Bangladesh: ಹೊಂಡಕ್ಕೆ ಉರುಳಿದ ಬಸ್; ಮಕ್ಕಳು ಸೇರಿ 17 ಮಂದಿ ದುರ್ಮರಣ
Team Udayavani, Jul 23, 2023, 11:04 AM IST
ಢಾಕಾ: ಹೊಂಡಕ್ಕೆ ಬಸ್ ಉರುಳಿ ಬಿದ್ದು ಕನಿಷ್ಠ 17 ಮಂದಿ ಮೃತಪಟ್ಟಿರುವ ಘಟನೆ ಬಾಂಗ್ಲಾದೇಶದ ಛತ್ರಕಾಂಡ ಪ್ರದೇಶದ ಜಲಕತಿ ಸದರ್ ಉಪಜಿಲಾ ವ್ಯಾಪ್ತಿಯಲ್ಲಿ ಶನಿವಾರ (ಜು.22 ರಂದು) ನಡೆದಿರುವುದು ವರದಿಯಾಗಿದೆ.
52 ಜನರನ್ನು ಹೊತ್ತೊಯ್ಯುವ ಸಾಮರ್ಥ್ಯವುಳ್ಳ ಬಸ್ಸಿನಲ್ಲಿ 60 ಕ್ಕೂ ಹೆಚ್ಚಿನ ಮಂದಿಯನ್ನು ಹೊತ್ತುಕೊಂಡು ಹೋಗಲಾಗುತ್ತಿತ್ತು. ಬೆಳಗ್ಗೆ 9:00 ಗಂಟೆ ಸುಮಾರಿಗೆ ಪಿರೋಜ್‌ಪುರದ ಭಂಡಾರಿಯಾದಿಂದ ಹೊರಟು 10:00 ಗಂಟೆ ಸುಮಾರಿಗೆ ಬಾರಿಶಾಲ್-ಖುಲ್ನಾ ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಛತ್ರಕಾಂಡದಲ್ಲಿ ರಸ್ತೆ ಬದಿಯ ನೀರಿನ ಹೊಂಡಕ್ಕೆ ಬಸ್ ಉರುಳಿ ಬಿದ್ದಿದೆ.
ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. 35 ಮಂದಿಗೆ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.
ಚಾಲಕನ ನಿರ್ಲಕ್ಯ ಹಾಗೂ ಬಸ್ಸಿನಲ್ಲಿ ಹೆಚ್ಚಿನ ಜನರನ್ನು ಹಾಕಿದ್ದರಿಂದಲೇ ಈ ಘಟನೆ ಸಂಭವಿಸಿದೆ ಎಂದು ಬದುಕುಳಿದವರು ಹೇಳಿದ್ದಾರೆ.
ಇದನ್ನೂ ಓದಿ: Online Gambling: ಆನ್‌ಲೈನ್ ಜೂಜಾಟ; 5 ಕೋಟಿ ಗೆದ್ದು, 58 ಕೋಟಿ ರೂ. ಕಳೆದುಕೊಂಡ ಉದ್ಯಮಿ
“ನಾನು ಭಂಡಾರಿಯಾದಿಂದ ಬಸ್ ಹತ್ತಿದೆ. ಬಸ್ ಪ್ರಯಾಣಿಕರಿಂದ ತುಂಬಿ ತುಳುಕುತ್ತಿತ್ತು. ಕೆಲವರು ಹಜಾರದಲ್ಲಿ ನಿಂತಿದ್ದರು. ಚಾಲಕ ಮೇಲ್ವಿಚಾರಕರೊಂದಿಗೆ ಮಾತನಾಡುತ್ತಿರುವುದನ್ನು ನಾನು ನೋಡಿದೆ. ಇದ್ದಕ್ಕಿದ್ದಂತೆ ಬಸ್ ರಸ್ತೆಯಿಂದ ಕೆಳಗಿಳಿದು ಅಪಘಾತಕ್ಕೀಡಾಗಿದೆ” ಎಂದು ಬದುಕುಳಿದ ಎಂಡಿ ಮೊಮಿನ್ ಹೇಳಿದರು.
17 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಉಳಿದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಬಾರಿಶಾಲ್ ವಿಭಾಗೀಯ ಆಯುಕ್ತ ಎಂಡಿ ಶೌಕತ್ ಅಲಿ ದೃಢಪಡಿಸಿದ್ದಾರೆ ಎಂದು ಡೈಲಿ ಸ್ಟಾರ್ ವರದಿ ಮಾಡಿದೆ.
ಮೃತರಲ್ಲಿ ಹೆಚ್ಚಿನವರು ಪಿರೋಜ್‌ಪುರದ ಭಂಡಾರಿಯಾ ಉಪಜಿಲಾ ಮತ್ತು ಜಲ್ಕತಿಯ ರಾಜಾಪುರ ಪ್ರದೇಶದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.