![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Sep 12, 2024, 3:13 PM IST
ನವದೆಹಲಿ: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆಯಾಗಿದ್ದಾನೆ.
ಮೆಕ್ಸಿಕನ್ ನಟ ಜೇಮ್ಸ್ ಹಾಲ್‌ಕ್ರಾಫ್ಟ್ (Actor James Hollcroft) ಅವರು ಮೆಕ್ಸಿಕೋ ಸಿಟಿ ನಾಪತ್ತೆಯಾದ ಕೆಲವೇ ದಿನಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜೇಮ್ಸ್ ಅವರಿಗೆ ಕೇವಲ 26 ವರ್ಷ ವಯಸ್ಸಾಗಿತ್ತು.
ಮೂಲಗಳ ಪ್ರಕಾರ ಸೆ.3 ರಿಂದ ಜೇಮ್ಸ್ ಹಾಲ್‌ಕ್ರಾಫ್ಟ್ ನಾಪತ್ತೆಯಾಗಿದ್ದರು. ಅವರು ಯಾವುದೇ ಕುಟುಂಬದ ಸದಸ್ಯರೊಂದಿಗೆ ಸಂಪರ್ಕ ಹೊಂದಿರಲಿಲ್ಲ. ಈ ಸಂಬಂಧ ನಟನ ಕುಟುಂಬಸ್ಥರು ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು.
ಇದೀಗ ಅವರು ಶವವಾಗಿ ಪತ್ತೆಯಾಗಿದ್ದು, ಅವರ ಅಭಿಮಾನಿಗಳು ಹಾಗೂ ಕುಟುಂಬಸ್ಥರಿಗೆ ದೊಡ್ಡ ಆಘಾತವನ್ನೀಡಿದೆ. ನಟನ ಸಾವಿನ ಹಿಂದಿನ ಕಾರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಜೇಮ್ಸ್ ಅವರ ಸಹೋದರಿ ಜೇನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿ ಸಾವಿನ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ. “ನಾನು ನಿನ್ನನ್ನು ಶಾಶ್ವತವಾಗಿ ಪ್ರೀತಿಸುತ್ತೇನೆ. ನೀನು ಯಾವಾಗಲೂ ನಮ್ಮ ಹೃದಯದಲ್ಲಿ ಇರುತ್ತೀರಿ, ಚಿಕ್ಕ ಸಹೋದರ” ಎಂದು ಬರೆದುಕೊಂಡಿದ್ದಾರೆ.
ಮೆಕ್ಸಿಕೋ ಸಿಟಿ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದ ಅವರು, ಟಿವಿ ಶೋ “ಕೊಮೊ ಡೈಸ್ ಎಲ್ ಡಿಚೊ”ನಲ್ಲಿ ಕಾಣಿಸಿಕೊಂಡಿದ್ದರು. ಮೆಕ್ಸಿಕೋ ಸಿಟಿಯ ನಟನಾ ಶಾಲೆಯಲ್ಲಿ ಓದುತ್ತಿದ್ದರು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.