Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ
Team Udayavani, Jan 10, 2025, 6:55 AM IST
ಹೊಸದಿಲ್ಲಿ: ಅಫ್ಘಾನಿಸ್ಥಾನದಲ್ಲಿ ಭಾರತ ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಅಲ್ಲಿನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಕಿ ತಿಳಿಸಿದ್ದಾರೆ. ದುಬಾೖಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಜತೆಗೆ ಮಾತುಕತೆ ನಡೆಸಿದ ವೇಳೆ ಅವರು ಈ ಅಂಶ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಭಾರತ ಹೊಂದಿರುವ ಕಳವಳ ನಮಗೆ ಅರ್ಥವಾಗುತ್ತದೆ ಎಂದು ಮುತ್ತಾಕಿ ಹೇಳಿದ್ದಾರೆ. ಮಾತುಕತೆ ವೇಳೆ ಅಫ್ಘಾನಿಸ್ಥಾನ ಜನರ ಅಗತ್ಯ ಅಭಿವೃದ್ಧಿಯನ್ನು ಕೈಗೊಳ್ಳಲು ಭಾರತ ಉತ್ಸುಕವಾಗಿದೆ ಎಂದು ಮಿಸ್ರಿ ಹೇಳಿದ್ದಾರೆ. ಅಫ್ಘಾನಿಸ್ಥಾನದಲ್ಲಿ ಕೇಂದ್ರ ಸರಕಾರ ಕೈಗೊಳ್ಳುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. 1999ರ ಬಳಿಕ ಇದೇ ಮೊದಲ ಬಾರಿಗೆ ಅಫ್ಘಾನಿಸ್ಥಾನ ಸರಕಾರದ ಜತೆಗೆ ಕೇಂದ್ರ ಸರಕಾರ ಮಾತುಕತೆ ನಡೆಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.