Airstrike: ಗಾಜಾ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ… ಕನಿಷ್ಠ 500 ಮಂದಿ ಮೃತ್ಯು
Team Udayavani, Oct 18, 2023, 9:06 AM IST
ಗಾಜಾಪಟ್ಟಿ: ಮಂಗಳವಾರ ರಾತ್ರಿ ಗಾಜಾಪಟ್ಟಿಯಲ್ಲಿರುವ ಆಸ್ಪತ್ರೆಯೊಂದರ ಮೇಲೆ ವೈಮಾನಿಕ ದಾಳಿ ನಡೆದು ಮಕ್ಕಳು ಮಹಿಳೆಯರು ಸೇರಿದಂತೆ ಕನಿಷ್ಠ 500 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲಸ್ತೀನ್ ಅಧಿಕಾರಿಗಳು ಆರೋಪಿಸಿದ್ದಾರೆ.
ಹಮಾಸ್ ಕೂಡ ಇದು ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿ ಎಂದು ಆರೋಪಿಸಿದೆ ಆದರೆ ಈ ಆರೋಪಗಳನ್ನು ತಳ್ಳಿಹಾಕಿದ ಇಸ್ರೇಲ್ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪಿನಿಂದ ತಪ್ಪಾಗಿ ಹಾರಿದ ರಾಕೆಟ್ ಆಸ್ಪತ್ರೆಗೆ ಅಪ್ಪಳಿಸಿದೆ ಎಂದು ಹೇಳಿಕೊಂಡಿದೆ.
ಬೈಡನ್ ಜೋರ್ಡಾನ್ ಭೇಟಿ ರದ್ದು:
ಇಸ್ರೇಲ್‌ಗೆ ಒಗ್ಗಟ್ಟು ವ್ಯಕ್ತಪಡಿಸಲು ಯುಎಸ್ ಅಧ್ಯಕ್ಷ ಜೋ ಬಿಡನ್ ಟೆಲ್ ಅವಿವ್‌ಗೆ ಭೇಟಿ ನೀಡಿದ ಮುನ್ನಾದಿನದಂದು ಈ ದಾಳಿ ನಡೆದಿದೆ.
ಅವಘಡದಿಂದಾಗಿ ಜೋರ್ಡಾನ್‌ನ ಅಮ್ಮನ್‌ನಲ್ಲಿ ಆಯೋಜಿಸಿದ್ದ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಇತರ ಅರಬ್ ನಾಯಕರ ನಡುವಿನ ಶೃಂಗಸಭೆಯನ್ನು ರದ್ದುಗೊಳಿಸಲಾಗಿದೆ. ಜೋರ್ಡಾನ್‌ನ ವಿದೇಶಾಂಗ ಸಚಿವ ಅಬ್ದುಲ್ಲಾ ಅವರು, ಈಜಿಪ್ಟ್‌ನ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸ್ಸಿ ಮತ್ತು ಪ್ಯಾಲೆಸ್ಟೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಬೈಡ್‌ನ್ ನಡೆಸಬೇಕಿದ್ದ ಶೃಂಗಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಿದ್ದಾರೆ.
ಇಸ್ರೇಲ್ ಗೆ ಬೈಡನ್ ಭೇಟಿ:
ಗಾಜಾ ಮೇಲೆ ವೈಮಾನಿಕ ದಾಳಿಯಿಂದಾಗಿ ಜೋರ್ಡಾನ್ ಭೇಟಿ ರದ್ದು ಮಾಡಿದ ಅಮೆರಿಕ ಅಧ್ಯಕ್ಷ ಜೊ ಬೈಡನ್ ಇಂದು ಇಸ್ರೇಲ್‌ಗೆ ಮಾತ್ರ ಭೇಟಿ ನೀಡಲಿದ್ದಾರೆ ಎಂದು ಶ್ವೇತಭವನದ ಅಧಿಕಾರಿ ತಿಳಿಸಿದ್ದಾರೆ.
ಕುಸಿಯುವ ಬಿಟಿಯಲ್ಲಿ ಆಸ್ಪತ್ರೆ ಕಟ್ಟಡ:
ವೈಮಾನಿಕ ದಾಳಿಗಳಿಂದಾಗಿ ಗಾಜಾ ಪಟ್ಟಿಯಲ್ಲಿನ ಆಸ್ಪತ್ರೆ ಕಟ್ಟಡ ಕುಸಿಯುವ ಹಂತದಲ್ಲಿದ್ದು, ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯಲ್ಲಿ 30,000 ಕ್ಕೂ ಹೆಚ್ಚು ಜನರು ಆಶ್ರಯ ಪಡೆದಿದ್ದಾರೆ. ಈ ಕಟ್ಟಡ ಕೂಡ ವೈಮಾನಿಕ ದಾಳಿಗೆ ತುತ್ತಾಗುವ ಭೀತಿಯಲ್ಲಿದೆ ಎಂದು ವರದಿ ಹೇಳಿದೆ.
ಇದನ್ನೂ ಓದಿ: Road collision: ಹೆದ್ದಾರಿ ಟೋಲ್ ಬಳಿ ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೇ ನಾಲ್ವರು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.