ಭಾರೀ ಮಳೆ,ಪ್ರವಾಹಕ್ಕೆ ಆಸ್ಟ್ರೇಲಿಯಾ ತತ್ತರ;ರಸ್ತೆಗಳಲ್ಲಿ ಮೊಸಳೆ,ಹಾವು
Team Udayavani, Feb 4, 2019, 1:00 PM IST
ಸಿಡ್ನಿ: ಭಾರೀ ಮಳೆಯಿಂದಾಗಿ ಆಸ್ಟ್ರೇಲಿಯಾ ಈಶಾನ್ಯ ಭಾಗ ಪ್ರವಾಹದಿಂದ ತತ್ತರಿಸಿಹೋಗಿದ್ದು, ಸಾವಿರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲದೇ ರಸ್ತೆಗಳಲ್ಲಿ ಮೊಸಳೆ, ಹಾವುಗಳು ಪ್ರತ್ಯಕ್ಷವಾಗುವ ಮೂಲಕ ಜನರು ಭಯಭೀತರಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಆಸ್ಟ್ರೇಲಿಯಾದಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಮತ್ತಷ್ಟು ಭಾರೀ ಗಾಳಿ ಮತ್ತು ಮಳೆಯಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಕ್ವೀನ್ಸ್ ಲ್ಯಾಂಡ್ ರಾಜ್ಯದ ಟೌನ್ಸ್ ವಿಲ್ಲೆ ಸಂಪೂರ್ಣ ಜಲಾವೃತವಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಮನೆಗಳಲ್ಲಿ ಸುರಕ್ಷಿತವಾಗಿ ಹೊರಬರುವಂತೆ ಹಗ್ಗಗಳನ್ನು ಇಳಿಬಿಡಲಾಗಿದೆ ಎಂದು ವರದಿ ವಿವರಿಸಿದೆ.
ಭಾರೀ ಮಳೆಯಿಂದಾಗಿ ರೋಸ್ ರಿವರ್ ಡ್ಯಾಂನ ಗೇಟ್ ಗಳನ್ನು ತೆರದು ಸುಮಾರು 1,900 ಕ್ಯೂಬಿಕ್ ಮೀಟರ್ ನಷ್ಟು ನೀರನ್ನು ಹೊರಬಿಟ್ಟಿದ್ದು, ಇದರಿಂದಾಗಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ನೂರು ಮಿಲಿ ಮೀಟರ್ ನಷ್ಟು ಮಳೆ ಸುರಿದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.