ಜಪಾನ್ ಪ್ರಜೆ ಹತ್ಯೆಗೈದ ಐವರು ಬಾಂಗ್ಲಾ ಉಗ್ರರಿಗೆ ಮರಣ ದಂಡನೆ
Team Udayavani, Feb 28, 2017, 12:27 PM IST
ಢಾಕಾ : 2015ರಲ್ಲಿ 66ರ ಹರೆಯದ ಜಪಾನಿನ ಪ್ರಜೆಯನ್ನು ಗುಂಡಿಕ್ಕಿ ಹತ್ಯೆಗೈದಿದ್ದ ನಿಷೇಧಿತ ಜೆಎಂಬಿ ಉಗ್ರ ಸಂಸ್ಥೆಯ ಐವರು ಭಯೋತ್ಪಾದಕರಿಗೆ ಬಾಂಗ್ಲಾದೇಶದಲ್ಲಿ ಮರಣ ದಂಡನೆ ಶಿಕ್ಷೆಯನ್ನು ವಿಧಿಸಲಾಗಿದೆ.
ಜಮಾತ್ ಮುಜಾಹಿದೀನ್ ಬಾಂಗ್ಲಾದೇಶ್ ಉಗ್ರ ಸಂಘಟನೆಯ ಐವರು ಭಯೋತ್ಪಾದಕರನ್ನು ನೇಣಿಗೆ ಹಾಕುವ ಶಿಕ್ಷೆಯನ್ನು ರಂಗಾಪುರದ ನ್ಯಾಯಾಲಯವು ಇಂದು ಪ್ರಕಟಿಸಿರುವುದಾಗಿ ಡೇಲಿ ಸ್ಟಾರ್ ವರದಿ ಮಾಡಿದೆ.
ಈ ಪ್ರಕರಣದ ಇನ್ನಿಬ್ಬರು ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗದಿರುವುದರಿಂದ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ.
ಜಪಾನಿನನ 66ರ ಹರೆಯದ ಕುನಿಯೋ ಹೋಶಿ ಎಂಬವರು 2015ರ ಮೇ ತಿಂಗಳಲ್ಲಿ ಬಾಂಗ್ಲಾದೇಶಕ್ಕೆ ಬಂದಿದ್ದರು. ಅದೇ ವರ್ಷ ಅಕ್ಟೋಬರ್ 3ರಂದು ಅವರನ್ನು ಉಗ್ರರು ರಂಗಾಪುರದಲ್ಲಿ ಗುಂಡಿಕ್ಕಿ ಸಾಯಿಸಿದ್ದರು. ಕುನಿಯೋ ಹೋಶಿ ಅವರು ರಂಗಾಪುರದ ಹೊರವಲಯದಲ್ಲಿ ಗ್ರಾಸ್ ಫಾರ್ಮ್ ರೂಪಿಸಿದ್ದರು.
ಸ್ಥಳೀಯರ ಪ್ರಕಾರ ಹೋಶಿ ಅವರು ಇಸ್ಲಾಮ್ ಗೆ ಮತಾಂತರಗೊಂಡಿದ್ದರು. ಢಾಕಾದಲ್ಲಿನ ರಾಜತಾಂತ್ರಿಕ ಪ್ರದೇಶದಲ್ಲಿ 50ರ ಹರೆಯದ ಇಟಲಿಯ ಪ್ರಜೆಯೊಬ್ಬರನ್ನು ಬೈಕಿನಲ್ಲಿ ಬಂದ ಉಗ್ರರು ಗುಂಡಿಕ್ಕಿ ಕೊಂದ ಐದು ದಿನಗಳ ತರುವಾಯ ಹೋಶಿ ಅವರ ಹತ್ಯೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.