ನಿನ್ನೆ ಸರ್ಕಾರಿ ರಜೆ, ಇನ್ನೆರಡು ದಿನ ಶೋಕ
Team Udayavani, Jan 4, 2017, 3:45 AM IST
ಬೆಂಗಳೂರು: ಸಚಿವ ಎಚ್.ಎಸ್.ಮಹದೇವಪ್ರಸಾದ್ ಅವರ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಮಂಗಳವಾರ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಿಗೆ (ಅನುದಾನಿತ ಶಾಲಾ ಕಾಲೇಜುಗಳೂ ಸೇರಿ) ರಜೆ ಘೋಷಿಸಲಾಯಿತು.
ಅಲ್ಲದೆ, ಮೂರು ದಿನ ರಾಜ್ಯಾದ್ಯಂತ ಶೋಕ ಆಚರಿಸಲು ತೀರ್ಮಾನಿಸಲಾಗಿದೆ. ಮಹದೇವಪ್ರಸಾದ್ ನಿಧನದ ಮಾಹಿತಿ ಸಿಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ರಜೆ ಘೋಷಿಸುವಂತೆ ಸೂಚನೆ ನೀಡಿದರು.
ಅದರಂತೆ ತಕ್ಷಣ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ರಾಜ್ಯ ಶಿಷ್ಟಾಚಾರ) ಈ ಕುರಿತು ಅಧಿಸೂಚನೆ
ಹೊರಡಿಸಿತು. ಮಂಗಳವಾರ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲಾ ಕಾಲೇಜುಗಳಿಗೆ (ಅನುದಾನ ಪಡೆಯುವ ಎಲ್ಲಾ ವಿದ್ಯಾಸಂಸ್ಥೆಗಳು ಸೇರಿದಂತೆ) ರಜೆ ಘೋಷಿಸಲಾಯಿತು. ಅಲ್ಲದೆ, ಜ.5ರವರೆಗೆ ರಾಜ್ಯಾದ್ಯಂತ ಶೋಕ ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ ಯಾವುದೇ ಅಧಿಕೃತ ಸಾರ್ವಜನಿಕ ಸಮಾರಂಭಗಳು, ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯಮಿತವಾಗಿ ರಾಷ್ಟ್ರಧ್ವಜ ಹಾರಿಸುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸರ್ಕಾರದ ಆದೇಶ ಹೊರಬೀಳುತ್ತಿದ್ದಂತೆ ಬಹುತೇಕ ಸರ್ಕಾರಿ ಹಾಗೂ ಅನುದಾನಿತ ಶಾಲಾ, ಕಾಲೇಜುಗಳು ರಜೆ ಘೋಷಿಸಿ ಮಕ್ಕಳನ್ನು ಮನೆಗೆ ಕಳುಹಿಸಿದವು.
ಚಾ.ನಗರ: ಇಂದೂ ರಜೆ
ಬೆಂಗಳೂರು: ಮಂಗಳವಾರ ನಿಧನರಾದ ಸಹಕಾರ ಮತ್ತು ಸಕ್ಕರೆ ಖಾತೆ ಸಚಿವ ಎಚ್. ಎಸ್.ಮಹದೇವಪ್ರಸಾದ್ ಅವರ ಅಂತ್ಯಕ್ರಿಯೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಅವರ ಹುಟ್ಟೂರಿನಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಚಾಮರಾಜನಗರ ಜಿಲ್ಲೆಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ನೆಗೋಷಿಯೇಬಲ್ ಇನ್‌ಸ್ಟ್ರೆಮೆಂಟ್ ಆ್ಯಕ್ಟ್- 1981ರ ಪ್ರಕಾರ ರಜೆ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬುಧವಾರವೂ ಚಾಮರಾಜನಗರ ಜಿಲ್ಲೆಯಾದ್ಯಂತ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು (ಅನುದಾನಿತ) ಕಾರ್ಯನಿರ್ವಹಿಸುವುದಿಲ್ಲ.
ವಿಧಾನಸೌಧ ಬಿಕೋ
ಬೆಂಗಳೂರು: ಸಹಕಾರ ಮತ್ತು ಸಕ್ಕರೆ ಖಾತೆ ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರ ನಿಧನ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಘೋಷಿಸಿದ್ದರಿಂದ ಮಧ್ಯಾಹ್ನದ ವೇಳೆಗೆ ರಾಜ್ಯದ ಶಕ್ತಿ ಕೇಂದ್ರ ಬಿಕೋ ಎನ್ನುತ್ತಿತ್ತು. ವಿಧಾನಸೌಧದ ಮುಂಭಾಗದಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸಲಾಯಿತು. ಬೆಳಗ್ಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ಎಂದಿನಂತೆ ಕಚೇರಿಗೆ ಹಾಜರಾದರೂ ಬಳಿಕ ಸಚಿವರ ನಿಧನ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಘೋಷಿಸಲಾಯಿತು. ಹೀಗಾಗಿ ಬೆಳಗ್ಗೆ ವಿಧಾನಸೌಧ, ವಿಕಾಸಸೌಧ ಮತ್ತು ಎಂ.ಎಸ್.ಬಿಲ್ಡಿಂಗ್ ಸೇರಿದಂತೆ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಒಬ್ಬೊಬ್ಬರಾಗಿ ಮನೆಗೆ ವಾಪಸಾಗುತ್ತಿದ್ದರು.
ಮಧ್ಯಾಹ್ನದ ವೇಳೆಗೆ ಎಲ್ಲ ಕಚೇರಿಗಳು ಖಾಲಿಯಾಗಿ ವಿಧಾನಸೌಧ ಮತ್ತು ಸುತ್ತಲಿನ ಪ್ರದೇಶಗಳು ಬಿಕೋ ಎನ್ನುತ್ತಿದ್ದವು. ವಿಧಾನಸೌಧ ವೀಕ್ಷಣೆಗೆ ದೂರದ ಊರುಗಳಿಂದ ಬಂದಿದ್ದವರನ್ನು ಪೊಲೀಸರು ಮುಖ್ಯದ್ವಾರದಿಂದಲೇ ವಾಪಸ್ ಕಳುಹಿಸುತ್ತಿದ್ದರು. ಸಚಿವರ ನಿಧನದ ಮಾಹಿತಿ ಇಲ್ಲದ ಕೆಲವರು, ದೂರದ ಊರಿನಿಂದ ಬಂದಿದ್ದೇವೆ. ಒಮ್ಮೆ
ವಿಧಾನಸೌಧ ನೋಡುಕೊಂಡು ಹೋಗುತ್ತೇವೆ ಎಂದು ಪೊಲೀಸರ ಬಳಿ ಕೇಳಿಕೊಳ್ಳುತ್ತಿದ್ದರು. ಅಂಥವರಿಗೆ ಸಚಿವರ ನಿಧನದ ಮಾಹಿತಿ ನೀಡಿ ಪೊಲೀಸರು ವಾಪಸ್ ಕಳುಹಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.