ಆಫ್ರಿಕಾದ 344 ವರ್ಷ ವಯಸ್ಸಿನ ಆಮೆ ಸಾವು!
Team Udayavani, Oct 6, 2019, 5:14 AM IST
ಲಾಗೋಸ್: ಆಮೆಗಳ ಸರಾಸರಿ ವಯಸ್ಸು 100 ವರ್ಷ. ಆದರೆ ಆಫ್ರಿಕಾ ಖಂಡದಲ್ಲಿ ಒಂದು ಆಮೆ 344 ವರ್ಷಗಳವರೆಗೆ ಬದುಕಿತ್ತು. ಇತ್ತೀಚೆಗಷ್ಟೇ ಈ ಆಮೆ ಕೊನೆಯುಸಿರೆಳೆಯಿತು ಎಂಬುದು ತಿಳಿದುಬಂದಿದೆ. ಈ ಆಮೆಗೆ ಅಲಗ್ಬಾ ಎಂದು ಹೆಸರಿ ಡಲಾಗಿದ್ದು, ದಕ್ಷಿಣ ನೈಜೀರಿಯಾದ ಅರಮನೆಯಲ್ಲಿತ್ತು.
ಇಲ್ಲಿನ ರಾಜ ಜಿಮೋಹ ಒಯೆವುನಿ¾ ಆಪ್ತ ಸಹಾಯಕರು ಆಮೆ ಸಾವನ್ನಪ್ಪಿದ ಮಾಹಿತಿಯನ್ನು ಪ್ರಕಟಿಸಿದ್ದಾರೆ. ಈ ಆಮೆಯನ್ನು ನೋಡಲೆಂದೇ ವಿಶ್ವದ ವಿವಿಧೆಡೆಯಿಂದ ಪ್ರವಾಸಿಗರು ಆಗಮಿಸುತ್ತಿದ್ದರು. ಆಮೆಯ ಯೋಗಕ್ಷೇಮ ನೋಡಿಕೊಳ್ಳಲು ಇಬ್ಬರು ಸಿಬಂದಿ ಯನ್ನೂ ಅರಮನೆ ನೇಮಿಸಿತ್ತು. ಆಮೆಯು ಅರಮನೆಗೆ ಐಶ್ವರ್ಯ ವನ್ನು ತರುತ್ತದೆ ಎಂದು ಇಲ್ಲಿನ ಜನರು ನಂಬಿದ್ದಾರೆ.
ಅಷ್ಟೇ ಅಲ್ಲ, ಈ ಆಮೆ ರೋಗ ಗುಣಪಡಿಸುವ ಶಕ್ತಿಯನ್ನೂ ಹೊಂದಿತ್ತು ಎಂದು ಅರಮನೆಯ ನೌಕರರು ಹೇಳುತ್ತಾರೆ. ಹಲವರು ಈ ಆಮೆಯಿಂದಾಗಿ ಗುಣವಾ ಗಿದ್ದಾರಂತೆ. ಆದರೆ ಪ್ರಾಣಿ ತಜ್ಞರು ಈ ಆಮೆಯ ವಯಸ್ಸು 344 ಎಂಬ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.