20 ದಿನಗಳಲ್ಲಿ ನಿರ್ಮಾಣವಾದ ಯಲಹಂಕ ಕೋವಿಡ್ ಆಸ್ಪತ್ರೆ ಲೋಕಾರ್ಪಣೆ ಮಾಡಿದ ಸಿಎಂ
Team Udayavani, Jun 19, 2021, 5:35 PM IST
ಬೆಂಗಳೂರು: ಕೊವಿಡ್ ಅಲೆಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಬೋಯಿಂಗ್ ಸಂಸ್ಥೆಯು, ‘ಸೆಲ್ಕೋ’, ‘ಡಾಕ್ಟರ್ಸ್ ಫಾರ್ ಯು’ ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೊವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಶನಿವಾರ ಉದ್ಘಾಟಿಸಿದರು.
ಆಸ್ಪತ್ರೆ ನಿರ್ಮಾಣಕ್ಕೆ ಕರ್ನಾಟಕ ವಿದ್ಯುತ್ ನಿಗಮ ತನ್ನ ಕ್ಯಾಂಪಸ್‌ನಲ್ಲಿ ಜಾಗ ನೀಡಿದ್ದು, ಸುಮಾರು ಅರ್ಧ ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಇರುವ ಆಸ್ಪತ್ರೆಯನ್ನು ಕೇವಲ 20 ದಿನದೊಳಗೆ ಪೂರ್ಣಗೊಳಿಸಿರುವುದು ವಿಶೇಷ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,”ಕೋವಿಡ್ ಎರಡನೇ ಅಲೆ ನಿಯಂತ್ರಣ, ಚಿಕಿತ್ಸೆ ಹಾಗೂ ಲಸಿಕೆ ಕಾರ್ಯಕ್ರಮದಲ್ಲಿ ಸರ್ಕಾರದ ಜತೆಗೆ ಖಾಸಗಿ ಸಂಸ್ಥೆಗಳು ಹಾಗೂ ಎನ್‌ಜಿಓಗಳು ಕೈ ಜೋಡಿಸಿರುವುದು ಅತ್ಯಂತ ಶ್ಲಾಘನೀಯ. ಬೋಯಿಂಗ್ ಸಂಸ್ಥೆಯು ಸೆಲ್ಕೋ’ ಮತ್ತು ‘ಡಾಕ್ಟರ್ಸ್ ಫಾರ್ ಯು’ ಸಹಯೋಗದೊಂದಿಗೆ ಅತ್ಯಂತ ಕಡಿಮೆ ಸಮಯದಲ್ಲಿ ಕೊವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿರುವುದು ಬಹಳ ಸಂತಸದ ವಿಷಯ. ಕಾರ್ಪೋರೇಟ್ ಕಂಪನಿಗಳು ತಮ್ಮ ಸಮುದಾಯಿಕ ಜವಾಬ್ದಾರಿ ಕಾರ್ಯಕ್ರಮದ ಭಾಗವಾಗಿ ಇಂಥ ಜನಪರ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಅನುಕರಣೀಯ,” ಎಂದರು.
“ಕರ್ನಾಟಕ ವಿದ್ಯುತ್ ನಿಗಮದ ಯಲಹಂಕ ಕ್ಯಾಂಪಸ್‌ನಲ್ಲಿ ಅತ್ಯಂತ ಕಡಿಮೆ ಸಮಯದಲ್ಲಿ ಕೊವಿಡ್ ಕೇರ್ ಆಸ್ಪತ್ರೆ ತಲೆ ಎತ್ತಿದೆ. ಕೊವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಪ್ರಯತ್ನಗಳಿಗೆ ಕಾರ್ಪೋರೇಟ್ ಸಂಸ್ಥೆಗಳು ಎನ್‌ಜಿಓಗಳು ಕೈ ಜೋಡಿಸಿರುವುದು ಸಂತಸದ ವಿಷಯ. ರಾಜ್ಯದ ಆರೋಗ್ಯ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಕೈಗೊಳ್ಳುವ ಎಲ್ಲ ಕಾರ್ಯಕ್ರಮಗಳಲ್ಲಿ ಸರ್ಕಾರದ ಜತೆ ಇನ್ನಿತರ ಖಾಸಗಿ ಸಂಸ್ಥೆಗಳು ಕೈ ಜೋಡಿಸಲಿ,” ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡ ಹೇಳಿದರು.
