ಬಿಎಸ್‌ವೈ ಕಾದರೂ ಭಿನ್ನರು ಬರಲಿಲ್ಲ!

Team Udayavani, Jan 20, 2017, 3:45 AM IST

19-KPN-4.jpg

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿರುವ ಭಿನ್ನಮತ ಮತ್ತಷ್ಟು ತಾರಕಕ್ಕೇರುವ ಲಕ್ಷಣ ಕಾಣಿಸಿಕೊಂಡಿದೆ. ಅತೃಪ್ತಿ ಶಮನಕ್ಕೆ
ಗುರುವಾರ ಪಕ್ಷದ ರಾಜ್ಯಾಧ್ಯಕ್ಷ ಬಿ. ಎಸ್‌.ಯಡಿಯೂರಪ್ಪ ಕರೆದಿದ್ದ ಸಭೆಗೆ ಅತೃಪ್ತ ಮುಖಂಡರು ಗೈರು ಹಾಜರಾಗುವ ಮೂಲಕ ಸೆಡ್ಡು ಹೊಡೆದಿ ದ್ದಾರೆ. ಅಲ್ಲದೆ, ತಾವು ಈ ಹಿಂದೆ ಪತ್ರದಲ್ಲಿ ಪ್ರಸ್ತಾಪಿಸಿದ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ  ಎಂದಾದರೆ
ಮಾತುಕತೆ ನಡೆಸಿ ಪ್ರಯೋಜನವಿಲ್ಲ. ಏನೇ ಇದ್ದರೂ ಈ ವಿಚಾರದಲ್ಲಿ ಹೈಕಮಾಂಡೇ ತೀರ್ಮಾನ ಕೈಗೊಳ್ಳಲಿ ಎಂದು ಮತ್ತೂಂದು
ಪತ್ರವನ್ನು ಕೆಲವು ಅತೃಪ್ತರು ಬರೆದಿದ್ದಾರೆ ಎನ್ನಲಾಗಿದೆ. ಭಿನ್ನಮತೀಯರ ಈ ನಡವಳಿಕೆಯಿಂದ ಕೆರಳಿರುವ ಯಡಿಯೂರಪ್ಪ, ಇನ್ನು ಮುಂದೆ ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಕೊಂಡೊಯ್ದರೆ ಅದನ್ನು ಹೈಕಮಾಂಡ್‌ ಗಮನಕ್ಕೆ ತಂದು ಶಿಸ್ತು
ಕ್ರಮ ಜರುಗಿಸುವ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಇದರೊಂದಿಗೆಜ.21ಮತ್ತು 22ರಂದು ಕಲಬುರಗಿಯಲ್ಲಿ ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಣಿ ವೇಳೆಗೆ ಭಿನ್ನಮತ
ತಾತ್ಕಾಲಿಕವಾಗಿ ಶಮನವಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಅಲ್ಲದೆ, ಕಾರ್ಯಕಾರಿಣಿಯಲ್ಲೂ ಭಿನ್ನಮತದ
ವಿಚಾರ ಪ್ರತಿಧ್ವನಿಸುವ ಸಾಧ್ಯತೆ ಕಾಣಿಸಿಕೊಂಡಿದೆ. ಯಡಿಯೂರಪ್ಪ ಅವರ ಒಟ್ಟಾರೆ ಕಾರ್ಯವೈಖರಿ ಬಗ್ಗೆ ಅಸಮಾಧಾನ
ವ್ಯಕ್ತಪಡಿಸಿ ಕೆಲವು ಹಾಲಿ ಮತ್ತು ಮಾಜಿ ಶಾಸಕರನ್ನು ಒಳಗೊಂಡಂತೆ 24 ಮಂದಿ ಮುಖಂಡರು ಇತ್ತೀಚೆಗೆ ತೀಕ್ಷ್ಣವಾಗಿ ಪತ್ರ ಬರೆದಿದ್ದರು. 

