ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಆಗಮನ: ಸಿದ್ಧತೆ ಸಭೆ ನಡೆಸಿದ ಸಿಎಂ


Team Udayavani, Jun 7, 2022, 6:57 PM IST

Untitled-1

ಬೆಂಗಳೂರು: ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಮೈಸೂರು ಅರಮನೆ ಎದುರು 15 ಸಾವಿರ ಜನರು ಯೋಗ ಮಾಡಲಿದ್ದಾರೆ.

ಈ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಜೂನ್ 13 ರೊಳಗೆ ಪೂರ್ಣಗೊಳಿಸುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿ ಸೂಚಿಸಿದಂತೆ ಸಮಾಜದ ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ತಿಳಿಸಿದರು.

ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಸಾರಿಗೆ ಸೌಲಭ್ಯ, ಲಘು ಉಪಾಹಾರ ಕುಡಿಯುವ ನೀರು ಮತ್ತಿತರ ವ್ಯವಸ್ಥೆಗಳನ್ನು ಯಾವುದೇ ಲೋಪವಿಲ್ಲದಂತೆ ನಿರ್ವಹಿಸಬೇಕು. ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ವಹಿಸುವಂತೆ ಸೂಚಿಸಿದರು.

ಇದರೊಂದಿಗೆ ಕೇಂದ್ರ ಆಯುಷ್ ಸಚಿವಾಲಯವು ಯೋಗಕ್ಕೆ ಸಂಬಂಧಿಸಿದಂತೆ ವಸ್ತುಪ್ರದರ್ಶನವನ್ನು ಸಹ ಏರ್ಪಡಿಸಿದೆ. ಇದಕ್ಕೆ ಅಗತ್ಯ ಸಹಕಾರವನ್ನು ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಇದನ್ನೂ ಓದಿ: ತಸ್ತೀಕ್‌ ಮತ್ತು ವರ್ಷಾಸನ ಅನುದಾನದ ಬಳಕೆ ಸರಳೀಕರಣಗೊಳಿಸಲು ಮುಜರಾಯಿ ಇಲಾಖೆ ಅಧಿಕೃತ ಆದೇಶ

ಈ ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಕೋರ್ ಕಮಿಟಿ ಸೇರಿದಂತೆ ಒಟ್ಟು 14 ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಸೂಚಿಸಿದರು.

ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ 5 ತಾಣಗಳಾದ ಮೈಸೂರು, ಹಳೇಬೀಡು, ಹಂಪಿ, ಪಟ್ಟದಕಲ್ ಹಾಗೂ ವಿಜಯಪುರದ ಗೋಲಗುಂಬಜ್ ಈ  ಕಾರ್ಯಕ್ರಮಕ್ಕೆ ಆಯ್ಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಹಳೇಬೀಡಿನಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ, ಹಂಪಿಯಲ್ಲಿ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಷಿ, ಪಟ್ಟದಕಲ್ಲಿನಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ವಿಜಯಪುರದ ಗೋಲಗುಂಬಜ್ ನಲ್ಲಿ ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಪಾಲ್ಗೊಳ್ಳಲಿದ್ದಾರೆ.

ಇದಲ್ಲದೆ ರಾಜ್ಯ ಮಟ್ಟದಲ್ಲಿ ರಾಜ್ಯದ 75 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಸಚಿವರಾದ ಡಾ. ಕೆ. ಸುಧಾಕರ್, ಎಸ್.ಟಿ. ಸೋಮಶೇಖರ್, ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಯೋಜನೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.