Russia: ನದಿಯಲ್ಲಿ ಮುಳುಗಿ ಭಾರತೀಯ ಮೂಲದ ನಾಲ್ವರು ವಿದ್ಯಾರ್ಥಿಗಳ ದುರಂತ ಅಂತ್ಯ
Team Udayavani, Jun 7, 2024, 1:45 PM IST
ಮಾಸ್ಕೋ: ನಾಲ್ವರು ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳು ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ ಬಳಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ರಷ್ಯಾದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಾಲ್ವರು ವಿದ್ಯಾರ್ಥಿಗಳ ಪೈಕಿ ಇಬ್ಬರು ಹುಡುಗರು ಮತ್ತು ಇಬ್ಬರು ಹುಡುಗಿಯರು ಎಂದು ಹೇಳಲಾಗಿದೆ, ವೆಲಿಕಿ ನವ್ಗೊರೊಡ್ ನಗರದ ಹತ್ತಿರದ ನವ್ಗೊರೊಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಓದುತ್ತಿದ್ದರು ಎಂದು ಹೇಳಲಾಗಿದೆ.
ನಾಲ್ವರ ಶವಗಳನ್ನು ಆದಷ್ಟು ಬೇಗ ಅವರ ಸಂಬಂಧಿಕರಿಗೆ ಕಳುಹಿಸಲು ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ರಷ್ಯಾದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿವೆ ಎಂದು ಹೇಳಲಾಗುತ್ತಿದೆ.
ವೋಲ್ಖೋವ್ ನದಿಯಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬಳು ಮುಳುಗುತ್ತಿರುವುದನ್ನು ಗಮನಿಸಿದ ಇತರ ನಾಲ್ವರು ಸಹಪಾಠಿಗಳು ಆಕೆಯ ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ನಾಲ್ವರು ನೀರಿನಲ್ಲಿ ಮುಳುಗಿದ್ದಾರೆ ಈ ವೇಳೆ ಅಲ್ಲಿದ್ದ ಕೆಲವರು ಓರ್ವ ಭಾರತೀಯನನ್ನು ರಕ್ಷಣೆ ಮಾಡಿದ್ದಾರೆ ಉಳಿದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ರಷ್ಯಾದ ಮಾಧ್ಯಮಗಳು ವರದಿ ಮಾಡಿವೆ. ರಕ್ಷಣೆ ಮಾಡಿರುವ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Mangaluru: ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ: ಹರೀಶ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.