ಯಡಿಯೂರಪ್ಪ ಬಂಜಾರಾ ಸಮುದಾಯಕ್ಕೆ ಎರಡನೇ ಸೇವಾಲಾಲ್ ಇದ್ದಂತೆ : ಸಚಿವ ಪ್ರಭು ಚವ್ಹಾಣ್
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬಂಜಾರಾ ಸಮುದಾಯಕ್ಕೆ ಎರಡನೇ ಸೇವಾಲಾಲ್ ಇದ್ದಂತೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹೇಳಿದರು
Team Udayavani, Mar 17, 2021, 4:47 PM IST
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬಂಜಾರಾ ಸಮುದಾಯಕ್ಕೆ ಎರಡನೇ ಸೇವಾಲಾಲ್ ಇದ್ದಂತೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹೇಳಿದರು. ವಸಂತನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಬಂಜಾರ ಭವನಕ್ಕೆ ಭೇಟಿ ನೀಡಿದ ಸಚಿವರು ಬಂಜಾರಾ ಸಮುದಾಯದ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಅಭಯ ಸದಾ ಇದ್ದೇ ಇದೆ ಎಂದು ಹೇಳಿದರು.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೂ.4.5 ಕೋಟಿ ನೀಡಿ ಬೆಂಗಳೂರಿನಲ್ಲಿ ಸಮುದಾಯ ಒಂದು ಸ್ಥಳದಲ್ಲಿ ಒಗ್ಗೂಡುವಂತೆ ಮಾಡಿದ್ದರು. 2009ರಲ್ಲಿ ಶಂಕುಸ್ಥಾಪನೆ ಆದರೂ ಮುಂದೆ ಬಂದ ಕಾಂಗ್ರೆಸ್ ಸರ್ಕಾರ ಸಮುದಾಯ ಭವನಕ್ಕೆ ಯಾವುದೇ ರೀತಿಯ ಸಹಾಯ ನೀಡಲಿಲ್ಲ. ಬಿಜೆಪಿ ಸರ್ಕಾರದ ಈ ಅವಧಿಯಲ್ಲಿ ರೂ.1.5 ಕೋಟಿ ನೀಡಿ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳ್ಳಲು ಮುಖ್ಯಮಂತ್ರಿಯವರು ಸಹಾಯ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಬಂಜಾರ ಸಮುದಾಯದ ಸಂಘಟನೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಬಂಜಾರಾ ಭವನ ಸಹಕಾರಿಯಾಗಲಿದೆ. ಒಟ್ಟಾರೆ ರೂ 6.5 ಕೋಟಿ ವೆಚ್ಚದಲ್ಲಿ ಸುಂದರವಾದ ಬಂಜಾರಾ ಭವನ ನಿರ್ಮಾಣವಾಗಿದೆ. ಶೀಘ್ರದಲ್ಲೇ ಮುಖ್ಯಮಂತ್ರಿಗಳ ಅಮೃತಹಸ್ತದಿಂದ ಬಂಜಾರಾ ಭವನವನ ಉದ್ಘಾಟನೆ ಆಗಲಿದೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದರು. ಭೇಟಿಯ ವೇಳೆ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್ ಹಾಗೂ ಸಮಾಜದ ಮುಖಂಡರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.