London: ಹೋಟೆಲ್ನಲ್ಲಿ ಏರ್ ಇಂಡಿಯಾ ಮಹಿಳಾ ಉದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ
Team Udayavani, Aug 18, 2024, 12:31 PM IST
ಲಂಡನ್: ಹೋಟೆಲ್ ಕೊಠಡಿಗೆ ನುಗ್ಗಿದ ಯುವಕನೊಬ್ಬ ಏರ್ ಇಂಡಿಯಾ ಉದ್ಯೋಗಿಯ ಮೇಲೆ ಹಲ್ಲೆ ನಡೆಸಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ದೂರು ದಾಖಲಾಗಿದೆ.
ಏರ್ ಇಂಡಿಯಾ ಸಿಬ್ಬಂದಿ ತಂಗಿದ್ದ ಲಂಡನ್ನ ರಾಡಿಸನ್ ರೆಡ್ ಹೋಟೆಲ್ನಲ್ಲಿ ಮಹಿಳೆಗೆ ಕಿರುಕುಳ ನೀಡಲಾಗಿತ್ತು. ಭದ್ರತೆಯ ಬಗ್ಗೆ ಈಗಾಗಲೇ ಹೋಟೆಲ್ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಏರ್ ಇಂಡಿಯಾ ಸಿಬ್ಬಂದಿ ದೂರಿದ್ದಾರೆ.
ಕೆಲಸ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ಮಹಿಳೆ ಮೇಲೆ ಬೆಳಗಿನ ಜಾವ ಒಂದೂವರೆ ಗಂಟೆಗೆ ದಾಳಿ ನಡೆದಿದೆ. ಕೋಣೆಗೆ ನುಗ್ಗಿದ ದುಷ್ಕರ್ಮಿ ಗಗನಸಖಿಯನ್ನು ಎಳೆದೊಯ್ದು ಕೊಠಡಿಯಲ್ಲಿದ್ದ ಹ್ಯಾಂಗರ್ ನಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ಓಡಿಹೋಗಲು ಯತ್ನಿಸಿದ ವ್ಯಕ್ತಿಯನ್ನು ಮಹಿಳಾ ಸಹೋದ್ಯೋಗಿಗಳು ಹಾಗೂ ಹೋಟೆಲ್ ಸಿಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.
ಇತ್ತ ವಿಮಾನ ಸಿಬ್ಬಂದಿ ಗಾಯಗೊಂಡಿದ್ದು ಆಕೆಗೆ ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಭಾರತಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು ಜೊತೆಗೆ ನಮ್ಮ ಸಿಬ್ಬಂದಿಗೆ ಅಗತ್ಯವಿರುವ ಸಹಾಯವನ್ನು ನಾವು ಮಾಡುತ್ತೇವೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೊಂಡಿದೆ.
ಇದನ್ನೂ ಓದಿ: Copyright Case: ರಕ್ಷಿತ್ಗೆ 20 ಲಕ್ಷ ರೂ. ಠೇವಣಿ ಇಡಲು ದೆಹಲಿ ಹೈಕೋರ್ಟ್ ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.