US; ಅಮೆರಿಕದಲ್ಲಿ ಭೀಕರ ಅಪಘಾತ: ಆಂಧ್ರದ ಶಾಸಕರ 6 ಸಂಬಂಧಿಗಳ ಮೃತ್ಯು
Team Udayavani, Dec 27, 2023, 6:39 PM IST
ಟೆಕ್ಸಾಸ್ : ಇಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಧ್ರ ಪ್ರದೇಶದ ಶಾಸಕರೊಬ್ಬರ 6 ಮಂದಿ ಸಂಬಂಧಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮುಮ್ಮಿಡಿವರಂ ಶಾಸಕ ಪಿ.ವೆಂಕಟ ಸತೀಶ್ ಕುಮಾರ್ ಅವರ ಸಂಬಂಧಿಕರಾದ ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಮಲಾಪುರಂ ಪಟ್ಟಣದ ಆರು ಮಂದಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದು, ದುರ್ದೈವಿಗಳು ಪಿ.ನಾಗೇಶ್ವರ ರಾವ್, ಸೀತಾ ಮಹಾಲಕ್ಷ್ಮೀ, ನವೀನ, ಕೃತಿಕ್, ನಿಶಿತಾ ಮತ್ತು ಕುಟುಂಬದ ಇನ್ನೊಬ್ಬ ಸಂಬಂಧಿಯೂ ಎಂದು ಗುರುತಿಸಲಾಗಿದೆ.
ಟೆಕ್ಸಾಸ್‌ನ ಕ್ಲೆಬರ್ನ್ ನಗರದ ಫಾರ್ಮ್ ಟು ಮಾರ್ಕೆಟ್ ರಸ್ತೆಯ ಹೆದ್ದಾರಿ 67 ರಲ್ಲಿ ಇಬ್ಬರು ಪ್ರಯಾಣಿಕರಿದ್ದ ಟ್ರಕ್‌ಗೆ ಮುಖಾಮುಖಿ ಢಿಕ್ಕಿ ಹೊಡೆದಾಗ ಕಾರಿನಲ್ಲಿ ಏಳು ಜನರು ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಲೋಕೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಿತಿ ಗಂಭೀರವಾಗಿದೆ ಎಂದು ಶಾಸಕ ಪಿ.ವೆಂಕಟ ಸತೀಶ್ ಕುಮಾರ್ ತಿಳಿಸಿದ್ದಾರೆ.
ಅಪಘಾತದಲ್ಲಿ ಭಾಗಿಯಾದವರ ಹೆಸರನ್ನು ಬಹಿರಂಗಪಡಿಸದೆ, ಟ್ರಕ್‌ನಲ್ಲಿ ಇಬ್ಬರು ಪ್ರಯಾಣಿಕರಿದ್ದು,ಅವರೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಟ್ರಕ್ ಚಾಲಕನದ್ದೇ ತಪ್ಪು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳ ವರದಿಗಳನ್ನು ಯುಎಸ್ ಮಾಧ್ಯಮಗಳು ಉಲ್ಲೇಖಿಸಿವೆ.
ಉತ್ತರ ಅಮೆರಿಕದ ತೆಲುಗು ಅಸೋಸಿಯೇಷನ್ ಮೃತದೇಹಗಳನ್ನು ಸ್ವದೇಶಕ್ಕೆ ತರಲು ನೆರವು ನೀಡುತ್ತಿದೆ.ಅಮಲಾಪುರಂ ನಿವಾಸಿಯಾಗಿರುವ ಪಿ.ವೆಂಕಟ ಕುಮಾರ್, ನಾಗೇಶ್ವರ ರಾವ್ ಅವರ ತಂದೆ ಪಿ. ಸತ್ಯ ರಾವ್ ಅವರ ಕಿರಿಯ ಸಹೋದರ ಎಂದು ಹೇಳಿದರು. ಅಪಘಾತದಲ್ಲಿ ಸಾವನ್ನಪ್ಪಿದ ನಾಗೇಶ್ವರ ರಾವ್ ಅವರ ಮಗಳು ಅಟ್ಲಾಂಟಾ ನಿವಾಸಿಯಾಗಿದ್ದಾರೆ. ಪಿ.ವೆಂಕಟ ಕುಮಾರ್ ಎರಡು ಬಾರಿ YSRCP ಪಕ್ಷದಿಂದ ಶಾಸಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.