ಇಂದಿನಿಂದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯೂಟ್ಯೂಬ್ ಕ್ಲಾಸ್
Team Udayavani, Jul 23, 2020, 6:32 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 23ರಿಂದ ಯೂಟ್ಯೂಬ್ ಮೂಲಕ ಆನ್‌ಲೈನ್ ತರಗತಿ (ಪೂರ್ವ ಮುದ್ರಿತ ವಿಡಿಯೋ) ಆರಂಭವಾಗಲಿದೆ.
ಪ್ರತಿ ದಿನ 45 ನಿಮಿಷಗಳ 4 ತರಗತಿಗಳನ್ನು ನಡೆಸಲಾಗುತ್ತದೆ. ಬೆಳಗ್ಗೆ 9ರಿಂದ 12 ಗಂಟೆವರೆಗೆ ತರಗತಿ ನಡೆಯಲಿದೆ. ವಿದ್ಯಾರ್ಥಿಗಳು https://www.youtube.com/c/dpuedkpucpa ಲಿಂಕ್ ಮೂಲಕ ಆನ್‌ಲೈನ್ ತರಗತಿಯನ್ನು ವೀಕ್ಷಿಸಬಹುದು ಎಂದು ಪಿಯು ಇಲಾಖೆಯ ನಿರ್ದೇಶಕಿ ಕನಕವಲ್ಲಿ ಮಾಹಿತಿ ನೀಡಿದ್ದಾರೆ.
ಎಲ್ಲ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಈ ಸಂಬಂಧ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಸ್ಮಾರ್ಟ್ ಫೋನ್, ಲ್ಯಾಪ್‌ಟಾಪ್ ಅಥವಾ ಇಂಟರ್‌ನೆಟ್ ಸೌಲಭ್ಯ ಹೊಂದಿರದ ವಿದ್ಯಾರ್ಥಿಗಳಿಗೆ ಕಾಲೇಜು ಆರಂಭವಾದ ಬಳಿಕ ಮತ್ತೂಮ್ಮೆ ಈ ಪಾಠಗಳನ್ನು ಉಪನ್ಯಾಸಕರ ಮೂಲಕ ಬೋಧಿಸಲಾಗುತ್ತದೆ.
ಕೋವಿಡ್ 19 ಹಿನ್ನೆಲೆಯಲ್ಲಿ ತರಗತಿ ಆರಂಭ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಯೂಟ್ಯೂಬ್ ಕ್ಲಾಸ್ ಆರಂಭಿಸುತ್ತಿದ್ದೇವೆ ಎಂದರು.
ವಿದ್ಯಾರ್ಥಿಗಳಿಗೆ ವಾಟ್ಸ್‌ಆ್ಯಪ್ ಗ್ರೂಪ್
ಪ್ರತಿ ಕಾಲೇಜಿನ ಸಂಯೋಜಕರು ವಿದ್ಯಾರ್ಥಿಗಳ ವಾಟ್ಸ್ ಆ್ಯಪ್ ಗ್ರೂಪ್ ಮಾಡಿ ವೀಡಿಯೋಗಳನ್ನು ತಲುಪಿಸುವ ಕೆಲಸ ಮಾಡಬೇಕು. ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕವೂ ಸಂಪರ್ಕಿಸಿ, ಸಂದೇಹಗಳನ್ನು ಪರಿಹರಿಸಬೇಕು.
ಈ ನಿಟ್ಟಿನಲ್ಲಿ ಜಿಲ್ಲಾ ಉಪ ನಿರ್ದೇಶಕರು ತಮ್ಮ ವ್ಯಾಪ್ತಿಯಲ್ಲಿ ಐದು ಅಥವಾ ಹತ್ತು ಉಪನ್ಯಾಸಕರು ಅಥವಾ ಸಂಪನ್ಮೂಲ ವ್ಯಕ್ತಿಗಳ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು. ಇದನ್ನು ಪ್ರಾಂಶುಪಾಲರು ನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.