ಪ್ರಸಕ್ತ ಬೆಳವಣಿಗೆಗಳಿಂದಾಗಿ ಪಕ್ಷದ ಕಾರ್ಯಕರ್ತರಲ್ಲಿ ಕ್ಷೋಭೆ ಉಂಟಾಗಿದೆ. ಹಲವು ಜಿಲ್ಲೆಗಳಲ್ಲಿ ಪಕ್ಷದಲ್ಲೇ ಎರಡು ಗುಂಪುಗಳಾಗಿವೆ. ಪರಸ್ಪರರು ಮುಖ ನೋಡದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಪಕ್ಷದ ಮೇಲೆ ದುಷ್ಪರಿಣಾಮ ಉಂಟಾಗಲಿದೆ
ಎಂದು ಎಚ್ಚರಿಕೆಯನ್ನೂ ನೀಡಿದ್ದರು. ಪತ್ರ ಬರೆದವರೆಲ್ಲರೂ ಮೂಲ ಬಿಜೆಪಿಯವರಾಗಿದ್ದರಿಂದ ಆ ಪತ್ರ ಬಹಿರಂಗವಾಗುತ್ತಿದ್ದಂತೆ
ಯಡಿಯೂರಪ್ಪ ಅವರು 24 ಮಂದಿಯ ಪೈಕಿ 12 ಮಂದಿಯನ್ನು ಗುರುವಾರ ಮಾತುಕತೆಗೆ ಬರುವಂತೆ ಆಹ್ವಾನಿಸಿದ್ದರು. ಆದರೆ, ತುಮಕೂರಿನಲ್ಲಿ ಬುಧವಾರ ನಡೆದ ಸಭೆಯಲ್ಲಿ ಗುರುವಾರದ ಸಭೆಗೆ ಗೈರು ಹಾಜರಾಗಲು ಭಿನ್ನಮತೀಯರು ತೀರ್ಮಾನಿಸಿದ್ದರು.

ಬಿಎಸ್‌ವೈ ಕಾದರೂ ಯಾರೂ ಬರಲಿಲ್ಲ:
ಸಂಜೆ 3.30ಕ್ಕೆ ಭಿನ್ನಮತೀಯರೊಂದಿಗೆ ಸಭೆಗೆ ಯಡಿಯೂರಪ್ಪ ಸಮಯ ನಿಗದಿಪಡಿಸಿದ್ದರಾದರೂ ಗಂಟೆ ನಾಲ್ಕಾದರೂ ಯಾರೂ ಬರಲಿಲ್ಲ. 5 ಗಂಟೆ ವೇಳೆಗೆ ಯಡಿಯೂರಪ್ಪ ಅವರು ಬಂದರೂ ಭಿನ್ನಮತೀಯ ಗುಂಪಿನ ಯಾರೂ ಕಾಣಿಸಿಕೊಳ್ಳಲಿಲ್ಲ. ಹೀಗಾಗಿ, ಯಡಿಯೂರಪ್ಪ ಅವರು ಸಾಕಷ್ಟು ಹೊತ್ತು ಕಚೇರಿಯಲ್ಲೇ ಕುಳಿತು ಅವರಿಗಾಗಿ ಕಾಯುತ್ತಿದ್ದರು. ಈ ಸಂದರ್ಭದಲ್ಲಿ ಸಭೆಗೆ ಏಕೆ ಬರುತ್ತಿಲ್ಲ ಎಂಬ ಬಗ್ಗೆ ಭಿನ್ನಮತೀಯರು ಬರೆದಮತ್ತೂಂದು ಪತ್ರ ಕೈಸೇರಿತು. ಬಳಿಕ, ಅವರು ಪಕ್ಷದ ರಾಜ್ಯ ಕಾರ್ಯಕಾರಿಣಿ
ಕುರಿತ ಪೂರ್ವಸಿದಟಛಿತೆಗಳ ಬಗ್ಗೆ ಕೆಲವು ಮುಖಂಡರೊಂದಿಗೆ ಚರ್ಚಿಸಿ ವಾಪಸಾದರು ಎಂದು ತಿಳಿದು ಬಂದಿದೆ. ತಮ್ಮ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದಿದ್ದ 24 ಮಂದಿಯ ಪೈಕಿ 12 ಮಂದಿಯನ್ನು ಗುರುವಾರದ ಸಭೆಗೆ ಯಡಿಯೂರಪ್ಪ ಅವರು ಆಹ್ವಾನಿಸಿದ್ದರು. ವಿಧಾನ ಪರಿಷತ್ತಿನ ಹಾಲಿ ಸದಸ್ಯರಾದ ಎಂ.ಬಿ.ಭಾನುಪ್ರಕಾಶ್‌, ಸೋಮಣ್ಣ ಬೇವಿ
ನಮರದ, ಡಾ.ಎ.ಎಚ್‌.ಶಿವಯೋ ಗಿಸ್ವಾಮಿ, ಸಿದ್ದರಾಜು, ವಿಧಾನಸಭೆಯ ಹಾಲಿ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ, 
ಮಾಜಿ ಸದಸ್ಯರಾದ ನಿರ್ಮಲ್‌ಕುಮಾರ್‌ ಸುರಾನಾ, ಎಸ್‌.ಎ.ರವೀಂದ್ರನಾಥ್‌, ನೇಮಿರಾಜ ನಾಯ್ಕ, ಬಿಜೆಪಿ
ಮುಖಂಡರಾದ ಮೈಸೂರಿನ ಮೈ.ವಿ.ರವಿಶಂಕರ್‌, ಶಿವಮೊಗ್ಗದ ಗಿರೀಶ್‌ ಪಟೇಲ್‌, ಬಾಗಲಕೋಟೆಯ ಅಶೋಕ್‌ ಗಸ್ತಿ, ಕೃಷ್ಣಾರೆಡ್ಡಿ ಅವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

