯೂ ನಡೆದಿತ್ತು.
ಇದನ್ನೂ ಓದಿ:ಕಮಲಾ ಸೊಸೆ ಮೀನಾಕ್ಷಿ ಬೈಡೆನ್‌ಗೆ ತಲೆನೋವಾಗುತ್ತಿದ್ದಾರಾ?
ದೂರು: ವಿ.ಕೆ. ಶಶಿಕಲಾ ತಮಿಳುನಾಡಿ ನಾದ್ಯಂತ ಹಿಂಸೆ ನಡೆಸಲು ಸಂಚು ರೂಪಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಡಳಿತ ಪಕ್ಷ ಭಾನುವಾರ ಪೊಲೀಸರಿಗೆ ದೂರು ನೀಡಿದೆ.
ಏಪ್ರಿಲ್- ಮೇನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿ ರುವ ಹಿನ್ನೆಲೆಯಲ್ಲಿ ದಿ.ಜಯಲಲಿತಾ ಆಪ್ತೆ ರಾಜಕೀಯವಾಗಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಅಂಶ ಇನ್ನೂ ಸ್ಪಷ್ಟವಾಗಿಲ್ಲ. ಎಐಎಡಿಎಂಕೆ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಅಮ್ಮಾ ಮಕ್ಕಳ್ ಮುನ್ನೇತ್ರ ಕಳಗಂ ಪಕ್ಷದ ಸಂಸ್ಥಾಪಕ, ಶಾಸಕ ಟಿ.ಟಿ.ವಿ.ದಿನಕರನ್, ಇದು ತೇಜೋವಧೆಯ ತಂತ್ರ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.