Bangladesh; ಪ್ರತಿಭಟನಾಕಾರರು vs ಆಡಳಿತ ಪಕ್ಷದ ಬೆಂಬಲಿಗರ ಘರ್ಷಣೆ: 93 ಸಾವು
Team Udayavani, Aug 4, 2024, 7:30 PM IST
ಢಾಕಾ: ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳ ಚಳವಳಿ ಘೋಷಿಸಿದ ಅಸಹಕಾರ ಚಳವಳಿಯ ಮೊದಲ ದಿನವೇ ಭಾನುವಾರ(ಆಗಸ್ಟ್ 4 ) ಬಾಂಗ್ಲಾದೇಶದಲ್ಲಿ ಪ್ರತಿಭಟನಾಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರ ನಡುವಿನ ಹಿಂಸಾತ್ಮಕ ಘರ್ಷಣೆ ನಡೆದಿದ್ದು ಕನಿಷ್ಠ 93 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ.
ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರು ಅವಾಮಿ ಲೀಗ್, ಛಾತ್ರ ಲೀಗ್ ಮತ್ತು ಜುಬೋ ಲೀಗ್ ಕಾರ್ಯಕರ್ತರಿಂದ ವಿರೋಧವನ್ನು ಎದುರಿಸಿದಾಗ ಬೆಳಗ್ಗೆ ಭಾರೀ ಘರ್ಷಣೆ ನಡೆದಿದೆ.
”ಬಾಂಗ್ಲಾದೇಶದಾದ್ಯಂತ 13 ಜಿಲ್ಲೆಗಳಲ್ಲಿ ನಡೆದ ಘರ್ಷಣೆಗಳಲ್ಲಿ 93 ಜನರು ಸಾವನ್ನಪ್ಪಿದ್ದಾರೆ” ಎಂದು ಪ್ರೋಥೋಮ್ ಅಲೋ ಪತ್ರಿಕೆ ವರದಿ ಮಾಡಿದೆ.
ಭಾನುವಾರ ಸಂಜೆ 6 ಗಂಟೆಯಿಂದ ದೇಶಾದ್ಯಂತ ಅನಿರ್ದಿಷ್ಟಾವಧಿ ಕರ್ಫ್ಯೂ ಹೇರಲು ಗೃಹ ಸಚಿವಾಲಯ ನಿರ್ಧರಿಸಿದೆ. ಸರ್ಕಾರಿ ಏಜೆನ್ಸಿಯೊಂದು ಮೆಟಾ ಪ್ಲಾಟ್‌ಫಾರ್ಮ್‌ಗಳಾದ ಫೇಸ್‌ಬುಕ್, ಮೆಸೆಂಜರ್, ವಾಟ್ಸಾಪ್ ಮತ್ತು ಇನ್‌ಸ್ಟಾಗ್ರಾಮ್ ಅನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದೆ. 4G ಮೊಬೈಲ್ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸುವಂತೆ ಮೊಬೈಲ್ ಆಪರೇಟರ್‌ಗಳಿಗೆ ಆದೇಶಿಸಲಾಗಿದೆ ಎಂದು ಪತ್ರಿಕಾ ವರದಿಯಲ್ಲಿ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.