bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್ ಸೈಕ್ಲೋನ್’ ಸ್ಫೋಟ!
320 ಲಕ್ಷ ಕೋಟಿ ಲೀ. ಮಳೆ ಸುರಿಯುವ ಸಾಧ್ಯತೆ | ಭಾರಿ ಮಳೆ, ಭೀಕರ ಗಾಳಿ, ಹಿಮ ಬೀಳುವ ನಿರೀಕ್ಷೆ
Team Udayavani, Nov 20, 2024, 5:38 AM IST
ವಾಷಿಂಗ್ಟನ್: ಅಮೆರಿಕದ ಪಶ್ಚಿಮ ಕರಾವಳಿಯಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದ್ದು, ಶೀಘ್ರದಲ್ಲೇ ಇಲ್ಲಿಗೆ “ಬಾಂಬ್ ಸೈಕ್ಲೋನ್’ ಅಪ್ಪಳಿಸುವ ಭೀತಿ ಎದುರಾಗಿದೆ. ಕ್ಯಾಲಿಫೋರ್ನಿಯಾ ಸೇರಿದಂತೆ ಹಲವು ನಗರಗಳಿಗೆ ಹವಾಮಾನ ಇಲಾಖೆ ಈ ಕುರಿತು ಎಚ್ಚರಿಕೆ ನೀಡಿದೆ.
ಈಗಾಗಲೇ ಪೆಸಿಫಿಕ್ ಸಾಗರದಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು, ಬುಧವಾರ ಅಥವಾ ಗುರುವಾರ ಇದು ತೀರಕ್ಕಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಚಂಡಮಾರುತ ಬರೋಬ್ಬರಿ 320 ಲಕ್ಷ ಕೋಟಿ ಲೀ. ನೀರನ್ನು ಹೊತ್ತು ತರುತ್ತಿದ್ದು, ಕರಾವಳಿ ನಗರಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಂಭವ ಹೆಚ್ಚಾಗಿದೆ. ಇದಲ್ಲದೇ ಈ ವೇಳೆ ಗಾಳಿಯ ವೇಗವೂ ಸಹ ವಿಪರೀತವಾಗಿರಲಿದ್ದು, ಎತ್ತರದ ಬೆಟ್ಟಗಳು ಮಂಜಿನಿಂದ ಆವೃತವಾಗಲಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
ಏನಿದು ಬಾಂಬ್ ಸೈಕ್ಲೋನ್?:
ಒಂದೇ ದಿನದಲ್ಲಿ ತಾಪಮಾನ ಗರಿಷ್ಠ ಪ್ರಮಾಣದಲ್ಲಿ ಕುಸಿತ ಕಂಡಾಗ ಸೃಷ್ಟಿಯಾಗುವ ಚಂಡಮಾರುತವನ್ನು ಬಾಂಬ್ ಸೈಕ್ಲೋನ್ ಎನ್ನಲಾಗುತ್ತದೆ. ಬಾಂಬ್ ಸ್ಫೋಟಗೊಂಡಾಗ ಸೃಷ್ಟಿಸುವ ಅನಾಹುತವನ್ನು ಈ ಚಂಡಮಾರುತ ಸೃಷ್ಟಿ ಮಾಡುತ್ತದೆ. ಹೀಗಾಗಿ ಇದಕ್ಕೆ ಈ ಹೆಸರಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್ ತಾಮ್ರ ಪ್ರತ್ಯಕ್ಷ!
ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್, ಫಿನ್ ಲ್ಯಾಂಡ್ ಎಚ್ಚರಿಕೆ!
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ
Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ
Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್ ಮಾರುವೇಷ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.