Dalit ಅನ್ನುತ್ತೀರಿ, ಪಂಜರದಲ್ಲಿ ಇರಿಸಿದ್ದೀರಿ: ಸಿಎಂ ಸಿದ್ದರಾಮಯ್ಯ ತಿರುಗೇಟು
ಗೆಹ್ಲೋಟ್ ಗೆ ಕೇಂದ್ರ ಸಚಿವ ಸ್ಥಾನ ಯಾಕೆ ನೀಡಿಲ್ಲ: ಪ್ರಶ್ನೆ
Team Udayavani, Aug 23, 2024, 7:19 AM IST
ಬೆಂಗಳೂರು: ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ಬಿಜೆಪಿ ನಾಯಕ ರಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತ ಸಮುದಾಯಕ್ಕೆ ಸೇರಿರುವ ಥಾವರ್‌ಚಂದ್ ಗೆಹ್ಲೋಟ್ ಅವರ ಬಗ್ಗೆ ನಿಮಗೆ ಅಷ್ಟೊಂದು ಗೌರವ ಅಭಿಮಾನವಿದ್ದರೆ ಕೇಂದ್ರ ಸಚಿವ ಸಂಪುಟದಲ್ಲಿ ಇರಬೇಕಾಗಿದ್ದ ಅವರನ್ನು ಇಲ್ಲಿ ತಂದು “ಪಂಜರದ ಗಿಣಿ’ಯನ್ನಾಗಿ ಯಾಕೆ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
“ಎಕ್ಸ್’ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮ ಸೇರುವಷ್ಟು ವಯಸ್ಸಾಗದೆ ಇದ್ದರೂ ಗೆಹ್ಲೋಟ್ ಅವರ ಸಕ್ರಿಯ ರಾಜಕೀಯ ಜೀವನ ಯಾಕೆ ಮೊಟಕು ಗೊಳಿಸಿದಿರಿ ಎಂದು ಕುಟುಕಿದ್ದಾರೆ. ಜತೆಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೇಗೆ ನಡೆಸಿ ಕೊಳ್ಳುತ್ತಿದ್ದೇವೆ ಎಂಬುದನ್ನು ನೋಡಿ ಕಲಿಯಿರಿ ಎಂದು ಉದಾಹರಣೆ ನೀಡಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವ ರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ, ಘನತೆಯಿಂದ ನಡೆಸಿ ಕೊಳ್ಳುತ್ತಿದ್ದಾರೆ ಎಂಬುದನ್ನು ನೋಡಿ ಬಿಜೆಪಿ ಕಲಿಯಬೇಕು ಎಂದಿದ್ದಾರೆ.
ದಲಿತರನ್ನು ಬಳಸಿ ಎಸೆಯುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜ ಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ ಎಂದಿದ್ದಾರೆ.
ವಾಜಪೇಯಿ ಅವರು ದಲಿತ ಸಮು ದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯ ಸಂ ಮನಸ್ಸು ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಆರೋಪ ಹೊರಿಸಿತು.
ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು ಎಂದು ಕಿಡಿ ಕಾರಿದ್ದಾರೆ.ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ಬಿಜೆಪಿ ನಾಯಕರಿಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೆ ಗೆಹ್ಲೋಟ್ ಅವರ ಮೇಲೆ ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.