ಹೊಸ ಪತ್ರದಲ್ಲೇನಿದೆ?
ಮಾಜಿ ಸಚಿವ ಸೊಗಡು ಶಿವಣ್ಣ ಮತ್ತು ಎಂ.ಬಿ.ನಂದೀಶ್‌ ಅವರಿಗೆ ನೀಡಿರುವ ನೋಟಿಸ್‌ ಹಿಂಪಡೆಯಬೇಕು. ಹೊನ್ನಾಳಿಯ ಮಂಡಲ
ಅಧ್ಯಕ್ಷ ಹನುಮಂತಪ್ಪ ಅವರನ್ನು ಅಮಾನತು ಮಾಡಿರುವ ಹಾಗೂ ಇನ್ನಿತರ ಪಕ್ಷ ನಿಷ್ಠ ಕಾರ್ಯಕರ್ತರ ಮೇಲೆ ತೆಗೆದುಕೊಂಡ
ಕ್ರಮ ಕೈಬಿಡಬೇಕು. ಜತೆಗೆ, ರಾಜ್ಯ ವಕ್ತಾರರು, ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷ-ಪ್ರಧಾನ ಕಾರ್ಯದರ್ಶಿಗಳ ಆಯ್ಕೆ,
ಜಿಲ್ಲಾ ಅಧ್ಯಕ್ಷ-ಪ್ರಧಾನ ಕಾರ್ಯ ದರ್ಶಿಗಳನ್ನು ಯಾರೊಂದಿಗೂ ಚರ್ಚಿಸದೆ ಏಕಪಕ್ಷೀಯವಾಗಿ ನೇಮಕ ಮಾಡಿದ್ದು, ಅದನ್ನು
ಬದಲಾಯಿಸಿ ನಿಷ್ಠಾವಂತರಿಗೆ ಅವಕಾಶ ನೀಡಬೇಕು ಎಂಬಿತ್ಯಾದಿ ಹಲವು ಅಂಶಗಳನ್ನು ಪ್ರಸ್ತಾಪಿಸಿ ಈ ಹಿಂದೆ ಪತ್ರ ಬರೆಯಲಾಗಿತ್ತು. ಆದರೆ, ಅದಾವುದೂ ಸಾಧ್ಯವಿಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೀರಿ. ಹೀಗಾಗಿ ಮಾತುಕತೆಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಆದ್ದರಿಂದ ಹೈಕಮಾಂಡೇ ಈ ಕುರಿತು ನಿರ್ಧರಿಸಲಿ. 

ಟಾಪ್ ನ್ಯೂಸ್

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.