2021: ಅತೀ ಉಷ್ಣದ ವರ್ಷ
Team Udayavani, Jan 21, 2022, 6:20 AM IST
ಮೆಲ್ಬರ್ನ್: ಭೂಮಿಯ ತಾಪಮಾನವನ್ನು ದಾಖಲಿಸುವ ತಂತ್ರಜ್ಞಾನ ಜಾರಿಗೊಂಡಾಗಿ ನಿಂದ ಇಲ್ಲಿಯವರೆಗಿನ ಅಂಕಿ-ಅಂಶಗಳ ಪ್ರಕಾರ, 2021ರಲ್ಲಿ ಭೂಮಿಯ ತಾಪಮಾನ ತೀವ್ರವಾಗಿ ಹೆಚ್ಚಾಗಿತ್ತೆಂದು ವರ್ಲ್ಡ್ ಮೆಟೆರೋಲಾಜಿಕಲ್ ಆರ್ಗನೈಸೇಶನ್ (ಡಬ್ಲ್ಯುಎಂಒ) ಹೇಳಿದೆ.
2021ರಲ್ಲಿ ಭೂ ತಾಪಮಾನ, ಕೈಗಾರಿಕಾ ಪೂರ್ವ ವಿಶ್ವದಲ್ಲಿದ್ದ ತಾಪಮಾನಕ್ಕಿಂತ 1.11 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣಾಂಶವನ್ನು ದಾಖಲಿಸಿತ್ತೆಂದು ಡಬ್ಲ್ಯುಎಂಒ ಹೇಳಿದೆ.
ಭೂಮಿಯ ಉಷ್ಣಾಂಶ ದಾಖಲಿಸುವ ವ್ಯವಸ್ಥೆ ಬಂದಾಗಿನಿಂದ ಇಲ್ಲಿಯವರೆಗೆ ಒಟ್ಟು ಎಂಟು ಬಾರಿ ಭೂಮಿಯಲ್ಲಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. 2021ರಲ್ಲಿ ಮತ್ತಷ್ಟು ಹೆಚ್ಚಿನ ಉಷ್ಣಾಂಶ ದಾಖಲಾಗಿತ್ತೆಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಅಸಲಿಗೆ, 2021ರ ಆರಂಭದಲ್ಲಿ ಹಾಗೂ ಅಂತ್ಯವು, ಲಾ ನಿನಾ (ಆಗಾಗ ಸಂಭವಿಸುವ ತಂಪು ಹವಾಮಾನ ವೈಪರೀತ್ಯ) ಮಾರುತಗಳ ಸುಳಿಗೆ ಸಿಲುಕಿತ್ತು. ಆದರೆ ಇದರ ಪ್ರಭಾವ ಆಸ್ಟ್ರೇಲಿಯಾ ಹಾಗೂ ಕೆಲವು ದೇಶಗಳಿಗೆ ಮಾತ್ರ ಸೀಮಿತವಾಗಿತ್ತು. ಉಳಿದ ರಾಷ್ಟ್ರಗಳಲ್ಲಿ ತಾಪಮಾನ ಏರಿಕೆಯಾಗಿತ್ತೆಂದು ತಜ್ಞರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.