ಆಘ್ಘನ್ ವಿವಿ ಓಪನ್: ಕ್ಯಾಂಪಸ್ ಪ್ರವೇಶಿಸಿದ ವಿದ್ಯಾರ್ಥಿನಿಯರು
Team Udayavani, Feb 4, 2022, 6:55 AM IST
ಜಲಾಲಾಬಾದ್: ಅಫ್ಘಾನಿಸ್ತಾನವು ತಾಲಿಬಾನ್ ವಶವಾದ ಬಳಿಕ ಇದೇ ಮೊದಲ ಬಾರಿಗೆ ವಿಶ್ವವಿದ್ಯಾಲಯಗಳ ಬಾಗಿಲು ತೆರೆದಿದ್ದು, ಹೆಣ್ಣುಮಕ್ಕಳು ಕೂಡ ಮತ್ತೆ ಕಾಲೇಜು ಮೆಟ್ಟಿಲು ಹತ್ತಿದ್ದಾರೆ.
ಈವರೆಗೆ ವಿದ್ಯಾರ್ಥಿಗಳು ಮಾತ್ರ ಕ್ಯಾಂಪಸ್ ಪ್ರವೇಶಿಸಿದ್ದರು. ಆದರೆ, ವಿದ್ಯಾರ್ಥಿನಿಯರಿಗೆ ಮಾತ್ರ ಅನುಮತಿ ಸಿಕ್ಕಿರಲಿಲ್ಲ. ಈಗಲೂ ತಾಲಿಬಾನ್ ಆಡಳಿತದಿಂದ ಅಧಿಕೃತ ಘೋಷಣೆ ಹೊರಬೀಳದಿದ್ದರೂ, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ತರಗತಿಗಳಲ್ಲಿ ಪ್ರತ್ಯೇಕವಾಗಿ ಕುಳಿತುಕೊಳ್ಳಬೇಕು ಎಂಬ ಷರತ್ತಿನೊಂದಿಗೆ ಹೆಣ್ಣುಮಕ್ಕಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಶಿಕ್ಷಣ ಅಧಿಕಾರಿಗಳು ತಿಳಿಸಿದ್ದಾರೆ.
ಜಲಾಲಾಬಾದ್‌ನಲ್ಲಿನ ನಂಗರ್‌ಹಾರ್ ವಿಶ್ವವಿದ್ಯಾಲಯದಲ್ಲಿ ಪ್ರತ್ಯೇಕ ಬಾಗಿಲಿನ ಮೂಲಕ ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಈಗಾಗಲೇ ಕೆಲವು ಖಾಸಗಿ ವಿವಿಗಳು ತೆರೆದಿದ್ದರೂ, ವಿದ್ಯಾರ್ಥಿನಿಯರು ಮಾತ್ರ ಕಾಲೇಜುಗಳತ್ತ ಮುಖ ಮಾಡಿಲ್ಲ.
“ಈಗಾಗಲೇ ತರಗತಿಗಳನ್ನು ಲಿಂಗಾನುಸಾರ ಪ್ರತ್ಯೇಕಿಸಲಾಗಿದೆ. ಆದರೆ, ಪುರುಷ ಉಪನ್ಯಾಸಕರೇ ನಮಗೂ ಪಾಠ ಮಾಡುತ್ತಾರಾ, ತರಗತಿಯ ಹೊರಗೆ ನಾವು ಗಂಡುಮಕ್ಕಳೊಂದಿಗೆ ಮಾತನಾಡಬಹುದಾ ಎಂಬುದನ್ನು ಯಾರೂ ಸ್ಪಷ್ಟಪಡಿಸಿಲ್ಲ’ ಎಂದು ನಂಗರ್‌ಹಾರ್ ವಿವಿಯ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್ ನಿಧನ
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
Jamaica: ನಗ್ನವಾಗಿ ಲಗ್ನವಾದ 29 ಜೋಡಿ
Big Bend: ವಿಶ್ವದ ಅತಿ ಉದ್ದದ ಕಟ್ಟಡ “ದಿ ಬಿಗ್ ಬೆಂಡ್’ ನಿರ್ಮಾಣಕ್ಕೆ ಅಮೆರಿಕ ಸಿದ್ಧತೆ
US; ಮೈಕ್ ವಾಲ್ಟ್ಜ್ ನೂತನ ಭದ್ರತಾ ಸಲಹೆಗಾರ; ಚೀನಾ ವಿರೋಧಿ ನಿಲುವುವುಳ್ಳ ನಾಯಕರಿಗೆ ಅಧಿಕಾರ
MUST WATCH
ಹೊಸ ಸೇರ್ಪಡೆ
Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ
Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ
John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
Udupi: ನ. 14-20: ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.