ಯುವಶಕ್ತಿಯಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ: ಥಾವರ್‌ ಚಂದ್‌ ಗೆಹ್ಲೋಟ್


Team Udayavani, Dec 10, 2021, 9:13 PM IST

ಯುವ ಶಕ್ತಿ ಉತ್ತೇಜನ ಎಲ್ಲರ ಕರ್ತವ್ಯ: ಥಾವರ್‌ ಚಂದ್‌ ಗೆಹ್ಲೋಟ್

ಬೆಂಗಳೂರು: ನಮ್ಮ ದೇಶ ಯುವ ರಾಷ್ಟ್ರ. ಇಂದಿನ ಯುವ ಸಮಾಜದ ಆದ್ಯತೆ ಬೇರೆಯವರಿಗಿಂತ ಭಿನ್ನವಾಗಿ ಯೋಚಿಸುವುದು, ಎಲ್ಲರಿಗಿಂತಲೂ ಕ್ಷಿಪ್ರ ವೇಗದಲ್ಲಿ ಸಾಧನೆ ಮಾಡುವುದು ಆಗಿರುತ್ತದೆ. . ಇಲ್ಲಿನ ಯುವ ಉದ್ಯಮಿಗಳು ದೇಶವನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ಯಬಹುದಾಗಿದ್ದು, ಯುವಶಕ್ತಿಗೆ ಉತ್ತೇಜನ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಹೇಳಿದರು.

ರಾಜಭವನದ ಬಾಂಕ್ವೆಟ್‌ ಸಭಾಂಗಣದಲ್ಲಿ ಯಂಗ್‌ ಪ್ರಸಿಡೆಂಟ್‌ ಆರ್ಗನೈಸೇಶನ್‌(ವೈಪಿಓ) ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶ ಸದೃಢ ರಾಷ್ಟ್ರವನ್ನಾಗಿಸಲು ಯುವಜನತೆಯಿಂದ ಮಾತ್ರ ಸಾಧ್ಯ. ಇಂದಿನ ಯುವಜನತೆಯೇ ನಮ್ಮ ದೇಶದ ಭವಿಷ್ಯ. ಹಾಗಾಗಿ, ಯುವಜನತೆಯಲ್ಲಿ ನಾವೆಲ್ಲರೂ ಶಕ್ತಿ ತುಂಬಬೇಕು, ಯುವಶಕ್ತಿ ಜಾಗೃತವಾದರೆ ಮಾತ್ರ ನಮ್ಮ ರಾಷ್ಟ್ರ ಅಭಿವೃದ್ಧಿಯ ಪಥದಲ್ಲಿ ಸಾಗಲು ಸಾಧ್ಯ. ಉತ್ತಮ ಶಿಕ್ಷಣ ಪಡೆದು ದೇಶವನ್ನು ಸಮರ್ಥವಾಗಿ ಮುನ್ನಡೆಸುವ ಜವಾಬ್ದಾರಿ ಯವಜನತೆ ಮೇಲಿದೆ. ಸಂವಹನಾ, ವೃತ್ತಿ ಕೌಶಲ್ಯ, ಆತ್ಮವಿಶ್ವಾಸ, ತಾಳ್ಮೆ ರೂಢಿಸಿಕೊಳ್ಳುವುದರ ಜೊತೆಗೆ ಭಾರತದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಕ್ಷಿಪ್ರ ವೇಗದಲ್ಲಿ ಸಾಧನೆ ಮಾಡಲು ಮುಂದಾಗಬೇಕು. ಉದ್ಯೋಗ ಅರಸುವ ಬದಲು ಯುವಪೀಳಿಗೆ ಉದ್ಯೋಗದಾತರಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಭಾರತವನ್ನು ವಿಶ್ವ ಗುರು ಮತ್ತು ಚಿನ್ನದ ಹಕ್ಕಿ ಎಂದು ಕರೆಯಲಾಗುತಿತ್ತು. ಏಕೆಂದರೆ ಪ್ರಾಚೀನ ಭಾರತದ ಶಿಕ್ಷಣ ವ್ಯವಸ್ಥೆ, ಜ್ಞಾನ ಮತ್ತು ವಿಜ್ಞಾನ, ಆರ್ಥಿಕತೆ, ಉದ್ಯಮ ವ್ಯವಸ್ಥೆಯು ಬಹಳ ಸಮೃದ್ಧವಾಗಿತ್ತು. ಆರ್ಯಭಟ, ಬ್ರಹ್ಮಗುಪ್ತ, ಭಾಸ್ಕಾರಾಚಾರ್ಯ, ಧನ್ವಂತರಿ, ಭಾರದ್ವಾಜ, ಆತ್ರೇಯ, ಸುಶ್ರುತ ಮೊದಲಾದ ಮಹಾನ್‌ ವಿದ್ವಾಂಸರು ಈ ಪುಣ್ಯಭೂಮಿಯಲ್ಲಿ ಜನಿಸಿದವರು, ಅವರ ಕಾರ್ಯಗಳಿಂದಾಗಿ ದೇಶವು ಪ್ರಸಿದ್ಧವಾಗಿದೆ.

