ರಷ್ಯಾ ವಿಪಕ್ಷ ನಾಯಕ ನವಲ್ನಿಗೆ ವಿಷ ಪ್ರಾಶನ?
ಸೈಬೀರಿಯಾದ ಆಸ್ಪತ್ರೆಯಲ್ಲಿ ಚಿಕಿತ್ಸೆ; ವಿಮಾನದಲ್ಲಿ ಮಾಸ್ಕೋಗೆ ಬರುತ್ತಿದ್ದಾಗ ಏಕಾಏಕಿ ಅಸ್ವಸ್ಥ
Team Udayavani, Aug 21, 2020, 5:58 AM IST
ಮಾಸ್ಕೋ: ರಷ್ಯಾದ ವಿಪಕ್ಷ ರಷ್ಯಾ ಆಫ್ ದ ಫ್ಯೂಚರ್ನ ನಾಯಕ ಅಲೆಕ್ಸಿ ನವಲ್ನಿ (44) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಕೋಮಾದಲ್ಲಿದ್ದಾರೆ. ಅಧ್ಯಕ್ಷ ವ್ಲಾದಿಮಿರ್ ಪುಟಿನ್ರ ಪ್ರಬಲ ಟೀಕಾಕಾರರಾಗಿರುವ ಅವರಿಗೆ ವಿಷ ಉಣಿಸಿರುವ ಸಾಧ್ಯತೆ ಇದೆ ಎಂದು ಅವರ ವಕ್ತಾರೆ ಕಿರಾ ಯರ್ಮೈಶ್ ತಿಳಿಸಿದ್ದಾರೆ. ಅವರು ಸೈಬೀರಿಯಾದ ಒಮ್ಸ್ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
“ಸೈಬೀರಿಯಾದ ಟೋಮ್ಸ್ ನಿಂದ ಮಾಸ್ಕೋಗೆ ವಿಮಾನದಲ್ಲಿ ಬರುತ್ತಿದ್ದಾಗ ಏಕಾಏಕಿ ನವಲ್ನಿ ಅಸ್ವಸ್ಥಗೊಂಡರು. ಹೀಗಾಗಿ ವಿಮಾನವನ್ನು ಒಮಸ್ಕ್ನಲ್ಲಿ ತುರ್ತಾಗಿ ಇಳಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಚಹಾದ ಮೂಲಕ ವಿಷ ನೀಡಿರುವ ಸಾಧ್ಯತೆ ಇದೆ’ ಎಂದು ಕಿರಾ ಟ್ವೀಟ್ ಮಾಡಿದ್ದಾರೆ. ಆದರೆ ಆಸ್ಪತ್ರೆಯ ವೈದ್ಯರು ಮಾಧ್ಯಮಗಳ ಜತೆಗೆ ಮಾತನಾಡಿ ಅಲೆಕ್ಸಿ ನವಲ್ನಿ ಅವರಿಗೆ ವಿಷ ಪ್ರಾಶನ ಮಾಡಲಾಗಿದೆ ಎಂಬ ಅಂಶ ಇದುವರೆಗೆ ದೃಢಪಟ್ಟಿಲ್ಲ ಎಂದಿದ್ದಾರೆ. ಅಲೆಕ್ಸಿ ನವಲ್ನಿ ಅಧ್ಯಕ್ಷ ವ್ಲಾದಿ ಮಿರ್ ಪುಟಿನ್ ನೇತೃತ್ವದ ಯುನೈಟೆಡ್ ರಷ್ಯಾ ಪಕ್ಷ ಕಳ್ಳರು ಮತ್ತು ವಂಚರ ಪಕ್ಷವೆಂದು ದೂರಿ, ಭ್ರಷ್ಟಾಚಾರದ ಆರೋಪ ಮಾಡಿದ್ದರು. 2011ರಲ್ಲಿ ಅವರನ್ನು ಬಂಧಿಸಿ 15 ದಿನಗಳ ಕಾಲ ಕಾರಾಗೃಹದಲ್ಲಿ ಇರಿಸಲಾಗಿತ್ತು. 2013ರಲ್ಲಿ ಪ್ರಕರಣವೊಂದರಲ್ಲಿ ಶಿಕ್ಷೆ ಅನುಭವಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.