Tragedy: ಅಮಾಯಕರ ಮೇಲೆ ಬಂದೂಕುಧಾರಿಗಳಿಂದ ಗುಂಡಿನ ದಾಳಿ… 21 ಮಂದಿ ಮೃತ್ಯು
Team Udayavani, Aug 20, 2023, 9:27 AM IST
ಮಾಲಿ: ಮಧ್ಯ ಮಾಲಿಯ ಬಂಡಾಯ ಪೀಡಿತ ಮೋಪ್ತಿ ಪ್ರದೇಶದ ಹಳ್ಳಿಯೊಂದರ ಮೇಲೆ ಬಂದೂಕುಧಾರಿಗಳು ನಡೆಸಿದ ದಾಳಿಯಲ್ಲಿ ಕನಿಷ್ಠ 21 ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದುಷ್ಕರ್ಮಿಗಳು ಬಂಡಿಯಾಗರಾ ಪಟ್ಟಣದ ಸಮೀಪವಿರುವ ಯಾರೌ ಗ್ರಾಮವನ್ನು ಗುರಿಯಾಗಿಸಿಕೊಂಡು ಮಧ್ಯಾಹ್ನ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದು ಮೂಲಗಳ ಪ್ರಕಾರ ಇದು ನಿಜವಾದ ಹತ್ಯಾಕಾಂಡವಾಗಿದೆ, ಶಸ್ತ್ರಸಜ್ಜಿತ ಪುರುಷರ ತಂಡ ಹಳ್ಳಿಗೆ ನುಗ್ಗಿ ಜನರ ಮೇಲೆ ಮನಬಂದಂತೆ ಗುಂಡು ಹಾರಿಸಿದರು. ಇದರಿಂದ 20 ರಿಂದ 30 ಜನರು ಸಾವನ್ನಪ್ಪಿರಬಹುದು ಮತ್ತು ಹಲವರು ಗಾಯಗೊಂಡಿದ್ದಾರೆ” ಎಂದು ಇಲ್ಲಿನ ಸುದ್ದಿ ಸಂಸ್ಥೆಯೊಂದು ಮಾಹಿತಿ ನೀಡಿದೆ.
ಇನ್ನೊಂದು ಮೂಲಗಳ ಪ್ರಕಾರ ಮಹಿಳೆಯರು ಸೇರಿ ಸುಮಾರು ಇಪ್ಪತ್ತೊಂದು ಮಂದಿ ಜನ ಸಾವನ್ನಪ್ಪಿದ್ದು ಸುಮಾರು ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಸದ್ಯ ದಾಳಿಯ ಹೊಣೆಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ ಎಂದು ಹೇಳಲಾಗಿದ್ದು ಘಟನೆಯಲ್ಲಿ ಇಪ್ಪತ್ತೊಂದು ಅಮಾಯಕರು ಜೀವ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ: Ladakh: ಸೇನಾ ಟ್ರಕ್ ಉರುಳಿ ಬಿದ್ದು 9 ಯೋಧರು ಹುತಾತ್ಮ: ಪ್ರಧಾನಿ ಮೋದಿ ಸಂತಾಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.