Yakshagana Academy ಪ್ರಾಧಿಕಾರವಾಗಿ ಯಕ್ಷಗಾನ ಅಕಾಡೆಮಿ: ಭಂಡಾರಿ ಸಲಹೆ
Team Udayavani, Jul 28, 2024, 11:40 PM IST
ಬೆಂಗಳೂರು: ಯಕ್ಷಗಾನ ಅಕಾಡೆಮಿಯನ್ನು ಪ್ರಾಧಿಕಾರವನ್ನಾಗಿ ಮಾಡಿ 50 ಕೋ.ರೂ. ಅನುದಾನದ ಬೇಡಿಕೆ ಕುರಿತು ಮುಖ್ಯಮಂತ್ರಿಗಳ ಹಾಗೂ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ವಿಧಾನಪರಿಷತ್ತಿನಲ್ಲಿ ಸದಸ್ಯ ಡಾ| ಮಂಜುನಾಥ ಭಂಡಾರಿ ಯಕ್ಷಗಾನ ಅಕಾಡೆಮಿಯನ್ನು ಪ್ರಾಧಿಕಾರವಾಗಿಸುವಂತೆ ಸಲಹೆ ನೀಡಿದ್ದರು. ಸಚಿವರು ಉತ್ತರಿಸಿ, ಕರ್ನಾಟಕ ಜನಪದ ಅಕಾಡೆಮಿಯಿಂದ ಪ್ರತ್ಯೇಕಿಸಿ ಯಕ್ಷಗಾನ ಅಕಾಡೆಮಿ ಹಾಗೂ ಬಯಲಾಟ ಅಕಾಡೆಮಿ ರಚಿಸಲಾಗಿದೆ. ಪಡುವಲಪಾಯ, ಮೂಡಲಪಾಯ, ತೆಂಕು, ಬಡಗು, ಬಡಾಬಡಗು, ಗೊಂಬೆಯಾಟ ಮೊದಲಾದ ಪ್ರಕಾರಗಳಿವೆ. ಅಕಾಡೆಮಿಯಲ್ಲಿ ಯಕ್ಷಗಾನದ ಉತ್ತೇಜನಕ್ಕೆ ಎಲ್ಲ ಪ್ರಯತ್ನ ಮಾಡಲಾಗಿದೆ. ಪ್ರತೀ ವರ್ಷ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
ಪ್ರಾಧಿಕಾರಕ್ಕಿಂತ ಹೆಚ್ಚಿನ ಕೆಲಸ ಮಾಡಲಾಗುತ್ತಿದೆ. ವರ್ಷಕ್ಕೆ 40 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ ಎಂದರು.
ಡಾ| ಭಂಡಾರಿ ಪ್ರತಿಕ್ರಿಯಿಸಿ, 2,500 ವರ್ಷಗಳ ಪಾರಂಪರಿಕ ಇತಿಹಾಸ ಹೊಂದಿರುವ ಯಕ್ಷಗಾನ ವಿಶಿಷ್ಟ ಕಲೆ. ಡಾ| ಶಿವರಾಮ ಕಾರಂತ, ಡಾ| ಕು.ಶಿ. ಹರಿದಾಸ ಭಟ್ಟರಂತಹವರಿಂದ ಸಂಶೋಧನೆಗೆ ಒಳಗಾಗಿದೆ. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಂಸ್ಥೆ ನೇತೃತ್ವದಲ್ಲಿ 8 ಸಾವಿರ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ. ಆದ್ದರಿಂದ ಅಕಾಡೆಮಿಯ ಅನುದಾನ ಸಾಲದು. ಯಕ್ಷಗಾನ ಪರಂಪರೆ ಮುಂದಿನ ಪೀಳಿಗೆಗೆ ಮುಂದುವರಿಯಲು ಪಠ್ಯ ರಚನೆ ಸೇರಿದಂತೆ ಅನೇಕ ಕೆಲಸಗಳಾಗಬೇಕು. ಜಗತ್ತಿನ ಮ್ಯೂಸಿಯಂನಲ್ಲಿ ಯಕ್ಷಗಾನದ ದಾಖಲೀಕರಣಕ್ಕೆ ಅವಕಾಶ, ಹಿರಿಯ ಕಲಾವಿದರಿಗೆ ಸಂಭಾವನೆ, ಕಲಾವಿದರ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ಆದ್ದರಿಂದ ಪ್ರಾಧಿಕಾರ ರಚಿಸಿ ವಾರ್ಷಿಕ 50 ಕೋ.ರೂ. ಅನುದಾನ ಮೀಸಲಿಡಬೇಕು. ವಿಶ್ವಕ್ಕೆ ಯಕ್ಷಗಾನದ ಮೆರುಗನ್ನು ನೀಡಬೇಕು ಎಂದು ಪ್ರತಿಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.