ಲಂಡನ್ ದಾಳಿ ಉಗ್ರನಿಗೆ ಪಿಒಕೆ ನಂಟು
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹತ್ಯೆಗೂ ಸಂಚು ರೂಪಿಸಿದ್ದ ಮಾಹಿತಿ ಬಹಿರಂಗ
Team Udayavani, Dec 1, 2019, 6:10 AM IST
ಲಂಡನ್: ಬ್ರಿಟನ್‌ಗೆ ಮತ್ತೆ ಉಗ್ರರು ವಕ್ಕರಿಸಿದ್ದು, ಇಲ್ಲಿನ ಲಂಡನ್ ಬ್ರಿಡ್ಜ್ ಬಳಿ ಪಾಕಿಸ್ಥಾನ ಮೂಲದ ಉಗ್ರ ಉಸ್ಮಾನ್ ಖಾನ್ ಶುಕ್ರವಾರ ರಾತ್ರಿ ನಡೆಸಿದ ಚೂರಿ ದಾಳಿಗೆ ಇಬ್ಬರು ಅಸುನೀಗಿದ್ದಾರೆ. ಕೂಡಲೇ ಸುತ್ತುವರಿದ ಪೊಲೀಸರು ಆತನನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಉಗ್ರ ಉಸ್ಮಾನ್ ಕುರಿತ ಅನೇಕ ಮಾಹಿತಿಗಳನ್ನು ಶನಿವಾರ ಪೊಲೀಸರು ಬಹಿರಂಗಪಡಿಸಿದ್ದಾರೆ. ಈತ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ತನ್ನ ಕುಟುಂಬ ಹೊಂದಿದ್ದ ಜಮೀನಿನಲ್ಲೇ ಭಯೋತ್ಪಾದಕ ತರಬೇತಿ ಶಿಬಿರವನ್ನು ಆರಂಭಿಸಿದ್ದ. ಜತೆಗೆ ಲಂಡನ್ ಷೇರು ಮಾರುಕಟ್ಟೆ ಮೇಲಿನ ಬಾಂಬ್ ದಾಳಿಗೆ ಸಂಚು ರೂಪಿಸಿ 7 ವರ್ಷ ಜೈಲು ಶಿಕ್ಷೆ ಅನುಭವಿಸಿ ಬಂದವನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌ರನ್ನು ಕೊಲೆ ಮಾಡುವುದೂ ಈತನ ಸಂಚಿನ ಭಾಗವಾಗಿತ್ತು ಮತ್ತು ಮುಂಬಯಿ ದಾಳಿ ಮಾದರಿಯಲ್ಲೇ ಯುಕೆ ಸಂಸತ್ ಮೇಲೆ ದಾಳಿ ನಡೆಸುವ ಕುರಿತೂ ಈತ ಚರ್ಚಿಸಿದ್ದ ಎಂಬ ಸ್ಫೋಟಕ ವಿಚಾರವನ್ನೂ ಬಹಿರಂಗಪಡಿಸಿದ್ದಾರೆ.
ಉಗ್ರ ನಂಟು
ಪಾಕ್ ಮೂಲದವನಾದ ಉಸ್ಮಾನ್ ಆರಂಭದಲ್ಲಿ ಅಲ್ ಕಾಯಿದಾ ಸಂಘ ಟನೆಯ ಸದಸ್ಯನಾಗಿದ್ದ. ಅನಂತರದಲ್ಲಿ ಇಸ್ಲಾಮಿಕ್ ಸ್ಟೇಟ್(ಐಸಿಸ್) ಜತೆಗೂ ನಂಟು ಹೊಂದಿದ್ದರ ಬಗ್ಗೆ ಮಾಹಿತಿಯಿದೆ ಎಂದು ಪೊಲೀಸರು ಹೇಳಿದ್ದಾರೆ. ಷೇರುಪೇಟೆ ಸ್ಫೋಟ ಸಂಚು ಪ್ರಕರಣ ಸಂಬಂಧ ಶಿಕ್ಷೆಗೊಳಗಾಗಿದ್ದ ಈತನನ್ನು ಕಳೆದ ಡಿಸೆಂಬರ್‌ನಲ್ಲಿ ಪೆರೋಲ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು. ಅನಂತರವೂ ಆತನ ಚಲನವಲನಗಳ ಮೇಲೆ ಕಣ್ಣಿಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.