ಯಶ್ ಭೇಟಿಯಾಗಲಿಲ್ಲ ಎಂದು ಬೆಂಕಿ ಹಚ್ಚಿಕೊಂಡ ಅಭಿಮಾನಿ !; ಚಿಂತಾಜನಕ
Team Udayavani, Jan 8, 2019, 10:43 AM IST
ಬೆಂಗಳೂರು: ಜನ್ಮ ದಿನದಂದು ನೆಚ್ಚಿನ ನಟ ರಾಕಿಂಗ್ ಸ್ಟಾರ್ ಯಶ್ ಭೇಟಿಯಾಗಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಅಭಿಮಾನಿಯೊಬ್ಬ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ರವಿ ಎಂಬಾತ ಹೊಸಕೆರೆಳ್ಳಿಯ ಯಶ್ ನಿವಾಸದ ಬಳಿ ಆಗಮಿಸಿದ್ದು , ಭೇಟಿಗೆ ಯತ್ನಿಸಿದ್ದಾನೆ. ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.
ಬೆಂಕಿ ಹೊತ್ತಿ ಉರಿಯುತ್ತಿರುವಾಗಲೇ ರಸ್ತೆ ದಾಟಿದ್ದು, ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಿತಿ ಚಿಂತಾಜನಕವಾಗಿದೆ.
75% ಸುಟ್ಟಗಾಯಗಳಿಗೊಳಗಾಗಿರುವ ರವಿ ಬದುಕುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗಿದೆ.
ರವಿ ಮೊದಲೇ ಸೀಮೆ ಎಣ್ಣೆ ತಂದು ಆತ್ಮ ಹತ್ಯೆ ಮಾಡಿಕೊಳ್ಳುವ ಸಲುವಾಗಿಯೇ ಬಂದಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ರೆಬೆಲ್ ಸ್ಟಾರ್ ಅಂಬರೀಶ್ ಅವರು ನಿಧನರಾಗಿರುವ ಹಿನ್ನಲೆಯಲ್ಲಿ ನನ್ನ ಹುಟ್ಟು ಹಬ್ಬವನ್ನು ಆಚರಿಸಲು ಇಷ್ಟವಿಲ್ಲ . ಯಾರೂ ಅನ್ಯಥಾ ಭಾವಿಸಬೇಡಿ. ಆದಷ್ಟು ಬೇಗ ನಿಮ್ಮ ಊರುಗಳಿಗೆ ಯಶೋ ಯಾತ್ರೆ ಮಾಡಿ ಅಭಿಮಾನಿಗಳನ್ನು ಕಾಣುತ್ತೇನೆ.ಅಲ್ಲಿಯವರೆಗೆ ತಾಳ್ಮೆಯಿಂದಿರಿ ಎಂದು ಯಶ್ ವಿಡಿಯೋ ಮೂಲಕ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.