Northwest China: ರೆಸ್ಟೋರೆಂಟ್‌ನಲ್ಲಿ ಸ್ಫೋಟ; 31 ಮಂದಿ ಬಲಿ
Team Udayavani, Jun 22, 2023, 9:35 AM IST
ಸಾಂದರ್ಭಿಕ ಚಿತ್ರ
ಬೀಜಿಂಗ್: ರೆಸ್ಟೋರೆಂಟ್ ವೊಂದರಲ್ಲಿ ಅನಿಲ ಸೋರಿಕೆ ಉಂಟಾಗಿ 31 ಮಂದಿ ಮೃತಪಟ್ಟಿರುವ ಘಟನೆ ಚೀನಾದ ವಾಯುವ್ಯ ನಿಂಗ್ಕ್ಸಿಯಾದಲ್ಲಿ ನಡೆದಿರುವುದು ವರದಿಯಾಗಿದೆ.
ಬುಧವಾರ ರಾತ್ರಿ 8:40 ರ ಸಮಯದಲ್ಲಿ ಯಿಂಚುವಾನ್‌ನಲ್ಲಿರುವ ಬಾರ್ಬೆಕ್ಯೂ ರೆಸ್ಟೋರೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಡ್ರ್ಯಾಗನ್ ಬೋಟ್ ಫೆಸ್ಟಿವಲ್ ತಯಾರಿಗೆ ಜನ ಸೇರಿದ್ದ ವೇಳೆ ಸ್ಫೋಟ ಸಂಭವಿಸಿದೆ ಎಂದುʼ ಕ್ಸಿನ್ಹುವಾʼ ವರದಿ ಮಾಡಿದೆ.
ರೆಸ್ಟೋರೆಂಟ್‌ನಲ್ಲಿ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾದ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ ಒಟ್ಟು 31 ಮಂದಿ ಮೃತಪಟ್ಟಿದ್ದು, 7 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಅನಿಲ ಮತ್ತು ರಾಸಾಯನಿಕ ಸ್ಫೋಟಗಳು ಸಂಭವಿಸುವುದು ಚೀನಾದಲ್ಲಿ ಹೊಸತಲ್ಲ. ಈ ಹಿಂದೆ 2015 ರಲ್ಲಿ, ಉತ್ತರ ಬಂದರು ನಗರವಾದ ಟಿಯಾಂಜಿನ್‌ನಲ್ಲಿ ಸರಣಿ ಸ್ಫೋಟಗಳು ಸಂಭವಿಸಿ 173 ಮಂದಿ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.