ಇದನ್ನೂ ಓದಿ:ಜೈ ಭೀಮ್‌’ 2021ರಲ್ಲಿ ಅತಿ ಹೆಚ್ಚು ಸರ್ಚ್‌ ಆದ ಸಿನಿಮಾ

ಸ್ವಾತಂತ್ರ್ಯದ ಈ 75 ವರ್ಷದಲ್ಲಿ ಭಾರತ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಅಭಿವೃದ್ಧಿ ಕಂಡಿದೆ. ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಮೇಕ್‌ ಇನ್‌ ಇಂಡಿಯಾ, ಡಿಜಿಟಲ್‌ ಇಂಡಿಯಾ, ಸ್ಟ್ರಾರ್ಟ್‌ ಅಪ್‌ ಸೇರಿದಂತೆ ಇತರೆ ಯೋಜನೆಗಳ ಮೂಲಕ ಬಲಿಷ್ಠ ಭಾರತವನ್ನು ನಿರ್ಮಿಸಲು ಪ್ರಯತ್ನಿಸಿದೆ ಮತ್ತು ಈ ಮೂಲಕ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಕೆಲಸವನ್ನು ಮಾಡಲಾಗಿದೆ ಎಂದು ಹೇಳಿದರು.

ಯುವಜನತೆ ಸಕರಾತ್ಮಕ ಆಲೋಚನೆಯಿಂದಾಗಿ ಉದ್ಯೋಗ ಪಡೆಯುವುದರ ಜೊತೆಗೆ ಉದ್ಯೋಗ ಸೃಷ್ಟಿಸುವ ಗುರಿ ಹೊಂದಬೇಕು. ಕೇಂದ್ರ ಸರಕಾರವು ಉದ್ಯಮಶೀಲತೆಗೆ ಹೆಚ್ಚಿನ ಬೆಂಬಲವನ್ನು ನೀಡುತ್ತಿದೆ. ಭಾರತದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸುವ ಸಲುವಾಗಿ ಮೇಕ್‌ ಇನ್‌ ಇಂಡಿಯಾ ಅಭಿಯಾನವನ್ನು ಆರಂಭಿಸಿದ್ದು, ಅನೇಕ ಉದ್ಯಮಿಗಳಿಗೆ ಸಹಕಾರಿಯಾಗಿದೆ. ಕೇವಲ ಉತ್ಪಾದನಾ ಕ್ಷೇತ್ರವಷ್ಟೇ ಅಲ್ಲ ಇತರ ಕ್ಷೇತ್ರಗಳಿಗೂ ಅನ್ವಯವಾಗುತ್ತದೆ. ಭಾರತ ದೇಶ ಜಲ, ವನ ಸೇರಿದಂತೆ ನೈಸರ್ಗಿಕ ಮತ್ತು ಮೂಲ ಸಂಪನ್ಮೂಲದಲ್ಲಿ ಶ್ರೀಮಂತವಾಗಿರುವ ನಮ್ಮ ದೇಶದಲ್ಲಿ ವಿಫ‌ುಲ ಅವಕಾಶಗಳಿವೆ. ಬಂಡವಾಳ ಹೂಡಲು ಉತ್ತಮ ವಾತಾವರಣವಿದೆ. ಇಂತಹ ರಾಷ್ಟ್ರ ಮತ್ತಷ್ಟು ಅಭಿವೃದ್ಧಿ ಕಾಣಲು ಉತ್ಪಾದನೆ ಆದ್ಯತೆ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ವೈಪಿಒ ಅಧ್ಯಕ್ಷರಾದ ತುಲಸ್ಯಾನ್‌, ಅಮಿತ್‌ ಚಾವ್ಲಾ ಮತ್ತು ತ್ರಿಷ್ಟಾ ರಾಮಮೂರ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.