ಕಾರ್ಯಕ್ರಮದಲ್ಲಿ ಬಿಡಿಎ ಅಧ್ಯಕ್ಷ, ಶಾಸಕ ಎಸ್. ಆರ್. ವಿಶ್ವನಾಥ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಾಜ್ ಕುಮಾರ್ ಖತ್ರಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಹೆಚ್. ಎಂ. ರೇವಣ್ಣಗೌಡ ಉಪಸ್ಥಿತರಿದ್ದರು.
ಆಸ್ಪತ್ರೆ ವೈಶಿಷ್ಟ್ಯ:
ಅತಿ ಕಡಿಮೆ ಅವಧಿ ಅಂದರೆ ಕೇವಲ 20 ದಿನಗಳಲ್ಲಿ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಈ ಆಸ್ಪತ್ರೆ ನಿರ್ಮಾಣವಾಗಿದ್ದು, ಸೌರ ವ್ಯವಸ್ಥೆಯನ್ನು ಒಳಗೊಂಡಿದೆ. ತಾಪಮಾನ ನಿಯಂತ್ರಿಸಬಲ್ಲ ಮಾದರಿ ವ್ಯವಸ್ಥೆ ಇದೆ. ಔಷಧಾಲಯ, ಪ್ರಯೋಗಾಲಯ, ವಿಶ್ರಾಂತಿ ಕೊಠಡಿ, ದಾದಿಯರ ಕೇಂದ್ರ, ತಾಯಿಯರ ಆರೈಕೆ ಕೇಂದ್ರ ಹಾಗೂ ಸಭಾಂಗಣವನ್ನು ಒಳಗೊಂಡಿದೆ. 10 ಐಸಿಯು ಹಾಸಿಗೆ, 20 ಎಚ್‌ಡಿಯು ಹಾಸಿಗೆಗಳಿವೆ. ಉಳಿದ ಹಾಸಿಗೆಗಳು ವೈದ್ಯಕೀಯ ಆಮ್ಲಜನಕದ ಸಂಪರ್ಕ ಹೊಂದಿವೆ.
ವೆಚ್ಚ, ನಿರ್ವಹಣೆ:
ಆಸ್ಪತ್ರೆ ನಿರ್ಮಾಣಕ್ಕೆ ಒಟ್ಟು 5.5 ಕೋಟಿ ರೂ. ವೆಚ್ಚವಾಗಿದ್ದು, ಬೊಯಿಂಗ್ ಡಿಫೆನ್ಸ್ ಇಂಡಿಯಾ ಪ್ರೈ. ಲಿ 3 ಕೋಟಿ ರೂ., ಸೆಲ್ಕೋ ಫೌಂಡೇಷನ್ 2.5 ಕೋಟಿ ರೂ. ನೀಡಿದೆ. ಕರ್ನಾಟಕ ವಿದ್ಯುತ್ ನಿಗಮ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಜಾಗ ಒದಗಿಸಿದೆ. ಡಾಕ್ಟರ್ಸ್ ಫಾರ್ ಯು ಸರ್ಕಾರೇತರ ಸಂಸ್ಥೆಯು ಆಸ್ಪತ್ರೆ ನಿರ್ವಹಣೆ ಮತ್ತು ಆರೋಗ್ಯ ಸೇವೆ ಒದಗಿಸುವ ಜವಾಬ್ದಾರಿ ವಹಿಸಿಕೊಂಡಿದೆ.
ಅತಿ ಕಡಿಮೆ ಅವಧಿಯಲ್ಲಿ ಅತ್ಯಂತ ಶೀಘ್ರವಾಗಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಿಸಿ ಸಾರ್ವಜನಿಕರಿಗೆ ಸೌಲಭ್ಯ ಒದಗಿಸುತ್ತಿರುವ ಇಡೀ ತಂಡದ ಪರಿಶ್ರಮ ಶ್ಲಾಘನೀಯ ಎಂದು ಬೋಯಿಂಗ್ ಡಿಫೆನ್ಸ್ ಇಂಡಿಯಾದ ಅಧ್ಯಕ್ಷ ಸಲೀಲ್ ಗುಪ್ತ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.