Yuva Nidhi Scheme: 5ನೇ ಗ್ಯಾರಂಟಿಗೆ ಇಂದು ಚಾಲನೆ

ಸ್ವಾಮಿ ವಿವೇಕಾನಂದರ ಜನ್ಮದಿನದಂದು ಐತಿಹಾಸಿಕ ಸಮಾರಂಭ

Team Udayavani, Jan 12, 2024, 6:15 AM IST

1-qeqeq

ಶಿವಮೊಗ್ಗ: ರಾಜ್ಯ ಸರಕಾರದ 5ನೇ ಗ್ಯಾರಂಟಿ “ಯುವನಿಧಿ’  ಯೋಜನೆಗೆ ಶುಕ್ರವಾರ ಶಿವಮೊಗ್ಗದಲ್ಲಿ ಚಾಲನೆ ದೊರೆಯಲಿದ್ದು, ಲೋಕಸಭೆ ಚುನಾವಣೆಗೆ ಇಲ್ಲಿಂದಲೇ ಕಹಳೆ ಮೊಳಗಿಸಲು ವೇದಿಕೆ ಸಜ್ಜಾಗಿದೆ.
ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜ. 12ರಂದು ನಡೆಯುವ ಈ ಐತಿಹಾಸಿಕ ಸಮಾರಂಭಕ್ಕೆ ಶಿವಮೊಗ್ಗದ ಹೃದಯ ಭಾಗ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ವೇದಿಕೆ ನಿರ್ಮಾಣವಾಗಿದೆ. ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವರಾದ ಮಧು ಬಂಗಾರಪ್ಪ, ಡಾ| ಶರಣ ಪ್ರಕಾಶ್‌ ಪಾಟೀಲ್‌, ಡಾ| ಎಂ.ಸಿ. ಸುಧಾಕರ್‌ ಸಹಿತ ಹಲವು ಸಚಿವರು, ಶಾಸಕರು, ಅಧಿ ಕಾರಿಗಳು ಚಾಲನೆ ನೀಡಲಿದ್ದಾರೆ. ಬೆಳಗ್ಗೆ 12 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಅ ಧಿಕ ಯುವನಿ ಧಿ ಹಾಗೂ ಗ್ಯಾರಂಟಿ ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆ ಇದೆ.

ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲಾ ಪೊಲೀಸ್‌ ಇಲಾಖೆ ಕಾರ್ಯಕ್ರಮ ಸ್ಥಳಕ್ಕೆ ಬರಬೇಕಾದ ಮಾರ್ಗವನ್ನು ಗೂಗಲ್‌ ಮ್ಯಾಪ್‌ ಲಿಂಕ್‌ ಮಾಡಿದ್ದು ಇದರ ಮೂಲಕ ಯಾವುದೇ ತೊಡಕುಗಳಿಲ್ಲದೆ ಬರಬಹುದಾಗಿದೆ.

ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಯುವನಿಧಿ  ಯೋಜನೆಯ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೆ, ಅಂತಿಮ ವರ್ಷಗಳ ಸೆಮಿಸ್ಟರ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೊಮಾ, ಪದವಿ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆಗಾಗಿ ಅ ಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವ ವಿದ್ಯಾರ್ಥಿಗಳ ಹೆಸರು, ಮೊಬೈಲ್‌ ನಂಬರ್‌ ಸಂಗ್ರಹಿಸಲಾಗಿದ್ದು ಸುರಕ್ಷೆ ದೃಷ್ಟಿಯಿಂದ ನೋಡಲ್‌ ಅಧಿ ಕಾರಿಗಳನ್ನು ನೇಮಿಸಲಾಗಿದೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್‌ ಪಾಟೀಲ್‌ ಹಾಗೂ ಶಿಕ್ಷಣ ಹಾಗೂ ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಊಟೋಪಾಚಾರ ಹಾಗೂ ಮೂಲಸೌಕರ್ಯ ಒದಗಿಸಲು ಅಗತ್ಯವಿರುವ ಎಲ್ಲ ಕ್ರಮಗಳ ಬಗ್ಗೆ ವಿಶೇಷ ನಿಗಾ ಇರಿಸಿದ್ದಾರೆ.

ಏನಿದು ಯೋಜನೆ?
2023ರಲ್ಲಿ ಪದವಿ ಅಥವಾ ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 2 ವರ್ಷಗಳ ವರೆಗೆ ನಿರುದ್ಯೋಗ ಭತ್ತೆ ನೀಡುವ ಯೋಜನೆ ಇದಾಗಿದೆ. ಅದರಂತೆ ಪದವೀಧರರಿಗೆ ಪ್ರತೀ ತಿಂಗಳು 3 ಸಾವಿರ ರೂ., ಡಿಪ್ಲೋಮಾ ಮಾಡಿದವರಿಗೆ 1,500 ರೂ.ಗಳನ್ನು ನೀಡಲಾಗುತ್ತದೆ. ಗರಿಷ್ಠ 2 ವರ್ಷಗಳವರೆಗೆ ಅಥವಾ ಕೆಲಸ ಸಿಗುವವರೆಗೆ ಈ ಭತ್ತೆ ಸಿಗಲಿದೆ.

2022-23ರಲ್ಲಿ ಪದವಿ/ಡಿಪ್ಲೋಮಾ ಮುಗಿಸಿದವರು- 5.29 ಲಕ್ಷ
ಆನ್‌ಲೈನ್‌ನಲ್ಲಿ ನೋಂದಣಿ ಮಾಡಿದವರು- 61,700
ಯಾರು ಅರ್ಹರು?
 2023ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು
 ಪದವಿ/ಡಿಪ್ಲೋಮಾ ಮುಗಿಸಿದ ಬಳಿಕ ಕನಿಷ್ಠ 6 ತಿಂಗಳವರೆಗೆ ಸರಕಾರಿ ಅಥವಾ ಖಾಸಗಿ ಉದ್ಯೋಗ ಹೊಂದಿಲ್ಲದವರು
 ಸ್ವಯಂ ಉದ್ಯೋಗ ಹೊಂದಿಲ್ಲದವರು
 ಉನ್ನತ ವ್ಯಾಸಂಗ ಮುಂದುವರಿಸದೆ ಇರುವವರು
 ಕರ್ನಾಟಕದಲ್ಲಿ ವಾಸವಿರುವವರು
ಯಾರು ಅರ್ಹರಲ್ಲ?
 ಉನ್ನತ ವ್ಯಾಸಂಗಕ್ಕೆ ದಾಖಲಾತಿ ಪಡೆದು ವಿದ್ಯಾಭ್ಯಾಸ ಮುಂದುವರಿಸುವವರು
ಶಿಷ್ಯ ವೇತನ ಪಡೆಯುತ್ತಿರುವವರು
ಸರಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರು

ನಮ್ಮದು ನುಡಿದಂತೆ ನಡೆಯುವ ಸರಕಾರ. ವಿಧಾನಸಭಾ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಐದೂ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ್ದೇವೆ. ದೇಶದ ಜನತೆ ಕರ್ನಾಟಕ ಮಾದರಿಯ ಆಡಳಿತ ಎದುರು ನೋಡುತ್ತಿದ್ದಾರೆ.
– ಡಾ| ಶರಣ್‌ ಪ್ರಕಾಶ್‌ ಪಾಟೀಲ್‌, ವೈದ್ಯಕೀಯ ಶಿಕ್ಷಣ ಸಚಿವ

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.