ಕೆನಡಾದಲ್ಲಿ ನಟಿ ರಂಭಾ ಕಾರು ಅಪಘಾತ; ಪುತ್ರಿಗೆ ಗಾಯ,ಆಸ್ಪತ್ರೆಗೆ ದಾಖಲು
Team Udayavani, Nov 1, 2022, 6:00 PM IST
ಟೊರೊಂಟೊ: ಕನ್ನಡ, ತೆಲುಗು, ಹಿಂದಿ ಸೇರಿದಂತೆ ಭಾರತದ ಹಲವು ಭಾಷೆಗಳ ಚಲನಚಿತ್ರಗಳಲ್ಲಿ ನಟಿಸಿರುವ ಚಿತ್ರನಟಿ ರಂಭಾ ಅವರ ಕಾರು ಕೆನಡಾದ ಒಂಟಾರಿಯೊದಲ್ಲಿ ಮಂಗಳವಾರ ಅಪಘಾತಕ್ಕೀಡಾಗಿದೆ.
ಅದರಲ್ಲಿ ರಂಭಾ, ಮೂವರು ಮಕ್ಕಳು ಮತ್ತು ದಾದಿ ಇದ್ದರು. ಅಪಘಾತದಿಂದ ಕಾರಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಒಬ್ಬ ಮಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಈ ಕುರಿತು ಟ್ವೀಟ್ ಮಾಡಿರುವ ನಟಿ ರಂಭಾ, “ನಾನು, ದಾದಿಯೊಂದಿಗೆ ಕಾರಿನಲ್ಲಿ ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿದ್ದೆ. ಈ ವೇಳೆ ಇಂಟರ್‌ಸೆಕ್ಷನ್‌ನಲ್ಲಿ ಮತ್ತೊಂದು ಕಾರು ನಮಗೆ ಡಿಕ್ಕಿ ಹೊಡೆಯಿತು. ಸಣ್ಣ-ಪುಟ್ಟ ಗಾಯಗಳಿಂದ ನಾವು ಬಚಾವಾಗಿದ್ದೇವೆ,’ ಎಂದು ಬರೆದುಕೊಂಡಿದ್ದಾರೆ.
Ouw car was hit by another car at an intersection wayback from picking kids from school! “Me with kids and my nanny” All of us are safe with minor injuries ?my little Sasha is still in the hospital ? bad days bad time ??please pray for us ? your prayers means a lot ?? pic.twitter.com/BqgrNjfdpi
— Rambha Indrakumar (@Rambha_indran) November 1, 2022
2010ರಲ್ಲಿ ಉದ್ಯಮಿ ಇಂದ್ರಕುಮಾರ್ ಪದ್ಮನಾಥನಿನ್ ಅವರನ್ನು ವರಿಸಿದ ರಂಭಾ ಅವರಿಗೆ ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನಿದ್ದಾನೆ. ಅವರು ಪ್ರಸ್ತುತ ಟೊರೊಂಟೊದಲ್ಲಿ ನೆಲೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.