ನಿಮ್ಮನ್ನು ಕಾಂಗ್ರೆಸ್ ಸಂಸ್ಥಾಪಕರ ಮೊಮ್ಮಗ, ಇಂದಿರಾಗಾಂಧಿ ದತ್ತುಪುತ್ರ ಎನ್ನಲ್ಲ: CT ರವಿ
Team Udayavani, Nov 22, 2020, 2:58 PM IST
ಬೆಂಗಳೂರು: ನಾನು ಆರ್ ಎಸ್ ಎಸ್ ಸಂಸ್ಥಾಪಕ ಅಲ್ಲ, ನಾನೊಬ್ಬ ಸಂಘದ ಸ್ವಯಂಸೇವಕ. ಪರಮ ಪೂಜ್ಯ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ಗುರುವಾಗಿ ಸ್ವೀಕರಿಸಿದ್ದು ಸಹಸ್ರಾರು ವರ್ಷಗಳಿಂದ ಪ್ರೇರಣೆ ನೀಡಿದ ಭಗವದ್ ಧ್ವಜವನ್ನು ಮತ್ತು “ವ್ಯಕ್ತಿಗಿಂತ ತತ್ವ ಶ್ರೇಷ್ಠ” ಎಂಬ ಸಿದ್ದಾಂತವನ್ನು ಎಂದು ಸಿಟಿ ರವಿ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.
ನನಗೆ ಆರ್ ಎಸ್ ಎಸ್ ಬಗ್ಗೆ ಗೊತ್ತಿಲ್ಲ ಎನ್ನುವ ಸಿ.ಟಿ ರವಿ ಹಡಗೆವಾರ್ ಜೊತೆಗಿದ್ನಾ, ಇಲ್ಲಾ ಆರೆಸ್ಸೆಸ್ ಸಂಸ್ಥಾಪಕಾ ಸದಸ್ಯನಾ ? ಗೋ ಹತ್ಯೆ ನಿಷೇಧದ ಬಗ್ಗೆ ರವಿ ಬುರುಡೆ ಬಿಡುವುದು ಬೇಡ ಎಂದು ಸಿದ್ದರಾಮಯ್ಯ ಇತ್ತೀಚಿಗೆ ಸಿ.ಟಿ ರವಿ ವಿರುದ್ಧ ಕಿಡಿಕಾರಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿ.ಟಿ ರವಿ, ಸಂಘ ಸ್ವಯಂಸೇವಕರಿಗೆ ಹೇಳಿಕೊಟ್ಟಿದ್ದು ದೇಶ ಮೊದಲು ಎನ್ನುವ ತತ್ವವನ್ನು. “ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ” ಎಂಬ ಭಾವವನ್ನು. ಇದು ಅರ್ಥವಾಗಬೇಕಾದರೆ, ಅಸ್ಪೃಶ್ಯತೆಯ, ಜಾತೀಯತೆಯ ಸೋಂಕಿಲ್ಲದೆ ನಾವೆಲ್ಲರೂ ಒಂದು, ಭಾರತಮಾತೆಯ ಮಕ್ಕಳು ಎಂದು ಬದುಕಬೇಕಾದರೆ ನೀವು ಶಾಖೆಗೆ ಬರಬೇಕು.
ಇದನ್ನೂ ಓದಿ: ರಾಜಕೀಯ ಖೈದಿ: ಸೌದಿಯ ಮಹಿಳಾ ಹಕ್ಕು ಹೋರಾಟಗಾರ್ತಿ ಲೌಜೈನ್ ಅಲ್-ಹಥ್ಲೌಲ್ ರ ಬಗ್ಗೆ ಗೊತ್ತಾ?
ನಾನು ನಿಮ್ಮ ಹಾಗೆ, ನೀವು ಕಾಂಗ್ರೆಸ್ ಸಂಸ್ಥಾಪಕ AO ಹ್ಯೂಮ್ ರ ಮೊಮ್ಮಗನೋ, ಮರಿಮಗನೋ ಎಂದು ಕೇಳುವುದಿಲ್ಲ. ಇಂದಿರಾ ಗಾಂಧಿಯವರ ದತ್ತುಪುತ್ರ ಎಂದು ಹೇಳುವುದಿಲ್ಲ. ಅಧಿಕಾರಕ್ಕಾಗಿ ಪಕ್ಷ ಬದಲಾಯಿಸಿದರು ಎಂದು ಆರೋಪಿಸುವುದಿಲ್ಲ. ಬದಲಾಗಿ ವಂಶವಾದಕ್ಕಿಂತ, ಜಾತಿವಾದಕ್ಕಿಂತ, ರಾಷ್ಟ್ರವಾದ ದೇಶಕ್ಕೆ ಒಳ್ಳೆಯದು ಎಂದಷ್ಟೇ ಹೇಳಬಯಸುತ್ತೇನೆ.
ನೀವಿರುವ ಪಕ್ಷದಲ್ಲಿ ದೇಶಕ್ಕಿಂತ ಮತಬ್ಯಾಂಕ್ ಮುಖ್ಯವಾಗಿದೆ, ಪ್ರಜಾಪ್ರಭುತ್ವಕ್ಕಿಂತ ರಾಜಪ್ರಭುತ್ವದ ಮಾದರಿಯ ಕುಟುಂಬ ರಾಜಕಾರಣವಿದೆ. ದಾರಿತಪ್ಪಿರುವ ಕಾಂಗ್ರೆಸ್ಸಿಗರಿಗೆ ದೇಶಭಕ್ತಿಯ ಪಾಠ ಹೇಳಿಕೊಡಲು ಯಾರಿದ್ದಾರೆ? ಎಮದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಆಶ್ರಮದಲ್ಲಿ ಚಹಾ ಸೇವಿಸಿದ ನಂತರ ಇಬ್ಬರು ಸಾಧುಗಳ ನಿಗೂಢ ಸಾವು: ಮತ್ತೊಬ್ಬರ ಸ್ಥಿತಿ ಚಿಂತಾಜನಕ
ಮಹಾತ್ಮ ಗಾಂಧಿಯವರು ಬದುಕಿಲ್ಲ, ಕಾಂಗ್ರೆಸ್ ಅವರ ತತ್ವಕ್ಕೆ ನೆಹರು ಅವರ ಕಾಲದಲ್ಲಿಯೇ ಎಳ್ಳುನೀರು ಬಿಟ್ಟಾಗಿದೆ. ದೇಶಭಕ್ತಿ ಸರಳವಾಗಿ ಅರ್ಥವಾಗಲು ಸಂಘದ ಶಾಖೆಗಿಂತ ಬೇರೆ ದಾರಿಯಿಲ್ಲ. ಅದಕ್ಕಾಗಿಯೇ ಸಾರ್ವಜನಿಕ ರೂಪದ ಸಂಪರ್ಕ ಮಾಡಿದ್ದೇನೆ. ಇನ್ನೆಷ್ಟು ದಿನ ನಯವಂಚಕ, ಸ್ವಾರ್ಥದ ರಾಜಕಾರಣ? ನಿಮಗೆ ಬಿಟ್ಟಿದ್ದು ಎಂದು ಸಿ.ಟಿ ರವಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.